ಬೆಳಗಾವಿ ಯ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಬಂಧಿಯಾಗಿರುವ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ 14ನೇ ಆರೋಪಿ ಪ್ರದೂಷ್‌ಗೆ ವಿಪರೀತ ಚಳಿ ಕಾಡುತ್ತಿದೆ.
ಬೆಳಗಾವಿ : ಇಲ್ಲಿನ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಬಂಧಿಯಾಗಿರುವ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ 14ನೇ ಆರೋಪಿ ಪ್ರದೂಷ್‌ಗೆ ವಿಪರೀತ ಚಳಿ ಕಾಡುತ್ತಿದೆ. ಬೆಳಗಾವಿಯಲ್ಲಿ ಅತೀಯಾದ ತಂಪು ವಾತಾವರಣ ಇದೆ.
ಹಾಗಾಗಿ, ಚಳಿಯಿಂದ ಕಂಗಾಲಾಗಿದ್ದಾನೆ ಎನ್ನಲಾಗಿದೆ. ಮನೆಯವರನ್ನು ನೆನೆದು ಕಣ್ಣೀರು ಹಾಕುತ್ತಿರುವ ಪ್ರದೂಷ್ ತಂಪು ವಾತಾವರಣದಿಂದ ಸರಿಯಾಗಿ ನಿದ್ದೆ ಮಾಡದೇ ಪರದಾಡುತ್ತಿದ್ದಾನೆ ಎಂದು ಮೂಲಗಳು ತಿಳಿಸಿವೆ.
ನಾಲ್ಕುದಿನಗಳಿಂದ ಸರಿಯಾಗಿ ಊಟ ಮಾಡಿಲ್ಲ. ಬೆಳಗಾವಿ ಚಳಿಗೆ ಹೈರಾಣಾಗಿದ್ದಾನೆ ಎಂದು ಮೂಲಗಳಿಂದ ತಿಳಿದುಬಂದಿದೆ.
