ಸಾರಾಂಶ
ರಾಮನಗರ: ತಾಲೂಕಿನ ಮಾಯಗಾನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಗುರುವಾರ ನಡೆಯಬೇಕಿದ್ದ ಚುನಾವಣೆಗೆ ಹೈಕೋರ್ಟ್ ಬುಧವಾರ ತಡೆಯಾಜ್ಞೆ ನೀಡಿದೆ. ಗ್ರಾಪಂ ಅಧ್ಯಕ್ಷೆ ಆರ್.ಗೀತಾ ಅವರು ಗ್ರಾಮ ಪಂಚಾಯಿತಿ ಅಧ್ಯಕ್ಷರ ಚುನಾವಣೆಗೆ ತಡೆಯಾಜ್ಞೆ ಕೋರಿ ಜು.10ರಂದು ನ್ಯಾಯಾಲಯದ ಮೊರೆ ಹೋಗಿದ್ದರು. ಅವರ ಮನವಿ ಪುರಸ್ಕರಿಸಿ ಮುಂದಿನ ಆದೇಶದವರೆಗೆ ಅಧ್ಯಕ್ಷ ಸ್ಥಾನದ ಚುನಾವಣೆಗೆ ತಡೆಯಾಜ್ಞೆ ನೀಡಿ ನ್ಯಾಯಾಲಯ ಆದೇಶಿಸಿದೆ.
ಏನಿದು ಪ್ರಕರಣ?:ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದು, ಆರ್.ಗೀತಾ ಅಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕಳೆದ ಜೂ.28 ರಂದು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಈ ರಾಜೀನಾಮೆ ಅಂಗೀಕಾರಕ್ಕೆ 10 ದಿನಗಳವರೆಗೆ ಅಂದರೆ ಜು.8ರ ಮಧ್ಯರಾತ್ರಿವರೆಗೂ ಕಾಲಾವಕಾಶವಿತ್ತು. ಆದರೆ, ಉಪ ವಿಭಾಗಾಧಿಕಾರಿಗಳು ಜು.8ರ ಮಧ್ಯಾಹ್ನ 2.30 ಸಮಯಕ್ಕೆ ರಾಜೀನಾಮೆ ಅಂಗೀಕಾರ ಮಾಡಿದ್ದಾರೆ. ಹಾಗಾಗಿ ಅವಧಿ ಮುಕ್ತಾಯಕ್ಕೂ ಮುನ್ನವೇ ನನ್ನ ರಾಜೀನಾಮೆ ಅಂಗೀಕರಿಸಿರುವ ಕ್ರಮ ಸರಿಯಲ್ಲ ಎಂದು ಆರ್.ಗೀತಾ ನ್ಯಾಯಾಲಯದ ಮೊರೆ ಹೋಗಿದ್ದರು. ಈ ಮನವಿಯನ್ನು ಪುರಸ್ಕರಿಸಿ ನ್ಯಾಯಾಲಯ ಚುನಾವಣೆಗೆ ತಡೆ ನೀಡಿದೆ.
ಫೋಟೋ: 24ಕೆಆರ್ ಎಂಎನ್ 8.ಜೆಪಿಜಿಮಾಯಗಾನಹಳ್ಳಿ ಗ್ರಾಪಂ ಕಾರ್ಯಾಲಯ.