ಪ್ರತಿಭಟನೆಯ ನೇತೃತ್ವ ವಹಿಸಿದ್ದ ಹಿಂದೂ ಸಂಘಟನೆ ಮುಖಂಡ ರಾಜು ಖಾನಪ್ಪನವರ ಮಾತನಾಡಿ, ಕೋಗಿಲು ಬಡಾವಣೆಯ ವಿಷಯದಲ್ಲಿ ಸರ್ಕಾರ ಒಂದು ವರ್ಗದ ಓಲೈಕೆಗೆ ನಿಂತಿದೆ ಎಂದು ಆರೋಪಿಸಿದರು.
ಗದಗ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ ಎಂದು ಆರೋಪಿಸಿ ಹಿಂದೂ ಸಂಘಟನೆಗಳ ಒಕ್ಕೂಟದ ವತಿಯಿಂದ ನಗರದಲ್ಲಿ ಬುಧವಾರ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ಸರ್ಕಾರದ ವೈಫಲ್ಯ ಖಂಡಿಸಿ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸುವ ಮೂಲಕ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ನಗರದ ಮುಳಗುಂದ ನಾಕಾದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ನೂರಾರು ಕಾರ್ಯಕರ್ತರು, ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.ರಾಜ್ಯದಲ್ಲಿ ಸರಣಿ ಅಹಿತಕರ ಘಟನೆಗಳು ನಡೆಯುತ್ತಿದ್ದರೂ ಸರ್ಕಾರ ಮೌನವಾಗಿದೆ ಎಂದು ಪ್ರತಿಭಟನಾಕಾರರು ದೂರಿದರು.ಪ್ರತಿಭಟನೆಯ ನೇತೃತ್ವ ವಹಿಸಿದ್ದ ಹಿಂದೂ ಸಂಘಟನೆ ಮುಖಂಡ ರಾಜು ಖಾನಪ್ಪನವರ ಮಾತನಾಡಿ, ಕೋಗಿಲು ಬಡಾವಣೆಯ ವಿಷಯದಲ್ಲಿ ಸರ್ಕಾರ ಒಂದು ವರ್ಗದ ಓಲೈಕೆಗೆ ನಿಂತಿದೆ. ಬಳ್ಳಾರಿಯಲ್ಲಿ ನಡೆದ ಬ್ಯಾನರ್ ಗಲಾಟೆ ಸರ್ಕಾರದ ಪ್ರಾಯೋಜಿತ ಸಂಚು. ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದ ಅಲ್ಲಿನ ಎಸ್‌ಪಿಯವರನ್ನು ಎತ್ತಂಗಡಿ ಮಾಡಿರುವುದು ಖಂಡನೀಯ. ಗನ್‌ಮ್ಯಾನ್‌ಗಳ ಮೂಲಕ ರೆಡ್ಡಿ ಸಹೋದರರ ಹತ್ಯೆಗೆ ಸ್ಕೆಚ್ ಹಾಕಲಾಗಿತ್ತು.ರೈತರ ಮೇಲೆ ಹಲ್ಲೆ ಮಾಡಿದ ಶಿರಹಟ್ಟಿ ಪಿಎಸ್‌ಐ ಈರಪ್ಪ ರಿತ್ತಿ ಅವರ ರಕ್ಷಣೆಗೆ ಸರ್ಕಾರ ನಿಂತಿರುವುದು ಸರಿಯಲ್ಲ. ಓಂ ಶಕ್ತಿ ಮಾಲಾಧಾರಿಗಳ ಮೇಲೆ ನಡೆದ ಹಲ್ಲೆಯನ್ನು ಒಕ್ಕೂಟ ತೀವ್ರವಾಗಿ ಖಂಡಿಸುತ್ತದೆ ಎಂದರು. ಬಳಿಕ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಯಿತು.ಇಂದು ಶಿರೋಳದಲ್ಲಿ ಜಾನುವಾರುಗಳ ಪ್ರದರ್ಶನ
ನರಗುಂದ: ತಾಲೂಕಿನ ಶಿರೋಳ ಗ್ರಾಮದ ತೋಂಟದಾರ್ಯ ಮಠದ ರೊಟ್ಟಿ ಜಾತ್ರೆ ಪ್ರಯುಕ್ತ ಜ. 8ರಂದು ಬೆಳಗ್ಗೆ 10 ಗಂಟೆಗೆ ಸಹಾಯಕ ಕೃಷಿ ಇಲಾಖೆ, ಪಶುಪಾಲನೆ ಮತ್ತು ಪಶುವೈದ್ಯ ಸೇವಾ ಇಲಾಖೆ, ಹಾಲು ಉತ್ಪಾದಕರ ಸಹಕಾರಿ ಸಂಘ, ಗುರುಬಸವ ಕಲ್ಯಾಣ ಸಂಸ್ಥೆಯ ಆಶ್ರಯದಲ್ಲಿ ಕೃಷಿ ಪ್ರಾತ್ಯಕ್ಷಿತೆ ಹಾಗೂ ಜಾನುವಾರುಗಳ ಪ್ರದರ್ಶನ ಕಾರ್ಯಕ್ರಮ ಮಠದ ಆವರಣದಲ್ಲಿ ಜರುಗಲಿದೆ.ಮುಖ್ಯ ಅತಿಥಿಗಳಾಗಿ ಚಿಕ್ಕೋಡಿ ಕೃಷಿ ಇಲಾಖೆ ಉಪನಿರ್ದೇಶಕ ಹಾಗೂ ಸಾಹಿತಿ ಸಹದೇವ ಯರಗೊಪ್ಪ, ಗೋಪಾಲ ಅಗರವಾಲ, ಕೃಷಿ ನಿರ್ದೇಶಕ ಎಂ.ಎಸ್. ಕುಲಕರ್ಣಿ, ಪಶು ವೈದ್ಯಾಧಿಕಾರಿ ಡಾ. ಸಂತೋಷ ಕರಿಭರಮಣ್ಣವರ, ಮಂಜುನಾಥ ಕವಡಿಮಟ್ಟಿ ಭಾಗವಹಿಸಲಿದ್ದಾರೆ. ಸಂಜೆ 5 ಗಂಟೆಗೆ ಮಹಾರಥೋತ್ಸವ ನೆರವೇರಲಿದೆ ಎಂದು ಶ್ರೀಮಠದ ಸದ್ಭಕ್ತರು ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.