ಗದಗ ನಗರದ ಹೊರ ಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ 63ಕ್ಕೆ 2012ರಲ್ಲಿ ಕೃಷಿಯೇತರ ಜಮೀನನ್ನು ಸ್ವಾಧೀನ ಪಡಿಸಿಕೊಳ್ಳಲಾಗಿತ್ತು. ಪ್ರತಿ ಚದರ ಮೀಟರ್‌ಗೆ ಪ್ರಾಧಿಕಾರವು ₹ 1800 ನಿಗದಿಪಡಿಸಿತ್ತು. ಇದನ್ನು ಪ್ರಶ್ನಿಸಿ 20 ಜನರು ಜಿಲ್ಲಾಧಿಕಾರಿ ನ್ಯಾಯಾಲಯದ ಮೊರೆ ಹೋಗಿದ್ದರು.
ಧಾರವಾಡ:
ರೈತರಿಗೆ ಭೂ-ಸ್ವಾಧೀನದ ಪರಿಹಾರ ನೀಡದ ಹಿನ್ನೆಲೆಯಲ್ಲಿ ಇಲ್ಲಿಯ ವಿದ್ಯಾಗಿರಿಯಲ್ಲಿ ಇರುವ ರಾಷ್ಟ್ರೀಯ ಹೆದ್ದಾರಿ ಕಚೇರಿಯನ್ನು ನ್ಯಾಯಾಲಯದ ಆದೇಶದಂತೆ ಜಪ್ತಿ ಮಾಡಲಾಯಿತು.ಜಿಲ್ಲಾ ಪ್ರಧಾನ ನ್ಯಾಯಾಲಯದ ಆದೇಶದಂತೆ ಶುಕ್ರವಾರ ಕಚೇರಿಯ ಪೀಠೋಪಕರಣ, ಕಂಪ್ಯೂಟರ್, ವಾಹನ ಜಪ್ತಿ ಮಾಡಲಾಯಿತು.
ಗದಗ ನಗರದ ಹೊರ ಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ 63ಕ್ಕೆ 2012ರಲ್ಲಿ ಕೃಷಿಯೇತರ ಜಮೀನನ್ನು ಸ್ವಾಧೀನ ಪಡಿಸಿಕೊಳ್ಳಲಾಗಿತ್ತು. ಪ್ರತಿ ಚದರ ಮೀಟರ್‌ಗೆ ಪ್ರಾಧಿಕಾರವು ₹ 1800 ನಿಗದಿಪಡಿಸಿತ್ತು. ಇದನ್ನು ಪ್ರಶ್ನಿಸಿ 20 ಜನರು ಜಿಲ್ಲಾಧಿಕಾರಿ ನ್ಯಾಯಾಲಯದ ಮೊರೆ ಹೋಗಿದ್ದರು. ವಿಚಾರಣೆ ನಡೆದು ಅಲ್ಲಿ ಪ್ರತಿ ಚದರ ಮೀಟರ್‌ಗೆ ₹ 3400 ನಿಗದಿಪಡಿಸಿ ಆದೇಶಿಸಲಾಗಿತ್ತು. ಆದರೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಧಾರವಾಡ ಜಿಲ್ಲಾ ನ್ಯಾಯಾಲಯದಲ್ಲಿ ಗದಗ ಜಿಲ್ಲಾಧಿಕಾರಿಗಳ ಆದೇಶವನ್ನು ಪ್ರಶ್ನಿಸಿತ್ತು. ಅಲ್ಲೂ ಜಿಲ್ಲಾಧಿಕಾರಿ ಆದೇಶ ಎತ್ತಿ ಹಿಡಿದು ಪರಿಹಾರ ನೀಡಲು ನ್ಯಾಯಾಲಯ ಸೂಚಿಸಿತ್ತು. ನ್ಯಾಯಾಲಯದ ಆದೇಶದಂತೆ ಪ್ರಾಧಿಕಾರವು ಪರಿಹಾರ ನೀಡಿದ್ದು, 2022ರಿಂದ ಅದಕ್ಕೆ ಬಡ್ಡಿ ಮಾತ್ರ ನೀಡಿರಲಿಲ್ಲ. ಇದನ್ನು ಪ್ರಶ್ನಿಸಿ 20 ಜನರು ಮತ್ತೆ ನ್ಯಾಯಾಲಯದ ಮೊರೆ ಹೋಗಿದ್ದರು.ರೈತರಿಗೆ ಪಾವತಿ ಆಗಬೇಕಿರುವ ₹ 10 ಕೋಟಿ ಬಡ್ಡಿ ಹಣ ನೀಡದ ಹಿನ್ನೆಲೆಯಲ್ಲಿ ನ್ಯಾಯಾಲಯದ ಆದೇಶದಂತೆ ಕೋರ್ಟ್ ಸಿಬ್ಬಂದಿಯು ಶುಕ್ರವಾರ ಕಚೇರಿಯನ್ನು ಜಪ್ತಿ ಮಾಡಿತು.