ಸಾರಾಂಶ
ಅರಾಜಕ ಬಾಂಗ್ಲಾದೇಶದಲ್ಲಿರುವ ಹಿಂದುಗಳ ಮತ್ತು ಅಲ್ಲಿನ ಹಿಂದು ದೇವಾಲಯಗಳ ರಕ್ಷಣೆಗೆ ಭಾರತ ಮಧ್ಯಪ್ರವೇಶ ಮಾಡಬೇಕು ಎಂದು ಹಿಂದು ಜನಜಾಗೃತಿ ಸಮಿತಿ, ಪ್ರಧಾನ ಮಂತ್ರಿ ಅವರಿಗೆ ಜಿಲ್ಲಾಡಳಿತದ ಮೂಲಕ ಮನವಿ ಸಲ್ಲಿಸಿದೆ.
ಕನ್ನಡಪ್ರಭ ವಾರ್ತೆ ಉಡುಪಿ
ಅರಾಜಕ ಬಾಂಗ್ಲಾದೇಶದಲ್ಲಿರುವ ಹಿಂದುಗಳ ಮತ್ತು ಅಲ್ಲಿನ ಹಿಂದು ದೇವಾಲಯಗಳ ರಕ್ಷಣೆಗೆ ಭಾರತ ಮಧ್ಯಪ್ರವೇಶ ಮಾಡಬೇಕು ಎಂದು ಹಿಂದು ಜನಜಾಗೃತಿ ಸಮಿತಿ, ಪ್ರಧಾನ ಮಂತ್ರಿ ಅವರಿಗೆ ಜಿಲ್ಲಾಡಳಿತದ ಮೂಲಕ ಮನವಿ ಸಲ್ಲಿಸಿದೆ.ಬಾಂಗ್ಲಾದೇಶದಲ್ಲಿ ಉದ್ದೇಶಪೂರ್ವಕವಾಗಿ ಹಿಂದುಗಳನ್ನು ಗುರಿ ಮಾಡಲಾಗುತ್ತಿದ್ದು, ಅವರನ್ನು ಬಹಿರಂಗವಾಗಿ ಹತ್ಯೆ ಮಾಡುವುದು, ಹಿಂದೂಗಳ ಮನೆಯ ಮೇಲೆ ದಾಳಿ ಮಾಡುವುದು, ಹಿಂದೂಗಳ ಅಂಗಡಿಗಳನ್ನು ಲೂಟಿ ಮಾಡುವುದು, ಹಿಂದೂಗಳ ದೇವಸ್ಥಾನಗಳು ಧ್ವಂಸಗೊಳಿಸುವುದು, ಬೆಂಕಿ ಹಚ್ಚುವುದು, ಹಿಂದೂ ಮಹಿಳೆಯರ ಮೇಲೆ ಬಲಾತ್ಕಾರ ಮಾಡುವುದು, ಹಿಂದೂಗಳನ್ನು ಸ್ಥಳಾಂತರಿಸುವುದು ಮುಂತಾದ ದೌರ್ಜನ್ಯಗಳು ನಡೆಯುತ್ತಿವೆ. ಇದರಿಂದಾಗಿ ಅಲ್ಲಿಯ ಅಲ್ಪಸಂಖ್ಯಾತ ಹಿಂದೂಗಳಲ್ಲಿ ಭಯದ ವಾತಾವರಣ ಉದ್ಭವಿಸಿದೆ.
ಈ ಹಿನ್ನೆಲೆಯಲ್ಲಿ ಭಾರತ ಸರ್ಕಾರ ತಕ್ಷಣ ಮಧ್ಯಸ್ಥಿಕೆ ವಹಿಸಿ, ಬಾಂಗ್ಲಾದೇಶದ ಹಿಂದೂಗಳಿಗೆ ರಕ್ಷಣೆ ಒದಗಿಸಬೇಕು ಮತ್ತು ಆತಂಕವನ್ನು ದೂರ ಮಾಡಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಹಾಗೂ ಜಿಲ್ಲೆಯ ಎಲ್ಲ ತಾಲೂಕುಗಳ ತಹಸೀಲ್ದಾರರ ಮೂಲಕ ಪ್ರಧಾನ ಮಂತ್ರಿಗಳಿಗೆ ಮನವಿಯನ್ನು ಸಲ್ಲಿಸಲಾಯಿತು.