ಪುತ್ತೂರು: ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಯಾದ ಪುತ್ತೂರು ಮೂಲದ ಎಸ್.ವಿಶ್ವಜಿತ್ ಶೆಟ್ಟಿ ಅವರು ಶನಿವಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರಿಗೆ ತುಪ್ಪದ ದೀಪ ಹಚ್ಚಿ ಪ್ರಾರ್ಥನೆ ಸಲ್ಲಿಸಿದರು.ದೇವಸ್ಥಾನದ ಪ್ರಧಾನ ಅರ್ಚಕ ವೇ.ಮೂ.ವಿ.ಎಸ್.ಭಟ್ ಅವರು ಪ್ರಾರ್ಥಿಸಿ ಪ್ರಸಾದ ನೀಡಿದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ನ್ಯಾಯಮೂರ್ತಿಗಳನ್ನು ದೇವಳದ ವತಿಯಿಂದ ಸ್ಮರಣಿಕೆ ನೀಡಿ ಗೌರವಿಸಿದರು.ಈ ಸಂದರ್ಭದಲ್ಲಿ ಪುತ್ತೂರು ೫ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಸದಾನಂದ ನಾಗಪ್ಪ ನಾಯಕ್, ೭ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಸುಮಂಗಳಾ, ಪ್ರಧಾನ ಹಿರಿಯ ವ್ಯವಹಾರಿಕ ನ್ಯಾಯಾಲಯದ ನ್ಯಾಯಾಧೀಶೆ ಪ್ರಕೃತಿ ಕಲ್ಯಾಣಪುರ್, ೧ನೇ ಹೆಚ್ಚುವರಿ ಹಿರಿಯ ವ್ಯವಹಾರಿಕ ನ್ಯಾಯಾಲಯದ ನ್ಯಾಯಾಧೀಶ ದೇವರಾಜ್ ವೈ.ಎಚ್., ವಕೀಲರ ಸಂಘದ ಅಧ್ಯಕ್ಷ ಜಗನ್ನಾಥ ರೈ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಬಿ.ಈಶ್ವರ ಬೇಡೇಕರ್, ಕೃಷ್ಣವೇಣಿ, ಮಹಾಬಲ ರೈ ವಳತ್ತಡ್ಕ, ಸುಭಾಷ್ ರೈ ಬೆಳ್ಳಿಪ್ಪಾಡಿ, ದಿನೇಶ್ ಕುಲಾಲ್ ಪಿ.ವಿ. ಉಪಸ್ಥಿತರಿದ್ದರು.