ವರ್ಷಗಳ ಬಳಿಕ ಈಡೇರಿದ ಹೈಟೆಕ್‌ ಮೀನು ಮಾರುಕಟ್ಟೆ ಬೇಡಿಕೆ

| Published : Feb 17 2024, 01:15 AM IST

ವರ್ಷಗಳ ಬಳಿಕ ಈಡೇರಿದ ಹೈಟೆಕ್‌ ಮೀನು ಮಾರುಕಟ್ಟೆ ಬೇಡಿಕೆ
Share this Article
  • FB
  • TW
  • Linkdin
  • Email

ಸಾರಾಂಶ

ಈ ಬಾರಿ ರಾಜ್ಯ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭದ್ರಾವತಿಯಲ್ಲಿ ಅತ್ಯಾಧುನಿಕ ಮೀನು ಮಾರುಕಟ್ಟೆ ನಿರ್ಮಾಣ ಮಾಡುವುದಾಗಿ ಘೋಷಿಸಿದ್ದಾರೆ. ನಗರಸಭೆ ವತಿಯಿಂದ ನಗರದ ಬಿ.ಎಚ್. ರಸ್ತೆ ಚಾಮೇಗೌಡ ಏರಿಯಾ ಗೌಳಿಗರ ಬೀದಿಯಲ್ಲಿ ನಿರ್ಮಿಸಲಾಗಿರುವ ಮೀನು ಮಾರುಕಟ್ಟೆ ಕಿರಿದಾಗಿದೆ. ಮೂಲ ಸೌಕರ್ಯಗಳಿಲ್ಲದೇ ಸಾಕಷ್ಟು ಸಮಸ್ಯೆಗಳು ಎದುರಾಗಿವೆ. ಈ ಹಿನ್ನೆಲೆಯಲ್ಲಿ ಕಳೆದ ಹಲವಾರು ವರ್ಷಗಳಿಂದ ಸುಸಜ್ಜಿತ ಮೀನು ಮಾರುಕಟ್ಟೆ ನಿರ್ಮಾಣಕ್ಕೆ ಬೇಡಿಕೆ ಇತ್ತು.

ಭದ್ರಾವತಿ: ಈ ಬಾರಿ ರಾಜ್ಯ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭದ್ರಾವತಿಯಲ್ಲಿ ಅತ್ಯಾಧುನಿಕ ಮೀನು ಮಾರುಕಟ್ಟೆ ನಿರ್ಮಾಣ ಮಾಡುವುದಾಗಿ ಘೋಷಿಸಿದ್ದಾರೆ. ನಗರಸಭೆ ವತಿಯಿಂದ ನಗರದ ಬಿ.ಎಚ್. ರಸ್ತೆ ಚಾಮೇಗೌಡ ಏರಿಯಾ ಗೌಳಿಗರ ಬೀದಿಯಲ್ಲಿ ನಿರ್ಮಿಸಲಾಗಿರುವ ಮೀನು ಮಾರುಕಟ್ಟೆ ಕಿರಿದಾಗಿದೆ. ಮೂಲ ಸೌಕರ್ಯಗಳಿಲ್ಲದೇ ಸಾಕಷ್ಟು ಸಮಸ್ಯೆಗಳು ಎದುರಾಗಿವೆ. ಈ ಹಿನ್ನೆಲೆಯಲ್ಲಿ ಕಳೆದ ಹಲವಾರು ವರ್ಷಗಳಿಂದ ಸುಸಜ್ಜಿತ ಮೀನು ಮಾರುಕಟ್ಟೆ ನಿರ್ಮಾಣಕ್ಕೆ ಬೇಡಿಕೆ ಇತ್ತು.

ಅಲ್ಲದೇ, ಬಿ.ಎಚ್. ರಸ್ತೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿ ಮುಂಭಾಗ ಖಾಲಿ ಇರುವ ಜಾಗದಲ್ಲಿ ಮೀನು ತುಂಬಿದ ವಾಹನಗಳು ನಿಲ್ಲುವುದರಿಂದ ಸಾಕಷ್ಟು ಸಮಸ್ಯೆಗಳು ಎದುರಾಗುತ್ತಿದೆ. ಈ ಸಂಬಂಧ ಹಲವಾರು ದೂರುಗಳು ಸಲ್ಲಿಕೆಯಾಗಿದ್ದವು. ಈ ನಡುವೆ ಬಹುತೇಕ ಮೀನುಗಾರರು ರಸ್ತೆ ಬದಿಯಲ್ಲಿ ಮೀನು ಮಾರುತ್ತಿದ್ದು, ನಗರದ ಸ್ವಚ್ಛತೆಗೂ ಧಕ್ಕೆಯಾಗುತ್ತಿದೆ.

ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆಯಿಂದ ಈ ಹಿಂದಿನ ಪೌರಾಯುಕ್ತ ಪರಮೇಶ್ ನೇತೃತ್ವದಲ್ಲಿ ವಾರ್ಡ್ ನಂ.2ರ ಕವಲಗುಂದಿ ಎ.ಕೆ. ಕಾಲೋನಿಯಲ್ಲಿ ಮೀನು ಮಾರುಕಟ್ಟೆ ನಿರ್ಮಾಣಕ್ಕೆ 1 ಎಕರೆ ಸ್ಥಳ ಕಾಯ್ದಿರಿಸಿ, ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.

ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮ ಅಧ್ಯಕ್ಷರೂ ಆಗಿರುವ ಶಾಸಕ ಬಿ.ಕೆ. ಸಂಗಮೇಶ್ವರ್ ಅವರು ಅನುದಾನ ಬಿಡುಗಡೆಗೊಳಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ಇದೀಗ ಬಜೆಟ್‌ನಲ್ಲಿ ಹೈಟೆಕ್ ಮೀನು ಮಾರುಕಟ್ಟೆ ನಿರ್ಮಾಣ ಮಾಡುವುದಾಗಿ ಘೋಷಿಸಲಾಗಿದೆ. ಆದರೆ ಅನುದಾನ ಇನ್ನೂ ನಿಗದಿಯಾಗಿಲ್ಲ.

- - - (-ಸಾಂದರ್ಭಿಕ ಚಿತ್ರ.)

ಫಿಶ್‌ ಮಾರ್ಕೆಟ್‌.ಜೆಪಿಜಿ: