ಪಾಲಕರು ತಮ್ಮ ಮಕ್ಕಳ ವ್ಯಾಸಂಗಕ್ಕೆ ಪ್ರೋತ್ಸಾಹ ನೀಡಬೇಕು

| Published : Feb 26 2025, 01:01 AM IST

ಪಾಲಕರು ತಮ್ಮ ಮಕ್ಕಳ ವ್ಯಾಸಂಗಕ್ಕೆ ಪ್ರೋತ್ಸಾಹ ನೀಡಬೇಕು
Share this Article
  • FB
  • TW
  • Linkdin
  • Email

ಸಾರಾಂಶ

ಎಲ್ಲ ಮಕ್ಕಳ ಪೋಷಕರು ಹೆಚ್ಚು ಅಂಕಗಳನ್ನು ಗಳಿಸಬೇಕು ಎನ್ನುವ ಆಸೆ ಇಟ್ಟುಕೊಳ್ಳುತ್ತಾರೆ.

ಕನ್ನಡಪ್ರಭ ವಾರ್ತೆ ಹುಣಸೂರುಪಾಲಕರು ಮನೆಯಲ್ಲಿ ಉತ್ತಮ ಕಲಿಕಾ ವಾತಾವರಣ ನಿರ್ಮಿಸುವ ಮೂಲಕ ತಮ್ಮ ಮಕ್ಕಳ ವ್ಯಾಸಂಗಕ್ಕೆ ಪ್ರೋತ್ಸಾಹ ನೀಡಬೇಕು ಎಂದು ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಲೋಕೇಶ್ ಹೇಳಿದರು.ತಾಲೂಕಿನ ಹಿರೀಕ್ಯಾತನಹಳ್ಳಿ ಗ್ರಾಮದ ವೇಣುಗೋಪಾಲ ವಿದ್ಯಾಸಂಸ್ಥೆ (ಅನುದಾನಿತ)ಯಲ್ಲಿ ಶಾಲಾ ವಾರ್ಷಿಕೋತ್ಸವದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು.ಎಲ್ಲ ಮಕ್ಕಳ ಪೋಷಕರು ಹೆಚ್ಚು ಅಂಕಗಳನ್ನು ಗಳಿಸಬೇಕು ಎನ್ನುವ ಆಸೆ ಇಟ್ಟುಕೊಳ್ಳುತ್ತಾರೆ. ಅತಿ ಹೆಚ್ಚು ಅಂಕ ಪಡೆಯುವುದಕ್ಕಿಂತ ಸಮಾಜದಲ್ಲಿ ನಮ್ಮ ಮಕ್ಕಳು ಉತ್ತಮ ಆದರ್ಶ ವ್ಯಕ್ತಿಯಾಗಿ ರೂಪುಗೊಳ್ಳಲಿ ಎಂಬ ಬಯಕೆ ಇರಬೇಕು. ಮಕ್ಕಳಿಗೆ ಜೀವನ ಪಾಠ,ಜೀವನದ ಕೌಶಲಪಾಠವನ್ನು ಕಲಿಸಕೊಡಿ. ಮನೆಯಲ್ಲಿ ಕಲಿಕೆಗೆ ಅನುಕೂಲವಾಗುವ ಒಳ್ಳೆಯ ವಾತಾವರಣವನ್ನು ನಿರ್ಮಿಸಿರಿ. ಜ್ಞಾನ ಸಂಪಾದನೆಗಾಗಿ ಗ್ರಂಥಾಲಯಗಳಿಗೆ ಭೇಟಿ ನೀಡುವ ಅಭ್ಯಾಸವನ್ನು ಮಕ್ಕಳಿಗೆ ಬೆಳೆಸಿ. ಶೈಕ್ಷಣಿಕ ಪ್ರಗತಿ ಜೊತೆಗೆ ಕ್ರೀಡೆಗಳನ್ನು ಭಾಗವಹಿಸುವುದು ಮುಖ್ಯ ಎಂದರು.ಹರವೆ ಗ್ರಾಮದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಪ್ರಾಂಶುಪಾಲ ರಾಮಶೆಟ್ಟಿ ಮಾತನಾಡಿದರು.ಸಂಸ್ಥೆಯ ಅಧ್ಯಕ್ಷ ವಿಶ್ವೇಶ್ವರಯ್ಯ, ಉಪಾಧ್ಯಕ್ಷ ಎಚ್.ಆರ್. ಜಗದೀಶ್, ಕಾರ್ಯದರ್ಶಿ ಮಹೇಶ್, ನಿರ್ದೇಶಕರಾದ ಚಂದ್ರಶೇಖರಯ್ಯ, ಶಿವರಾಜ್, ಇದ್ದರು. ಶಾಲಾ ಮಕ್ಕಳು ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.