ಹೇಮಾವತಿ ನದಿಗೆ ಹೆಚ್ಚಿನ ನೀರು ಬಿಡುಗೆ ಸಂಭವ; ನದಿ ಪಾತ್ರದ ಜನರಿಗೆ ಎಚ್ಚರಿಕೆ

| Published : Jul 19 2024, 12:45 AM IST

ಸಾರಾಂಶ

ಹೇಮಾವತಿ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯ ಗೊರೂರು ಜಲಾಶಯದಿಂದ ಯಾವುದೇ ಕ್ಷಣದಲ್ಲಿಯಾದರೂ ಹೇಮಾವತಿ ನದಿಗೆ ನೀರು ಬಿಡುವ ಸಂಭವವಿದೆ. ನದಿ ಪಾತ್ರದ ಜನ ಎಚ್ಚರಿಕೆಯಿಂದ ಇರುವಂತೆ ಹೇಮಾವತಿ ಜಲಾಶಯ ಯೋಜನೆಯ ಅಧೀಕ್ಷಕ ಎಂಜಿನಿಯರ್ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ

ಹೇಮಾವತಿ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯ ಗೊರೂರು ಜಲಾಶಯದಿಂದ ಯಾವುದೇ ಕ್ಷಣದಲ್ಲಿಯಾದರೂ ಹೇಮಾವತಿ ನದಿಗೆ ನೀರು ಬಿಡುವ ಸಂಭವವಿದೆ. ನದಿ ಪಾತ್ರದ ಜನ ಎಚ್ಚರಿಕೆಯಿಂದ ಇರುವಂತೆ ಹೇಮಾವತಿ ಜಲಾಶಯ ಯೋಜನೆಯ ಅಧೀಕ್ಷಕ ಎಂಜಿನಿಯರ್ ತಿಳಿಸಿದ್ದಾರೆ.

ಗುರುವಾರ ಬೆಳಗ್ಗೆ 6 ಗಂಟೆಗೆ ಜಲಾಶಯಕ್ಕೆ 30,547 ಕ್ಯುಸೆಕ್ ನೀರು ಹರಿದು ಬರುತ್ತಿದೆ. 2922.00 ಅಡಿ ಗರಿಷ್ಠ ನೀರಿನ ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಇಂದು 2912.55 ಅಡಿ ನೀರಿದೆ. ಇನ್ನೂ 9.45 ಅಡಿಗಳಷ್ಟು ಪ್ರಮಾಣದ ನೀರನ್ನು ಜಲಾಶಯದಲ್ಲಿ ಸಂಗ್ರಹಿಸಬಹುದಾಗಿದೆ.

ಆದರೆ, ಜಲಾನಯನ ಪ್ರದೇಶದಲ್ಲಿ ಅತಿ ಹೆಚ್ಚು ಮಳೆಯಾಗುತ್ತಿರುವುದರಿಂದ ಜಲಾಶಯದ ಒಳ ಹರಿವವಿನ ಪ್ರಮಾಣ ಮತ್ತಷ್ಟು ಹೆಚ್ಚುವ ಸಂಭವವಿರುವುದರಿಂದ ಜಲಾಶಯದಿಂದ ಯಾವುದೇ ಕ್ಷಣದಲ್ಲಿಯಾದರೂ ಹೆಚ್ಚಿನ ಪ್ರಮಾಣದ ನೀರನ್ನು ಹೊರ ಬಿಡಲಾಗುವುದು. ಆದ್ದರಿಂದ ಹೇಮಾವತಿ ನದಿ ಪಾತ್ರ, ನದಿ ದಂಡೆ ಮತ್ತು ನದಿಯ ಆಸುಪಾಸಿನಲ್ಲಿ ವಾಸಿಸುವ ಎಲ್ಲಾ ಗ್ರಾಮಸ್ಥರು, ಸ್ಥಳೀಯ ವಾಸಿಗಳು ಮುನ್ನೆಚ್ಚರಿಕೆಯ ಕ್ರಮವಾಗಿ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ವಿನಂತಿಸಲಾಗಿದೆ.

ನೀರಾವರಿ ಇಲಾಖೆಯ ಅಧಿಕಾರಿಗಳು, ತಹಸೀಲ್ದಾರರು ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಸೇರಿದಂತೆ ಇತರೆ ಎಲ್ಲಾ ಅಧಿಕಾರಿಗಳು ಈ ಬಗ್ಗೆ ತುರ್ತು ಗಮನ ಹರಿಸಿ ಹೇಮಾವತಿ ನದಿ ಪಾತ್ರದ ಜನರಿಗೆ ಸೂಕ್ತ ತಿಳಿವಳಿಕೆ ನೀಡಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಹೇಮಾವತಿ ಜಲಾಶಯ ಯೋಜನೆ ಅಧೀಕ್ಷಕ ಇಂಜಿನಿಯರ್ ಹೇಳಿದ್ದಾರೆ.ಮಳೆಯಿಂದ ಕೆಸರು ಗದ್ದೆಯಾದ ರಸ್ತೆ ಅಭಿವೃದ್ಧಿಗೆ ಗ್ರಾಮಸ್ಥರ ಆಗ್ರಹ

ಭಾರತೀನಗರ:ಯಡಗನಹಳ್ಳಿಯ ಮುಖ್ಯರಸ್ತೆ ಮಳೆಯಿಂದಾಗಿ ಕೆಸರು ಗದ್ದೆಯಂತಾಗಿದ್ದು, ರಸ್ತೆ ಅಭಿವೃದ್ಧಿ ಪಡಿಸುವಂತೆ ಜನಪ್ರತಿನಿಧಿಗಳನ್ನು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಕಾಡುಕೊತ್ತನಹಳ್ಳಿ, ಭಾರತೀನಗರ ಗ್ರಾಮಗಳಿಗೆ ಸಂಚರಿಸಲು ಈ ರಸ್ತೆಯನ್ನೇ ಅವಲಂಬಿಸಿದ್ದಾರೆ. ಜೊತೆಗೆ ಗ್ರಾಮದ ಶಾಲೆಗಳಿಗೆ ವಿದ್ಯಾರ್ಥಿಗಳು ಪ್ರತೀನಿತ್ಯ ಇದೇ ರಸ್ತೆಯಲ್ಲಿ ಓಡಾಡಬೇಕಾಗಿದೆ. ಕೆಸರು ಗದ್ದೆಯಂತಿರುವ ಈ ರಸ್ತೆಯಲ್ಲೇ ಶಾಲಾ ಮಕ್ಕಳು ಸಂಚರಿಸುವ ದುಸ್ಥಿತಿ ಎದುರಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.ವಾಹನ ಸವಾರರು ರಸ್ತೆಯಲ್ಲಿ ಸಂಚರಿಸಲು ಅರ ಸಾಹಸ ಪಡುತ್ತಿದ್ದಾರೆ. ಸಂಚರಿಸುವ ವೇಳೆ ಎಲ್ಲಿ ಜಾರಿ ಬೀಳುತ್ತೇವೋ ಎನ್ನುವ ಪರಿಸ್ಥಿರಿ ಬಂದೋದಗಿದೆ. ಈಗಾಗಲೇ ಸಾಕಷ್ಟು ಮಂದಿ ಬಿದ್ದು ಗಾಯಮಾಡಿಕೊಂಡಿದ್ದಾರೆ. ಸ್ಥಳೀಯ ಜನಪ್ರತಿನಿಧಿಗಳು ಮತ್ತು ಶಾಸಕರು ಇತ್ತ ಕಡೆ ಕೂಡಲೇ ಗಮನ ಹರಿಬೇಕು ಎಂದು ಗ್ರಾಮಸ್ಥರಾದ ವೈ.ಟಿ.ಸಂತೋಷ್, ವೈ.ಇ.ಪ್ರಸನ್ನ, ವೈ.ಇ.ಪ್ರವೀಣ್‌ಕುಮಾರ್ ಒತ್ತಾಯಿಸಿದ್ದಾರೆ.

ತಕ್ಷಣವೇ ರಸ್ತೆ ದುರಸ್ಥಿ ಕಾರ್ಯಮಾಡಿಸಲು ಕ್ರಮಕೈಗೊಳ್ಳಬೇಕು. ಇಲ್ಲದಿದ್ದರೆ ರಸ್ತೆಯಲ್ಲೇ ನಾಟಿ ಮಾಡಿ ಬೆಳೆ ಬೆಳೆಯಬೇಕಾಗುತ್ತದೆ ಎಂದು ಗ್ರಾಮಸ್ಥರು ಎಚ್ಚರಿಸಿದ್ದಾರೆ.