- ಮಾನವ ಸರಪಣಿ ಮಾಡಿ ಪ್ರತಿಭಟನೆ
ಕನ್ನಡಪ್ರಭ ವಾರ್ತೆ ಚಾಮರಾಜನಗರಶಿವಾಜಿ ಜಯಂತಿ ಮೆರವಣಿಗೆ ಸಂದರ್ಭದಲ್ಲಿ ಬಾಗಲಕೋಟೆಯಲ್ಲಿ ಕಲ್ಲು ತೂರಾಟ ಮಾಡಿದ ವ್ಯಕ್ತಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಚಾಮರಾಜನಗರ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರು ಪ್ರತಿಭಟಣೆ ನಡೆಸಿದರು.
ನಗರದ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಿಂದ ಪ್ರತಿಭಟನಾಕಾರರು ಮೆರವಣಿಗೆಯಲ್ಲಿ ಭುವನೇಶ್ವರಿ ವೃತ್ತಕ್ಕೆ ತೆರಳಿ ಮಾನವ ಸರಪಳಿ ಮಾಡಿ ಕಿಡಿಗೇಡಿಗಳ ವಿರುದ್ಧ ಆಕ್ರೋಶ ಹೊರಹಾಕಿದರು. ಈ ವೇಳೆ ಹಿಂದೂ ಜಾಗರಣಾ ವೇದಿಕೆಯ ಶಾಂತಕುಮಾರ್ ಮಾತನಾಡಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಹಿಂದುಗಳ ಹಬ್ಬಗಳ ಆಚರಣೆಗೆ ಅಡ್ಡಿಯಾಗಿದೆ. ಇತ್ತೀಚೆಗೆ ಹಲವೆಡೆ ಕಿಡಿಗೇಡಿಗಳು ಮೆರವಣಿಗೆಯಲ್ಲಿ ಕಲ್ಲು ತೂರಿರುವ ಘಟನೆಗಳು ನಡೆದಿದೆ. ಮೆರವಣಿಗೆಗೆ ಅಡ್ಡಿ ಪಡಿಸಿದ ವ್ಯಕ್ತಿಗಳ ಮೇಲೆ ಕಾನೂನು ಕ್ರಮವಹಿಸಿ ಘಟನೆಗೆ ಉತ್ತೇಜನ ನೀಡಿದ ಮೌಲಿಗಳನ್ನು ಪೋಲಿಸರು ವಶಕ್ಕೆ ಪಡೆಯಬೇಕು ಎಂದು ಒತ್ತಾಯಿಸಿದರು.ಪ್ರತಿಭಟನೆಯಲ್ಲಿ ಮರಾಠ ಸಮುದಾಯದ ಅಧ್ಯಕ್ಷ ವಂಕಟರಾವ್ ಸಾಠೆ, ವಿರಾಟ್‌ಶಿವು, ಬುಲೆಟ್‌ಚಂದ್ರು, ಚಂದ್ರಶೇಖರ ರಾವ್, ಕೂಸಣ್ಣ, ಪಾಪುರಂಗಸ್ವಾಮಿ, ಸುಂದರರಾಜ್, ಚಿದಂಬರ ಸೇರಿ ಹಲವರಿದ್ದರು.
----
21ಸಿಎಚ್ಎನ್9