ಇಂದು ಚನ್ನಗಿರಿಯಲ್ಲಿ ಹಿಂದೂ ಏಕತಾ ಗಣಪತಿ ವಿಸರ್ಜನೆ

| Published : Sep 15 2024, 02:00 AM IST

ಇಂದು ಚನ್ನಗಿರಿಯಲ್ಲಿ ಹಿಂದೂ ಏಕತಾ ಗಣಪತಿ ವಿಸರ್ಜನೆ
Share this Article
  • FB
  • TW
  • Linkdin
  • Email

ಸಾರಾಂಶ

ಚನ್ನಗಿರಿ ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಹಿಂದೂ ಏಕತಾ ಗಣಪತಿ ಸೇವಾ ಸಮಿತಿ ವತಿಯಿಂದ ಪ್ರತಿಷ್ಠಾಪನೆ ಮಾಡಿರುವ ಗಣಪತಿ ವಿಸರ್ಜನಾ ಮೆರವಣಿಗೆ ಸೆ.15ರಂದು ನಡೆಯಲಿದೆ. ಈ ಹಿನ್ನೆಲೆ ಪಟ್ಟಣದಲ್ಲಿ ಭಾರಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ ಎಂದು ಡಿವೈಎಸ್‌ಪಿ ರುದ್ರಪ್ಪ ಎಸ್. ಉಜ್ಜನಕೊಪ್ಪ ತಿಳಿಸಿದ್ದಾರೆ.

- ಬಿಗಿ ಪೊಲೀಸ್ ಬಂದೋಬಸ್ತ್‌: ಡಿವೈಎಸ್‌ಪಿ । ಭದ್ರತಾ ವ್ಯವಸ್ಥೆ ಪರಿಶೀಲಿಸಿದ ಎಸ್‌ಪಿ - - -

ಬಾಕ್ಸ್‌ * ಭದ್ರತಾ ವ್ಯವಸ್ಥೆ - ಮೂವರು ಡಿವೈಎಸ್‌ಪಿ, 6 ಸರ್ಕಲ್ ಇನ್‌ಸ್ಪೆಕ್ಟರ್‌

- 12 ಸಬ್ ಇನ್‌ಸ್ಪೆಕ್ಟರ್‌, 20 ಎಎಸ್‌ಐಗಳು

- 108 ಪೊಲೀಸ್ ಕಾನ್‌ಸ್ಟೇಬಲ್‌ಗಳು,

- 211 ಗೃಹ ರಕ್ಷಕ ದಳ ಸಿಬ್ಬಂದಿ

- 2 ಕೆಎಸ್‌ಆರ್‌ಪಿ, 4 ಡಿಎಆರ್ ತುಕಡಿಗಳು

- - - ಕನ್ನಡಪ್ರಭವಾರ್ತೆ, ಚನ್ನಗಿರಿ

ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಹಿಂದೂ ಏಕತಾ ಗಣಪತಿ ಸೇವಾ ಸಮಿತಿ ವತಿಯಿಂದ ಪ್ರತಿಷ್ಠಾಪನೆ ಮಾಡಿರುವ ಗಣಪತಿ ವಿಸರ್ಜನಾ ಮೆರವಣಿಗೆ ಸೆ.15ರಂದು ನಡೆಯಲಿದೆ. ಈ ಹಿನ್ನೆಲೆ ಪಟ್ಟಣದಲ್ಲಿ ಭಾರಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ ಎಂದು ಡಿವೈಎಸ್‌ಪಿ ರುದ್ರಪ್ಪ ಎಸ್. ಉಜ್ಜನಕೊಪ್ಪ ತಿಳಿಸಿದ್ದಾರೆ.

ಗಣಪತಿ ಮೆರವಣಿಗೆ ಸಾಗುವ ಮಾರ್ಗದಲ್ಲಿ ಯಾವುದೇ ತೊಂದರೆಗಳಾಗದಂತೆ, ಕಾನೂನು ಸುವ್ಯವಸ್ಥೆ ಕಾಪಾಡಲು ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಅಗತ್ಯ ಪೊಲೀಸ್ ಸಿಬ್ಬಂದಿ ನಿಯೋಜನೆಗೊಳಿಸಲಾಗಿದೆ. ಮೂವರು ಡಿವೈಎಸ್‌ಪಿ, 6 ಸರ್ಕಲ್ ಇನ್‌ಸ್ಪೆಕ್ಟರ್‌, 12 ಸಬ್ ಇನ್‌ಸ್ಪೆಕ್ಟರ್‌, 20 ಎಎಸ್‌ಐಗಳು, 108 ಪೊಲೀಸ್ ಕಾನ್‌ಸ್ಟೇಬಲ್‌ ಗಳು, 211 ಗೃಹ ರಕ್ಷಕ ದಳ ಸಿಬ್ಬಂದಿ ಜೊತೆ ಕೆ.ಎಸ್.ಆರ್.ಪಿ 2 ತುಕಡಿಗಳು, ಡಿ.ಎ.ಆರ್.ನ 4 ತುಕಡಿಗಳು ಬಂದೊಬಸ್ತ್‌ಗಾಗಿ ನಿಯೋಜನೆ ಮಾಡಲಾಗಿದೆ ಎಂದ ಅವರು, ಗಣೇಶ ಮೂರ್ತಿ ರಾಜಬೀದಿ ಉತ್ಸವ ನಡೆಯುವ ಮಾರ್ಗದ ಉದ್ದಕ್ಕೂ ಡ್ರೋಣ್ ಕ್ಯಾಮರಾ ಕಾರ್ಯಾಚರಣೆ ನಡೆಸಲಿದೆ ಎಂದು ಹೇಳಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಶನಿವಾರ ಪಟ್ಟಣಕ್ಕೆ ಭೇಟಿ ನೀಡಿದ್ದು, ಗಣಪತಿ ಮೆರವಣಿಗೆ ಹಾದುಹೋಗುವ ಮಾರ್ಗಗಳಲ್ಲಿ ಸಂಚಾರ ನಡೆಸಿ, ಭದ್ರತಾ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಬೇರೆ ವಾಹನಗಳ ಓಡಾಟಕ್ಕೆ ಯಾವುದೇ ತೊಂದರೆ ಆಗದಂತೆ ಪರ್ಯಾಯ ಸಂಚಾರ ಮಾರ್ಗಗಳನ್ನು ಗುರುತಿಸಲು ಪೊಲೀಸ್ ವರಿಷ್ಠಾಧಿಕಾರಿಗಳು ಸಲಹೆ ನೀಡಿದ್ದು, ಅದರಂತೆ ಪೂರ್ಣ ಪ್ರಮಾಣದ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂದು ಡಿವೈಎಸ್‌ಪಿ ರುದ್ರಪ್ಪ ಎಸ್. ಉಜ್ಜನಕೊಪ್ಪ ತಿಳಿಸಿದ್ದಾರೆ.

- - - -14ಕೆಸಿಎನ್‌ಜಿ1:

ಹಿಂದೂ ಏಕತಾ ಗಣಪತಿ ವಿಸರ್ಜನೆ ಹಿನ್ನೆಲೆ ಚನ್ನಗಿರಿ ಪಟ್ಟಣದ ಆಯಕಟ್ಟಿನ ಪ್ರದೇಶಗಳಲ್ಲಿ ಶನಿವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಭೇಟಿ ನೀಡಿ ಭದ್ರತಾ ವ್ಯವಸ್ಥೆ ಪರಿಶೀಲನೆ ನಡೆಸಿದರು.