ಬೆಳಗಾವಿ : ಪಾಲಿಕೆ ಆರ್ಥಿಕ ಸಂಕಷ್ಟಕ್ಕೆ ಹಿಡನ್‌ ಅಜೆಂಡಾ ಕಾರಣ : ಸಚಿವೆ ಲಕ್ಷ್ಮೀ ಹೆಬ್ಬಾಳಕರ

| Published : Aug 29 2024, 12:58 AM IST / Updated: Aug 29 2024, 12:43 PM IST

Lakshmi Hebbalkar
ಬೆಳಗಾವಿ : ಪಾಲಿಕೆ ಆರ್ಥಿಕ ಸಂಕಷ್ಟಕ್ಕೆ ಹಿಡನ್‌ ಅಜೆಂಡಾ ಕಾರಣ : ಸಚಿವೆ ಲಕ್ಷ್ಮೀ ಹೆಬ್ಬಾಳಕರ
Share this Article
  • FB
  • TW
  • Linkdin
  • Email

ಸಾರಾಂಶ

ಕೆಲವರ ಹಿಡನ್‌ ಅಜೆಂಡಾಗಳಿಂದ ಬೆಳಗಾವಿ ಮಹಾನಗರ ಪಾಲಿಕೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಬೇಸರ ವ್ಯಕ್ತಪಡಿಸಿದರು.

 ಬೆಳಗಾವಿ :  ಕೆಲವರ ಹಿಡನ್‌ ಅಜೆಂಡಾಗಳಿಂದ ಬೆಳಗಾವಿ ಮಹಾನಗರ ಪಾಲಿಕೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಬೇಸರ ವ್ಯಕ್ತಪಡಿಸಿದರು.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದಕ್ಕೆ ಅಧಿಕಾರಿಗಳು ಎಷ್ಟು ಕಾರಣವೊ, ಜನಪ್ರತಿನಿಧಿಗಳು ಅಷ್ಟೇ ಕಾರಣ ಎಂದು ತಿಳಿಸಿದರು.

ಹಿಡನ್ ಅಜೆಂಡಾಗಳಿಂದ ಬೆಳಗಾವಿ ಮಹಾನಗರ ಪಾಲಿಕೆ ಹಾಗೂ ಜನರು ಸಂಕಷ್ಟ ಸಿಲುಕಿದ್ದು, ಒಬ್ಬರ ಮೇಲೆ ಬೊಟ್ಟು ಮಾಡಿ ತೋರಿಸೋಕೆ ಬರೋದಿಲ್ಲ. ಹಿಡನ್ ಅಜೆಂಡಾಗಳಿಂದ ಬೆಳಗಾವಿ ಮಹಾನಗರ ಪಾಲಿಕೆ ಹಾಗೂ ನಗರದ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ. ನಿಸ್ವಾರ್ಥತೆಯಿಂದ ಅಧಿಕಾರಿಗಳು, ಜನಪ್ರತಿನಿಧಿಗಳು ನಾವೆಲ್ಲ ರಾಜಕಾರಣ ಮಾಡಿದರೇ ಬೆಳಗಾವಿಯನ್ನು ಸ್ವರ್ಗ ಮಾಡಬಹುದು. ಹಿಡನ್ ಅಜೆಂಡಾಗಳಿಂದ ಬೆಳಗಾವಿ ಮಹಾನಗರ ಪಾಲಿಕೆ ಸೋರುತ್ತಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಬೆಳಗಾವಿಯನ್ನು ರಾಜ್ಯದ ಅತೀ ದೊಡ್ಡ ಜಿಲ್ಲೆ, ಎರಡನೇ ರಾಜಧಾನಿ ಎಂದು ಹೆಮ್ಮೆಯಿಂದ ಹೇಳುತ್ತೇವೆ. ಬೆಳಗಾವಿ ತಾಲೂಕು ಉಡುಪಿ ಜಿಲ್ಲೆಗಿಂತ ದೊಡ್ಡದು. ಬೆಳಗಾವಿ ತಾಲೂಕಿನಲ್ಲಿ ಏಂಟೂವರೆ ಲಕ್ಷ ಜನಸಂಖ್ಯೆ ಇದ್ದರೇ, ಉಡುಪಿ ಜಿಲ್ಲೆ 9 ಲಕ್ಷ ಜನ ಸಂಖ್ಯೆ ಹೊಂದಿದೆ. ಇಂತಹ ದೊಡ್ಡ ಪಾಲಿಕೆ ಇಂದಿನ ದುಸ್ಥಿತಿಗೆ ಹಿಡನ್ ಅಜೆಂಡಾಗಳೇ ಕಾರಣ ಎಂದರು.

ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಒಡೆತನದ ಸಕ್ಕರೆ ಕಾರ್ಖಾನೆಗೆ ಕಬ್ಬು ಅರೆಯಲು ಕರ್ನಾಟಕ ಪರಿಸರ ಮಂಡಳಿ ಅನುಮತಿ ನಿರಾಕರಿಸಿದ್ದಕ್ಕೆ ದ್ವೇಷ ರಾಜಕೀಯ ಕಾರಣವಲ್ಲ. ಸರ್ಕಾರ ಕಾನೂನು ಪ್ರಕಾರ ಕ್ರಮ ಕೈಗೊಂಡಿದೆ. ದ್ವೇಷ ರಾಜಕಾರಣ ಮಾಡುವ ಅವಶ್ಯಕತೆ ಇಲ್ಲ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಆಗಲಿ, ನಾನಾಗಲಿ ದ್ವೇಷ ರಾಜಕೀಯ ಮಾಡುತ್ತಿಲ್ಲ. ರಾಜಕೀಯ ಲಾಭಕ್ಕಾಗಿ ಸರ್ಕಾರದ ಮೇಲೆ ಇಲ್ಲದ ಸಲ್ಲದ ಆರೋಪ ಮಾಡಲಾಗುತ್ತಿದೆ ಎಂದು ದೂರಿದರು.

ಬಿಜೆಪಿ- ಜೆಡಿಎಸ್‌ ನಾಯಕರ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಬೇಕೆಂದು ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸಾರಥ್ಯದಲ್ಲಿ ಆ.31 ರಂದು ಸಚಿವರು, ಶಾಸಕರಿಂದ ರಾಜಭವನ ಚಲೋ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.