ಜಾಮೀನು ರದ್ದು ಕೋರಿ ಎಸ್‌ಐಟಿಮೇಲ್ಮನವಿ: ರೇವಣ್ಣಗೆ ನೋಟಿಸ್‌

| Published : Jun 01 2024, 12:45 AM IST

ಜಾಮೀನು ರದ್ದು ಕೋರಿ ಎಸ್‌ಐಟಿಮೇಲ್ಮನವಿ: ರೇವಣ್ಣಗೆ ನೋಟಿಸ್‌
Share this Article
  • FB
  • TW
  • Linkdin
  • Email

ಸಾರಾಂಶ

ಮನೆ ಕೆಲಸದಾಕೆಯನ್ನು ಅಪಹರಿಸಿದ ಆರೋಪ ಸಂಬಂಧ ವಿಚಾರಣಾ ನ್ಯಾಯಾಲಯ ಮಂಜೂರು ಮಾಡಿರುವ ಜಾಮೀನು ರದ್ದತಿಗೆ ಕೋರಿ ರಾಜ್ಯ ಸರ್ಕಾರ (ಎಸ್‌ಐಟಿ) ಸಲ್ಲಿಸಿರುವ ಅರ್ಜಿ ಸಂಬಂಧ ಮಾಜಿ ಸಚಿವ ಎಚ್‌.ಡಿ. ರೇವಣ್ಣ ಅವರಿಗೆ ಹೈಕೋರ್ಟ್‌ ಶುಕ್ರವಾರ ನೋಟಿಸ್ ಜಾರಿಗೊಳಿಸಿದೆ.

ಬೆಂಗಳೂರು: ಮನೆ ಕೆಲಸದಾಕೆಯನ್ನು ಅಪಹರಿಸಿದ ಆರೋಪ ಸಂಬಂಧ ವಿಚಾರಣಾ ನ್ಯಾಯಾಲಯ ಮಂಜೂರು ಮಾಡಿರುವ ಜಾಮೀನು ರದ್ದತಿಗೆ ಕೋರಿ ರಾಜ್ಯ ಸರ್ಕಾರ (ಎಸ್‌ಐಟಿ) ಸಲ್ಲಿಸಿರುವ ಅರ್ಜಿ ಸಂಬಂಧ ಮಾಜಿ ಸಚಿವ ಎಚ್‌.ಡಿ. ರೇವಣ್ಣ ಅವರಿಗೆ ಹೈಕೋರ್ಟ್‌ ಶುಕ್ರವಾರ ನೋಟಿಸ್ ಜಾರಿಗೊಳಿಸಿದೆ. ಈ ಕುರಿಂತೆ ಎಸ್‌ಐಟಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ನ್ಯಾಯಪೀಠ ಈ ಆದೇಶ ಮಾಡಿತು. ವಿಚಾರಣೆ ವೇಳೆ ಸರ್ಕಾರದ ಪರ ವಿಶೇಷ ಅಭಿಯೋಜಕ ಪ್ರೊ. ರವಿವರ್ಮ ಕುಮಾರ್ ವಾದ ಮಂಡಿಸಿ, ರೇವಣ್ಣ ಅವರ ಮೇಲಿರುವ ಆರೋಪವನ್ನು ಗಂಭೀರವಾಗಿ ಪರಿಗಣಿಸದೆ ಅಧೀನ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ ಎಂದರು. ಈ ವಾದ ಆಲಿಸಿದ ನ್ಯಾಯಪೀಠ, ಮೊದಲು ಪ್ರತಿವಾದಿ ರೇವಣ್ಣ ಅವರಿಗೆ ನೋಟಿಸ್‌ ಜಾರಿಯಾಗಲಿ. ಆ ನಂತರ ಹೆಚ್ಚಿನ ವಿಚಾರಣೆ ನಡೆಸಲಾಗುವುದು ಎಂದು ತಿಳಿಸಿತು.

ಇದು ಸಂಪೂರ್ಣ ದೋಷಪೂರಿತ ಕ್ರಮವಾಗಿದೆ. ಮತ್ತೊಂದೆಡೆ ದೂರು ದಾಖಲಿಸದಂತೆ ಸಂತ್ರಸ್ತೆಯನ್ನು ನಿರ್ಬಂಧಿಸಲಾಗುತ್ತಿದೆ. ಆದ್ದರಿಂದ ಜಾಮೀನು ರದ್ದುಪಡಿಸಬೇಕು ಎಂದು ಕೋರಿದರು.

ನಂತರ ರೇವಣ್ಣಗೆ ನೋಟಿಸ್‌ ಜಾರಿಗೊಳಿಸಿ ವಿಚಾರಣೆಯನ್ನು ಮುಂದೂಡಿತು. ಎಸ್‌ಐಟಿ ಪರ ಅಭಿಯೋಜಕರ ಮನವಿ ಮೇರೆಗೆ ಈ ಅರ್ಜಿಯನ್ನು ಸೋಮವಾರ ಮತ್ತೆ ವಿಚಾರಣೆಗೆ ತೆಗೆದುಕೊಳ್ಳಲು ಪೀಠ ಸಮ್ಮತಿಸಿತು.