ಸಾರಾಂಶ
ಯಲಬುರ್ಗಾ ತಾಲೂಕಿನ ಹಿರೇಮ್ಯಾಗೇರಿ ಪಿಡಿಒ ರತ್ನಮ್ಮ ಗುಂಡಣ್ಣನವರ ಅವರಿಗೆ ಅದೇ ಗ್ರಾಪಂ ಸದಸ್ಯೆ ಶಾಂತಮ್ಮ ಬಂಡಿವಡ್ಡರ ಹಾಗೂ ಅವರ ಪುತ್ರ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾರೆ. ಇಂಥ ಘಟನೆಯಿಂದ ಪಿಡಿಒಗಳು ಹಾಗೂ ಅಧಿಕಾರಿಗಳ ಆತ್ಮಸ್ಥೈರ್ಯ ಕುಗ್ಗಿದೆ.
ಕನಕಗಿರಿ:
ಯಲಬುರ್ಗಾ ತಾಲೂಕಿನ ಹಿರೇಮ್ಯಾಗೇರಿ ಪಿಡಿಒ ರತ್ನಮ್ಮ ಗುಂಡಣ್ಣನವರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವವರ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ತಾಲೂಕು ಆರ್‌ಡಿಪಿಆರ್ ನೌಕರರ ಘಟಕ, ರಾಜ್ಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ, ತಾಲೂಕು ನೌಕರರ ಸಂಘ ಒತ್ತಾಯಿಸಿದೆ.ತಾಲೂಕು ಆರ್‌ಡಿಪಿಆರ್ ನೌಕರರ ಘಟಕ, ರಾಜ್ಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ, ತಾಲೂಕು ನೌಕರರ ಸಂಘದ ವತಿಯಿಂದ ತಾಪಂ ಕಾರ್ಯನಿರ್ವಹಣಾಧಿಕಾರಿ ಕೆ. ರಾಜಶೇಖರ ಹಾಗೂ ತಹಸೀಲ್ದಾರ್ ವಿಶ್ವನಾಥ ಮುರುಡಿ ಅವರ ಮೂಲಕ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಸೋಮವಾರ ಮನವಿ ಸಲ್ಲಿಸಲಾಯಿತು.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಂಘದ ತಾಲೂಕು ಅಧ್ಯಕ್ಷ ನಾಗೇಶ ಪೂಜಾರ ಮಾತನಾಡಿ, ಯಲಬುರ್ಗಾ ತಾಲೂಕಿನ ಹಿರೇಮ್ಯಾಗೇರಿ ಪಿಡಿಒ ರತ್ನಮ್ಮ ಗುಂಡಣ್ಣನವರ ಅವರಿಗೆ ಅದೇ ಗ್ರಾಪಂ ಸದಸ್ಯೆ ಶಾಂತಮ್ಮ ಬಂಡಿವಡ್ಡರ ಹಾಗೂ ಅವರ ಪುತ್ರ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾರೆ. ಇಂಥ ಘಟನೆಯಿಂದ ಪಿಡಿಒಗಳು ಹಾಗೂ ಅಧಿಕಾರಿಗಳ ಆತ್ಮಸ್ಥೈರ್ಯ ಕುಗ್ಗಿದೆ. ಎಲ್ಲ ಅಧಿಕಾರಿಗಳು ಹಾಗೂ ನೌಕರರಿಗೆ ಕಚೇರಿ ಸಮಯದಲ್ಲಿ ರಕ್ಷಣೆ ವ್ಯವಸ್ಥೆ ಕಲ್ಪಿಸಬೇಕು. ಹಲ್ಲೆ ಮಾಡಿದವರ ಸದಸ್ಯತ್ವ ರದ್ದುಗೊಳಿಸಬೇಕು ಎಂದು ಮನವಿ ಮಾಡಿದರು.ಪಿಡಿಒಗಳಾದ ವೀರಣ್ಣ ನಕ್ರಳ್ಳಿ, ಬಸವರಾಜ ಸಂಕನಾಳ, ಯು. ಮಲ್ಲಿಕಾರ್ಜುನ, ಲಕ್ಷ್ಮಣ, ನಾಗಲಿಂಗಪ್ಪ, ಹನುಮಂತಪ್ಪ, ಗ್ರಾಪಂ ಕಾರ್ಯದರ್ಶಿ ಕೊಟ್ರಯ್ಯಸ್ವಾಮಿ, ವೆಂಕೋಬ, ರೇಣುಕಮ್ಮ, ಗಂಗಪ್ಪ ಇದ್ದರು.