ಜ. 26ರಂದು ಗೋಪಾಳದಲ್ಲಿ ಹಿಂದೂ ಸಂಗಮ ಸಮಾವೇಶ ಮತ್ತು ಬೃಹತ್ ಶೋಭಾಯಾತ್ರೆ ಆಯೋಜಿಸಲಾಗಿದೆ.

ಶಿವಮೊಗ್ಗ: ಜ. 26ರಂದು ಗೋಪಾಳದಲ್ಲಿ ಹಿಂದೂ ಸಂಗಮ ಸಮಾವೇಶ ಮತ್ತು ಬೃಹತ್ ಶೋಭಾಯಾತ್ರೆ ಆಯೋಜಿಸಲಾಗಿದೆ.

ಅಂದು ಸಂಜೆ 4.30ಕ್ಕೆ ಚಾಲುಕ್ಯ ನಗರದ ಮುಖ್ಯ ವೃತ್ತದಿಂದ ಗೋಪಾಳದ ಕೊನೆ ಬಸ್ ನಿಲ್ದಾಣದವರೆಗೆ ಬೃಹತ್ ಶೋಭಾಯಾತ್ರೆ ನಡೆಯಲಿದೆ. ಸಂಜೆ ಅಲ್ಲಿಯೇ ವೇದಿಕೆ ಕಾರ್ಯಕ್ರಮ ನಡೆಯಲಿದೆ. ವೇದಿಕೆ ಕಾರ್ಯಕ್ರಮದಲ್ಲಿ ವಿಶ್ವ ಹಿಂದೂಪರಿಷತ್‌ನ ಅಖಿಲ ಭಾರತೀಯ ಕಾರ್ಯದರ್ಶಿ ಹಾಗೂ ಅಯೋಧ್ಯ ಶ್ರೀ ರಾಮಮಂದಿರದ ನಿರ್ಮಾಣ ಕಾರ್ಯದ ಉಸ್ತುವಾರಿಗಳಾದ ಶ್ರೀ ಗೋಪಾಲ ಜೀ ಯವರು ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸೋಮಿನಕೊಪ್ಪದ ಕಲ್ಲು ಗಂಗೂರಿನ ಶ್ರೀ ರಾಮಕೃಷ್ಣ ವಿವೇಕಾನಂದ ಆಶ್ರಮದ ಪೂಜ್ಯ ಶ್ರೀ ವಿನಯಾನಂದ ಸರಸ್ವತಿ ಸ್ವಾಮೀಜಿ ಪಾಲ್ಗೊಂಡು ಆಶೀರ್ವಚನ ಮಾಡಲಿದ್ದಾರೆ. ಜೊತೆಯಲ್ಲಿ ಪ್ರಾಧ್ಯಾಪಕಿ ಮೈತ್ರೇಯಿಯವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ವೇದಿಕೆಯಲ್ಲಿ ಶ್ರೀ ದುರ್ಗಾ ಪಾರಾಯಣ, ನೃತ್ಯ ರೂಪಕ ಹಾಗೂ ದೇಶ ಭಕ್ತಿಗೀತೆಗಳ ಕಾರ್ಯಕ್ರಮ ನಡೆಯಲಿದೆ. ಇದೇ ಸಂದರ್ಭದಲ್ಲಿ 50 ವರ್ಷ ದಾಂಪತ್ಯ ಜೀವನ ಪೂರೈಸಿದ ದಂಪತಿಗಳಿಗೆ ಮತ್ತು ಪೌರ ಕಾರ್ಮಿಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.

ಶೋಭಾಯಾತ್ರೆಯಲ್ಲಿ ಸಾಂಸ್ಕೃತಿಕ ಕಲಾತಂಡಗಳು ಭಾಗವಹಿಸಲಿವೆ. ಎಲ್ಲ ಹಿಂದೂ ಬಾಂಧವರು ಈ ಸಮಾವೇಶದಲ್ಲಿ ಭಾಗವಹಿಸುವಂತೆ ಆಯೋಜಕರು ಕೋರಿದ್ದಾರೆ.