ಫೆಲೋಶಿಪ್ ಆಫ್ ಉಡುಪಿ ಚರ್ಚಸ್ ವತಿಯಿಂದ ಮಿಷನ್ ಕಾಂಪೌಂಡಿನಲ್ಲಿ ಶುಕ್ರವಾರದಿಂದ 3 ದಿನಗಳ ಕಾಲ ನಡೆಯುತ್ತಿರುವ ತಮಿಳ‍ುನಾಡಿನ ಮೋಹನ್ ಸಿ.ಲಾಝರಸ್ ಅವರ ಪ್ರವಚನದ ‘ಸಮಾಧಾನ ಮಹೋತ್ಸವ’ಕ್ಕೆ ಹಿಂದೂ ಸಂಘಟನೆಗಳು ವಿರೋಧ ವ್ಯಕ್ತ ಪಡಿಸಿ, ಕಾರ್ಯಕ್ರಮವನ್ನು ನಡೆಸಲು ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದವು. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮ ಸಂಘಟಕರು ಕಾರ್ಯಕ್ರಮ ನಡೆಸಲು ರಾಜ್ಯ ಹೈಕೋರ್ಟ್ ನಿಂದ ಪರವಾನಿಗೆಯನ್ನು ತಂದಿದ್ದಾರೆ.

ಉಡುಪಿ: ಫೆಲೋಶಿಪ್ ಆಫ್ ಉಡುಪಿ ಚರ್ಚಸ್ ವತಿಯಿಂದ ಮಿಷನ್ ಕಾಂಪೌಂಡಿನಲ್ಲಿ ಶುಕ್ರವಾರದಿಂದ 3 ದಿನಗಳ ಕಾಲ ನಡೆಯುತ್ತಿರುವ ತಮಿಳ‍ುನಾಡಿನ ಮೋಹನ್ ಸಿ.ಲಾಝರಸ್ ಅವರ ಪ್ರವಚನದ ‘ಸಮಾಧಾನ ಮಹೋತ್ಸವ’ಕ್ಕೆ ಹಿಂದೂ ಸಂಘಟನೆಗಳು ವಿರೋಧ ವ್ಯಕ್ತ ಪಡಿಸಿ, ಕಾರ್ಯಕ್ರಮವನ್ನು ನಡೆಸಲು ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದವು. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮ ಸಂಘಟಕರು ಕಾರ್ಯಕ್ರಮ ನಡೆಸಲು ರಾಜ್ಯ ಹೈಕೋರ್ಟ್ ನಿಂದ ಪರವಾನಿಗೆಯನ್ನು ತಂದಿದ್ದಾರೆ. ಮೋಹನ್ ಸಿ.ಲಾಝರಸ್ ಅವರ ಈ ಕಾರ್ಯಕ್ರಮದ ಬಗ್ಗೆ ಜಿಲ್ಲೆಯ ಅಧಿಕಾರಿಗಳಿಗೆ 20 ದಿನಗಳ ಮೊದಲೇ ಮಾಹಿತಿ ನೀಡಲಾಗಿತ್ತು. ಆದರೆ ಕೆಲವೊಂದು ಸಂಘಟನೆಗಳು ಈ ಮಹೋತ್ಸವವನ್ನು ಮಾಡಲು ಬಿಡುವುದಿಲ್ಲ ಎಂಬ ಬೆದರಿಕೆಯನ್ನು ಒಡ್ಡಿದ್ದವು. ಈ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಗಳು ಪ್ರವಚನಕಾರರನ್ನು ಬದಲಾಯಿಸಲು ಸೂಚಿಸಿದ್ದರು. ಆದರೆ ಈ ಕಾರ್ಯಕ್ರಮಕ್ಕೆ ಐದಾರು ತಿಂಗಳಿಂದಲೇ ತಯಾರಿ ಆಗಿದ್ದು ಯಾವುದೇ ರೀತಿಯ ಸಮಸ್ಯೆ ಆಗಬಾರದು ಎಂಬ ನಿಟ್ಟಿನಲ್ಲಿ ಸಂಘಟಕರು ಹೈಕೋರ್ಟಿಗೆ ಮನವಿ ಸಲ್ಲಿಸಿದ್ದರು. ಈಗ ಕಾರ್ಯಕ್ರಮವನ್ನು ನಡೆಸಲು ಹೈಕೋರ್ಟ್ ಅನುಮತಿ ನೀಡಿದೆ ಎಂದು ಭಾರತೀಯ ಕ್ರೈಸ್ತ ಒಕ್ಕೂಟದ ರಾಜ್ಯಾಧ್ಯಕ್ಷ ಪ್ರಶಾಂತ್ ಜತ್ತನ್ನ ತಿಳಿಸಿದ್ದಾರೆ.

ಈ ಮೂಲಕ ನ್ಯಾಯಾಲಯವು ನಮ್ಮ ಮೂಲಭೂತ ಹಕ್ಕುಗಳನ್ನು ಎತ್ತಿ ಹಿಡಿದಿದೆ ಮತ್ತು ಕಾರ್ಯಕ್ರಮಕ್ಕೆ ಸೂಕ್ತ ಭದ್ರತೆಯನ್ನು ಒದಗಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದೆ. ಕ್ರೈಸ್ತ ಬಂಧುಗಳು ಗಾಳಿಸುದ್ದಿಗೆ ಕಿವಿಗೊಡದೆ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಪ್ರಶಾಂತ್ ಜತ್ತನ್ನ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.