ಚಿಕ್ಕಮಗಳೂರುಜಿಲ್ಲೆಯ ರೈತರಿಗೆ 2025-26ನೇ ಸಾಲಿನಲ್ಲಿ ಒಟ್ಟು ₹266 ಕೋಟಿ ಬೆಳೆ ವಿಮೆ ಮೊತ್ತ ಪಾವತಿಸಲಾಗಿದೆ. ಕಳೆದ ಒಂದು ದಶಕದಲ್ಲಿ ಇದೇ ಮೊದಲ ಬಾರಿಗೆ ಇಷ್ಟು ದೊಡ್ಡ ಮೊತ್ತದ ಬೆಳೆ ವಿಮೆ ಪರಿಹಾರ ರೈತರಿಗೆ ದೊರೆತಿದೆ ಎಂದು ಜಿಲ್ಲಾಧಿಕಾರಿ ಭನ್ವರ್ ಸಿಂಗ್ ಮೀನಾ ತಿಳಿಸಿದರು.
ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು
ಜಿಲ್ಲೆಯ ರೈತರಿಗೆ 2025-26ನೇ ಸಾಲಿನಲ್ಲಿ ಒಟ್ಟು ₹266 ಕೋಟಿ ಬೆಳೆ ವಿಮೆ ಮೊತ್ತ ಪಾವತಿಸಲಾಗಿದೆ. ಕಳೆದ ಒಂದು ದಶಕದಲ್ಲಿ ಇದೇ ಮೊದಲ ಬಾರಿಗೆ ಇಷ್ಟು ದೊಡ್ಡ ಮೊತ್ತದ ಬೆಳೆ ವಿಮೆ ಪರಿಹಾರ ರೈತರಿಗೆ ದೊರೆತಿದೆ ಎಂದು ಜಿಲ್ಲಾಧಿಕಾರಿ ಭನ್ವರ್ ಸಿಂಗ್ ಮೀನಾ ತಿಳಿಸಿದರು.ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಜಿಲ್ಲೆಯಲ್ಲಿ 47,790 ವಿಮಾ ಪ್ರಸ್ತಾವನೆಗಳಿಗೆ ಸಂಬಂಧಿಸಿ ದಂತೆ ಸುಮಾರು 45,686 ಹೆಕ್ಟೇರ್ ಪ್ರದೇಶದ ಬೆಳೆಗಳಿಗೆ ವಿಮೆ ಮೊತ್ತ ಪಾವತಿಸಲಾಗಿದೆ. ಕಳೆದ ಹತ್ತು ವರ್ಷಗಳ ಅವಧಿ ಯಲ್ಲಿ ಒಂದೇ ಸಾಲಿನಲ್ಲಿ ಇಷ್ಟೊಂದು ಮೊತ್ತದ ಬೆಳೆ ವಿಮೆ ಪಾವತಿಯಾಗಿರುವುದು ಇದೇ ಮೊದಲು ಎಂದರು.ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ (RWBCIS) ಅಡಿ ಚಿಕ್ಕಮಗಳೂರು ಜಿಲ್ಲೆ ಯಲ್ಲಿ ಹಸಿಮೆಣಸಿನಕಾಯಿ, ಕರಿಮೆಣಸು, ಅಡಕೆ, ದಾಳಿಂಬೆ ಹಾಗೂ ಮಾವು ಬೆಳೆಗಳಿಗೆ ವಿಮೆ ಸೌಲಭ್ಯ ಕಲ್ಪಿಸಲಾಗಿತ್ತು. ಯೋಜನೆಯಡಿ ನೋಂದಾಯಿಸಿದ ರೈತರಿಗೆ ಮಳೆ, ತಾಪಮಾನ, ಗಾಳಿ, ಆರ್ದ್ರತೆ, ಅತಿವೃಷ್ಟಿ ಹಾಗೂ ಒಣಹವೆಯಂತಹ ಪ್ರತಿಕೂಲ ಹವಾಮಾನದಿಂದ ಉಂಟಾಗುವ ಬೆಳೆ ನಷ್ಟಕ್ಕೆ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶ ಹೊಂದಲಾಗಿದೆ ಎಂದರು.ಈ ಬಾರಿ ಜಿಲ್ಲೆಯಲ್ಲಿ ವಿವಿಧ ಕಾರಣಗಳಿಂದ ಬೆಳೆ ನಷ್ಟ ಸಂಭವಿಸಿದ್ದು, ಮಳೆ ಮಾಪನ ಕೇಂದ್ರಗಳಲ್ಲಿ ದಾಖಲಾದ ಹವಾ ಮಾನ ದತ್ತಾಂಶಗಳ ಆಧಾರದ ಮೇಲೆ ವಿಮೆ ಮೊತ್ತ ಲೆಕ್ಕಹಾಕಿ ರೈತರ ಖಾತೆಗಳಿಗೆ ಪಾವತಿಸಲಾಗಿದೆ ಎಂದು ವಿವರಿಸಿದರು.2026-27ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ದಾಖಲೆ 65,608 ರೈತರು ಬೆಳೆ ವಿಮೆ ಯೋಜನೆಯಡಿ ನೋಂದಣಿ ಮಾಡಿಕೊಂಡಿ ದ್ದಾರೆ. ಈ ರೈತರು ಒಟ್ಟು ₹24.85 ಕೋಟಿ ಪ್ರೀಮಿಯಂ ಮೊತ್ತ ಪಾವತಿಸಿದ್ದಾರೆ ಎಂದು ಮಾಹಿತಿ ನೀಡಿದರು.