ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಸಚಿವ ಹಾಗೂ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ತೀವ್ರ ವಾಗ್ದಾಳಿ ನಡೆಸಿದ್ದು, ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಸರ್ಕಾರ ಇದೀಗ ಹಾಲು ಮತ್ತು ಬಸ್ ಪ್ರಯಾಣ ದರ ಏರಿಸುವ ಮೂಲಕ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕುತ್ತಿದೆ ಎಂದು ಆರೋಪಿಸಿದ್ದಾರೆ.
ಕಾರ್ಕಳ : ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಸಚಿವ ಹಾಗೂ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ತೀವ್ರ ವಾಗ್ದಾಳಿ ನಡೆಸಿದ್ದು, ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಸರ್ಕಾರ ಇದೀಗ ಹಾಲು ಮತ್ತು ಬಸ್ ಪ್ರಯಾಣ ದರ ಏರಿಸುವ ಮೂಲಕ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕುತ್ತಿದೆ ಎಂದು ಆರೋಪಿಸಿದ್ದಾರೆ.
ಒಂದು ಲೀಟರ್ ಹಾಲಿನ ದರವನ್ನು ₹ 8 ಹೆಚ್ಚಿಸಿ ವಾರ ಕಳೆಯುವ ಮೊದಲೇ ಬಸ್ ಪ್ರಯಾಣ ದರವನ್ನು ಶೇ.23ರಿಂದ 35ರಷ್ಟು ಹೆಚ್ಚಿಸಲಾಗಿದೆ. ಇದರಿಂದ ಜನಸಾಮಾನ್ಯರ ಮೇಲೆ ಮತ್ತಷ್ಟು ಆರ್ಥಿಕ ಹೊರೆ ಬಿದ್ದಿದೆ. ಇದು ಗ್ಯಾರಂಟಿ ಸರ್ಕಾರವಲ್ಲ, ರಾಬರಿ ಸರ್ಕಾರ ಎಂಬುದು ಮತ್ತೊಮ್ಮೆ ಸಾಬೀತಾಗಿದೆ ಎಂದು ಅವರು ಟೀಕಿಸಿದ್ದಾರೆ.ಬಸ್ ಪ್ರಯಾಣ ದರ ಏರಿಕೆಯನ್ನು ಪ್ರಶ್ನಿಸಿದಾಗ ಕೇಂದ್ರ ಸರ್ಕಾರ ಇಂಧನ ಬೆಲೆ ಇಳಿಸಿದರೆ ರಾಜ್ಯದಲ್ಲಿ ಬಸ್ ದರ ಇಳಿಸುವುದಾಗಿ ಮುಖ್ಯಮಂತ್ರಿ ನೀಡಿರುವ ಉತ್ತರ ಉಡಾಫೆಯಿಂದ ಕೂಡಿದೆ. ಪ್ರತಿಯೊಂದು ಬೆಲೆ ಏರಿಕೆಗೂ ಕೇಂದ್ರ ಸರ್ಕಾರವನ್ನು ಹೊಣೆ ಮಾಡಿ ರಾಜ್ಯ ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳುವುದು ಸರಿಯಲ್ಲ ಎಂದು ಆಕ್ಷೇಪಿಸಿದ್ದಾರೆ.ಗ್ಯಾರಂಟಿಗಳ ಹೆಸರಿನಲ್ಲಿ ಅಧಿಕಾರಕ್ಕೆ ಬಂದು, ಒಂದೆಡೆ ಹಾಲಿನ ದರ ಮತ್ತೊಂದೆಡೆ ಬಸ್ ಪ್ರಯಾಣ ದರ ಹೆಚ್ಚಿಸುವುದೇ ಕಾಂಗ್ರೆಸ್ ಸರ್ಕಾರದ ಸಾಧನೆಯೇ? ಜನರಿಗೆ ಬೆಲೆ ಏರಿಕೆಯ ಹೊರೆ ಹೊರಿಸುವ ಜನವಿರೋಧಿ ನೀತಿಗಳಿಗೆ ಜನರೇ ತಕ್ಕ ಉತ್ತರ ನೀಡಲಿದ್ದಾರೆ ಎಂದು ವಿ. ಸುನಿಲ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.