ಸಾರಾಂಶ
ಬುಧವಾರ ಬೆಳಿಗ್ಗೆ 10.30ಕ್ಕೆ ನಗರದ ಬಿಜಿಎಸ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆಕನ್ನಡಪ್ರಭ ವಾರ್ತೆ ತುಮಕೂರುಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ನಿರಂತರ ದೌರ್ಜನ್ಯ, ಹಿಂದೂ ದೇವಾಲಯಗಳ ಧ್ವಂಸದಂತಹ ಕೃತ್ಯಗಳನ್ನು ಖಂಡಿಸಿ ಬುಧವಾರ ನಗರದಲ್ಲಿ ಹಿಂದೂ ಹಿತರಕ್ಷಣಾ ವೇದಿಕೆಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ವಿವಿಧ ಮಠಾಧೀಶರು, ಸಂಘಟನೆಗಳ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ. ಈ ಹೋರಾಟ ಬೆಂಬಲಿಸಿ ವಿವಿಧ ಮಠಗಳ ಸ್ವಾಮೀಜಿಗಳು, ಸಂಘ ಸಂಸ್ಥೆಗಳ ಮುಖಂಡರು ಮಂಗಳವಾರ ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಹೋರಾಟ ಬೆಂಬಲಿಸಿ ಪ್ರತಿಭಟನೆಯಲ್ಲಿ ಭಾಗವಹಿಸುವುದಾಗಿ ಹೇಳಿದರು.ಬೆಟ್ಟದಹಳ್ಳಿ ಗವಿ ಮಠದ ಚಂದ್ರಶೇಖರ ಸ್ವಾಮೀಜಿ ಮಾತನಾಡಿ ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ಹಿಂಸಾತ್ಮಕ ಕೃತ್ಯಗಳನ್ನು ಖಂಡಿಸುತ್ತೇವೆ ಎಂದರು. ಜಗತ್ತಿನಲ್ಲಿ ಶಾಂತಿ ಸ್ಥಾಪನೆಗೆ ಧರ್ಮಗುರುಗಳು ಸಂದೇಶ ನೀಡಬೇಕು, ಬಾಂಗ್ಲಾದಲ್ಲಿ ಹಿಂಸೆಯ ಕೃತ್ಯದಲ್ಲಿ ಭಾಗವಹಿಸಿದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಂಡು ಶಾಂತಿ ಕಾಪಾಡಬೇಕು. ಬಾಂಗ್ಲಾ ಸರ್ಕಾರ ಹಿಂದೂಗಳನ್ನು, ಅವರ ಆಸ್ತಿಪಾಸ್ತಿ, ಸ್ವಾತಂತ್ರ್ಯವನ್ನು ರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿದರು.
ತಂಗನಹಳ್ಳಿ ಮಠದ ಬಸವ ಮಹಾಲಿಂಗ ಸ್ವಾಮೀಜಿ, ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಯಾವುದೇ ನಾಗರೀಕ ಸಮಾಜ ತಲೆ ತಗ್ಗಿಸುವಂತದ್ದು, ಕೂಡಲೇ ಅಲ್ಲಿ ದುಷ್ಕೃತ್ಯಗಳನ್ನು ನಿಲ್ಲಿಸಬೇಕು. ಅಲ್ಲಿನ ಹಿಂದೂಗಳು ಶಾಂತಿಯಿಂದ ಬಾಳುವ ವಾತಾವರಣ ಕಲ್ಪಿಸಬೇಕು. ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಕೊಡಬೇಕು ಎಂದು ಹೇಳಿದರು.ಬುಧವಾರ ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿಗಳ ನೇತೃತ್ವದಲ್ಲಿ ನಗರದಲ್ಲಿ ಪ್ರತಿಭಟನೆ ನಡೆಯಲಿದೆ. ಎಲ್ಲಾ ಸಮಾಜದವರು, ಸಂಘಟನೆಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಹೋರಾಟಕ್ಕೆ ಕೈಜೋಡಿಸಬೇಕು ಎಂದು ಸ್ವಾಮೀಜಿ ಕರೆ ನೀಡಿದರು.ಬೆಳ್ಳಾವಿ ಕಾರದ ಮಠದ ಕಾರದ ವೀರಬಸವ ಸ್ವಾಮೀಜಿ ಮಾತನಾಡಿ, ಡಾ.ಬಿ.ಆರ್. ಅಂಬೇಡ್ಕರ್ ಹೇಳಿದಂತೆ ಸರ್ವರೂ ಸಮಾನವಾಗಿ ಬಾಳಲು ಅವಕಾಶ ಸಿಗಬೇಕು. ಬಾಂಗ್ಲಾ ದೇಶದಲ್ಲಿ ಹಿಂದುಗಳ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದೆ. ಇದು ಅಮಾನವೀಯ ಇಂತಹ ಕೃತ್ಯಗಳನ್ನು ತಕ್ಷಣ ತಡೆದು ಹಿಂದೂಗಳು ನೆಮ್ಮದಿಯಿಂದ ಬದುಕಲು ಅವಕಾಶ ನೀಡಬೇಕು ಎಂದರು. ದೊಡ್ಡಗುಣಿ ಮಠದ ರೇವಣ್ಣಸಿದ್ಧ ಶಿವಾಚಾರ್ಯ ಸ್ವಾಮೀಜಿ, ಹಿಂದೂ ಹಿತರಕ್ಷಣಾ ವೇದಿಕೆಯ ಸಹ ಸಂಚಾಲಕ ಬಿ.ಜಿ.ಪ್ರದೀಪ್‌ಕುಮಾರ್ ಮಾತನಾಡಿ, ಬಾಂಗ್ಲಾ ವಿಮೋಚನಾ ಹೋರಾಟದಲ್ಲಿ ಭಾಗಿಯಾದ ಕುಟುಂಬದವರಿಗೆ ಅಲ್ಲಿನ ಪ್ರಧಾನಿಯಾಗಿದ್ದ ಶೇಖ್ ಹಸೀನಾ ಸರ್ಕಾರ ಮೀಸಲಾತಿ ನೀಡಿದ್ದನ್ನು ವಿರೋಧಿಸಿ ಶುರುವಾದ ಹೋರಾಟ, ಶೇಖ್ ಹಸೀನಾರ ಪದಚ್ಯುತಿ ನಂತರ ಅಲ್ಪಸಂಖ್ಯಾತ ಹಿಂದುಗಳತ್ತ ತಿರುಗಿದೆ. ನಿತ್ಯಾ ಅಲ್ಲಿನ ಹಿಂದುಗಳನ್ನು ಗುರಿಯಾಗಿಸಿಕೊಂಡು ದೌರ್ಜನ್ಯ ಮಾಡಲಾಗುತ್ತಿದೆ. ಇಸ್ಕಾನ್‌ನ ಚಿನ್ಮಯ ಕೃಷ್ಣದಾಸ್ ಅವರನ್ನು ಬಂಧಿಸಿ ವಿರುದ್ಧ ಕೇಸು ದಾಖಲಿಸಿರುವುದು ಖಂಡನೀಯ ಎಂದರು.ಹಿಂದೂ ಹಿತರಕ್ಷಣಾ ವೇದಿಕೆ ನೇತೃತ್ವದಲ್ಲಿ ಬುಧವಾರ ಬೆಳಿಗ್ಗೆ 10.30ಕ್ಕೆ ನಗರದ ಬಿಜಿಎಸ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ನಂತರ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಪತ್ರ ನೀಡಲಾಗುವುದು. ಹಲವು ಮಠಗಳ ಸ್ವಾಮೀಜಿಗಳು ವಿವಿಧ ಸಮಾಜದ ಮುಖಂಡರು, ಸಂಘಸಂಸ್ಥೆಗಳು ಈ ಹೋರಾಟಕ್ಕೆ ಬೆಂಬಲ ಸೂಚಿಸಿ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರದೀಪ್‌ಕುಮಾರ್ ಹೇಳಿದರು.ರಾಮೇನಹಳ್ಳಿ ಮಠದ ಶಿವಪಂಚಾಕ್ಷರಿ ಸ್ವಾಮೀಜಿ, ಮಾಜಿ ಸಚಿವ ಸೊಗಡು ಶಿವಣ್ಣ, ನಗರ ವೀರಶೈವ ಸಮಾಜ ಸೇವಾ ಸಮಿತಿ ಅಧ್ಯಕ್ಷ ಟಿ.ಬಿ.ಶೇಖರ್, ಕನ್ನಡ ಸೇನೆ ಜಿಲ್ಲಾಧ್ಯಕ್ಷ ಧನಿಯಾಕುಮಾರ್, ಮುಖಂಡರಾದ ಪಂಚಾಕ್ಷರಯ್ಯ, ನೇತಾಜಿ ಮೋಹನ್‌ಕುಮಾರ್, ಪಚ್ಚೇಶ್ ಅಣೇಕಾರ್, ಕೆ.ಪಿ.ಮಹೇಶ್, ರಾಮಚಂದ್ರರಾವ್, ಶೀತಕಲ್ ಕೃಷ್ಣಯ್ಯ, ಶಬ್ಬೀರ್ ಅಹ್ಮದ್ ಮೊದಲಾದವರು ಭಾಗವಹಿಸಿದ್ದರು.