ಹಿರಿಯಡಕ ಸರ್ಕಾರಿ ಪಿಯು ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ, ಪ್ರತಿಭಾ ಪುರಸ್ಕಾರ

| Published : Jul 21 2025, 12:00 AM IST

ಹಿರಿಯಡಕ ಸರ್ಕಾರಿ ಪಿಯು ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ, ಪ್ರತಿಭಾ ಪುರಸ್ಕಾರ
Share this Article
  • FB
  • TW
  • Linkdin
  • Email

ಸಾರಾಂಶ

ಅಮೃತ ಮಹೇೂತ್ಸವದ ಶುಭ ಹೊಸ್ತಿಲಲ್ಲಿರುವ ಹಿರಿಯಡಕ ಸರ್ಕಾರಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಮತ್ತು ಪದವಿಪೂರ್ವ ಪರೀಕ್ಷೆಯಲ್ಲಿ ವಿಶಿಷ್ಟ ಸಾಧನೆಗೈದ ವಿದ್ಯಾರ್ಥಿಗಳ ಸನ್ಮಾನ ನಡೆಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ಶಿಕ್ಷಣ ಅಂದರೆ ಕೇವಲ ಖಾಲಿ ಕೊಡಪಾನಗಳಿಗೆ ನೀರು ತುಂಬಿಸುವ ಕೆಲಸವಲ್ಲ, ಗಳಿಸಿದ ಜ್ಞಾನವನ್ನು ವಾಸ್ತವಿಕ ಬದುಕಿನತ್ತ ತಿರುಗಿಸುವುದೇ ನಿಜವಾದ ಶಿಕ್ಷಣ ಎಂದು ನಿವೃತ್ತ ಉಪನ್ಯಾಸಕ ಪ್ರೊ. ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ ಹೇಳಿದರು.

ವಿದ್ಯಾರ್ಥಿಗಳ ಸಾಮರ್ಥ್ಯವನ್ನು ಕೇವಲ ಅಂಕಗಳಿಂದ ಅಳೆಯುವುದು ಸರಿಯಲ್ಲ, ಬದಲಾಗಿ ಅವರ ಸಮಗ್ರವಾದ ವ್ಯಕ್ತಿತ್ವವನ್ನು ಅಳೆಯುವುದೇ ನಿಜವಾದ ಮೌಲ್ಯಮಾಪನ. ವಿದ್ಯಾರ್ಥಿ ದಿಸೆಯಲ್ಲಿಯೇ ಪಠ್ಯದ ಜೊತೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿ ಕೊಳ್ಳುವಂತೆ ಸಹಕರಿಸುವುದು ಹೆತ್ತವರ ಮತ್ತು ಶಿಕ್ಷಕರ ಜವಾಬ್ದಾರಿಯೂ ಹೌದು. ವಿದ್ಯಾರ್ಥಿಗಳ ವ್ಯಕ್ತಿತ್ವ ಬೆಳೆಸುವಲ್ಲಿ ಹಿರಿಯಡಕ ಸರಕಾರಿ ಪ ಪೂ.ಕಾಲೇಜು ಪರಿಪೂಣ೯ವಾದ ಪರಿಕರ ಪರಿಸರವನ್ನು ಮೈಗೂಡಿಸಿಕೊಂಡಿರುವ ವಿದ್ಯಾ ಸಂಸ್ಥೆ ಎಂದು ಸಂಸ್ಥೆಯ ಪ್ರಾಕ್ತನ ವಿದ್ಯಾರ್ಥಿಅಭಿಪ್ರಾಯಪಟ್ಟರು.

ಅವರು ಅಮೃತ ಮಹೇೂತ್ಸವದ ಶುಭ ಹೊಸ್ತಿಲಲ್ಲಿರುವ ಹಿರಿಯಡಕ ಸರ್ಕಾರಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಮತ್ತು ಪದವಿಪೂರ್ವ ಪರೀಕ್ಷೆಯಲ್ಲಿ ವಿಶಿಷ್ಟ ಸಾಧನೆಗೈದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡಿದರು.ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಮಂಜುನಾಥ್ ಭಟ್ಟ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕಾಲೇಜಿನ ಸಂಚಾಲಕ ಡಾ.ಎನ್. ಎಸ್.ಶೆಟ್ಟಿ ಶುಭ ಹಾರೈಸಿದರು. ಶಾಲಾ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಬಿ.ಎಲ್.ವಿಶ್ವಾಸ್, ಉದ್ಯಮಿ ದೇವರಾಯ ನಾಯಕ್, ಉಪ ಪ್ರಾಂಶುಪಾಲ ಪ್ರಕಾಶ್ ಪ್ರಭು, ಹಳೆ ವಿದ್ಯಾರ್ಥಿಸಂಘದ ಕಾರ್ಯದರ್ಶಿ ಶರತ್ ಹಿರಿಯಡಕ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಹಿರಿಯ ಉಪನ್ಯಾಸಕಿ ವೀಣಾ ನಾಯಕ್ ಪ್ರತಿಜ್ಞಾ ವಿಧಿ ಬೇೂಧಿಸಿದರು. ವಿದ್ಯಾರ್ಥಿ ಸಂಘದ ನಾಯಕಿ ತ್ರಿಶಾ ಸ್ವಾಗತಿಸಿದರು. ಉಪನ್ಯಾಸಕ ಮಹೇಶ್ ವಂದಿಸಿದರು. ರಾಜ್ಯ ಶಾಸ್ತ್ರ ಪ್ರಾಧ್ಯಾಪಕ ದೇವರಾಯ ಪ್ರಭು ಕಾರ್ಯಕ್ರಮ ನಿರೂಪಿಸಿದರು.