ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಗೆ ಹಿಮಾನಿ ಆಯ್ಕೆ

| Published : Dec 05 2024, 12:34 AM IST

ಸಾರಾಂಶ

ಮಂಡ್ಯ ನಗರದ ಕಾರ್ಮೆಲ್ ಕಾನ್ವೆಂಟ್‌ನ ವಿದ್ಯಾರ್ಥಿನಿ ಹಿಮಾನಿ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಮೈಸೂರಿನಲ್ಲಿ ನಡೆದ 17 ವರ್ಷದೊಳಗಿನ ರಾಜ್ಯ ಮಟ್ಟದ ಬಾಲಕ-ಬಾಲಕಿಯರ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಕನ್ನಡಪ್ರಭ ವಾರ್ತೆ ಮಂಡ್ಯ

ನಗರದ ಕಾರ್ಮೆಲ್ ಕಾನ್ವೆಂಟ್‌ನ ವಿದ್ಯಾರ್ಥಿನಿ ಹಿಮಾನಿ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಮೈಸೂರಿನಲ್ಲಿ ನಡೆದ 17 ವರ್ಷದೊಳಗಿನ ರಾಜ್ಯ ಮಟ್ಟದ ಬಾಲಕ-ಬಾಲಕಿಯರ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 10ನೇ ತರಗತಿ ಓದುತ್ತಿರುವ ಹಿಮಾನಿ ಡಿ.9ರಿಂದ 11ರವರೆಗೆ ದೆಹಲಿಯಲ್ಲಿ ನಡೆಯುವ ಎಸ್‌ಜಿಎಫ್‌ಐ ರಾಷ್ಟ್ರಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಮಂಡ್ಯ ಜಿಲ್ಲೆಯ ಪ್ರತಿನಿಧಿಯಾಗಿ ಭಾಗವಹಿಸುವರು. ಕರಾಟೆ ತರಬೇತಿದಾರ ಡಾ.ಶಿಹಾನ್ ವಿನಯ್ ಕುಮಾರ್ ಸೇರಿದಂತೆ ಶಾಲೆ ಆಡಳಿತ ಮಂಡಳಿ ಅಭಿನಂದಿಸಿದೆ.ಡಿ.6 ರಿಂದ 23 ರವರೆಗೆ ಉದರ ದರ್ಶಕ ಶಸ್ತ್ರ ಚಿಕಿತ್ಸಾ ಶಿಬಿರ

ಮಂಡ್ಯ: ಜಿಲ್ಲಾ ಪಂಚಾಯ್ತಿ , ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಡಿ.6ರಿಂದ 23 ರವರೆಗೆ ಜಿಲ್ಲೆಯ ವಿವಿಧೆಡೆ ಉದರ ದರ್ಶಕ ಶಸ್ತ್ರ ಚಿಕಿತ್ಸಾ ಶಿಬಿರವನ್ನು ಆಯೋಜಿಸಲಾಗಿದೆ.

ಡಿ.6ರಂದು ಮಂಡ್ಯ ಕೆರಗೋಡು ಪ್ರಾಥಮಿಕ ಆರೋಗ್ಯ ಕೇಂದ್ರ, ಡಿ.7ರಂದು ಕೀಲಾರ ಸರ್ಕಾರಿ ಆರೋಗ್ಯ ಕೇಂದ್ರ, ಡಿ.10 ರಂದು ಕೆ.ಆರ್.ಪೇಟೆ ತಾಲೂಕು ಆಸ್ಪತ್ರೆ, ಡಿ.11ರಂದು ಪಾಂಡವಪುರ ಉಪ ವಿಭಾಗ ಸರ್ಕಾರಿ ಆರೋಗ್ಯ ಕೇಂದ್ರ, ಡಿ.13 ರಂದು ಶ್ರೀರಂಗಪಟ್ಟಣ ತಾಲೂಕು ಅರಕೆರೆ ಸರ್ಕಾರಿ ಆರೋಗ್ಯ ಕೇಂದ್ರ, ಡಿ.17ರಂದು ಮದ್ದೂರು ತಾಲೂಕು ಕೆ.ಎಂ.ದೊಡ್ಡಿ ಸರ್ಕಾರಿ ಆರೋಗ್ಯ ಕೇಂದ್ರ, ಡಿ.18 ರಂದು ನಾಗಮಂಗಲ ತಾಲೂಕು ಬಿಂಡಿಗನವಿಲೆ ಸರ್ಕಾರಿ ಆರೋಗ್ಯ ಕೇಂದ್ರ ಹಾಗೂ ಮಧ್ಯಾಹ್ನ 1 ಗಂಟೆಗೆ ನಾಗಮಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ, ಡಿ.19 ರಂದು ಮದ್ದೂರು ತಾಲೂಕು ಆಸ್ಪತ್ರೆ, ಡಿ.20 ರಂದು ಮಂಡ್ಯ ತಾಲೂಕು ಶಿವಳ್ಳಿ ಸರ್ಕಾರಿ ಆರೋಗ್ಯ ಕೇಂದ್ರ, ಡಿ.21 ರಂದು ಮಳವಳ್ಳಿ ಯ ಕಿರುಗಾವಲು ಸರ್ಕಾರಿ ಆರೋಗ್ಯ ಕೇಂದ್ರ, ಡಿ. 23 ರಂದು ಪಾಂಡವಪುರ ತಾಲೂಕು ಚಿನಕುರಳಿ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಬೆಳಗ್ಗೆ 10 ಗಂಟೆಗೆ ಉದರ ದರ್ಶಕ ಶಸ್ತ್ರ ಚಿಕಿತ್ಸಾ ಶಿಬಿರ ನಡೆಯಲಿದೆ ಎಂದು ಜಿಲ್ಲಾ ಪಂಚಾಯತ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ತಿಳಿಸಿದ್ದಾರೆ.