ಸಾರಾಂಶ
ಫೆಬ್ರವರಿ 16ರಂದು ಸಿದ್ದರಾಮಯ್ಯ ರಾಜ್ಯದ ಆಯವ್ಯಯ ಮಂಡಿಸಲಿದ್ದಾರೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ತಿಳಿಸಿದರು.
ಫೆ.12ರಿಂದ ಬಜೆಟ್ ಅಧಿವೇಶನ ಆರಂಭ
ಬೆಂಗಳೂರುಆರ್ಥಿಕ ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆ.16ರಂದು ರಾಜ್ಯ ಬಜೆಟ್ ಮಂಡಿಸಲಿದ್ದಾರೆ ಎಂದು ಕಾನೂನು, ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಫೆ.12ರಿಂದ ವಿಧಾನಮಂಡಲ ಅಧಿವೇಶನ ಆರಂಭವಾಗಲಿದ್ದು, ಫೆ.23ಕ್ಕೆ ಅಂತ್ಯವಾಗಲಿದೆ.ಮೊದಲ ದಿನ ಜಂಟಿ ಅಧಿವೇಶನ ನಡೆಯಲಿದ್ದು, ರಾಜಪಾಲರು ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.
ಅದಾದ ನಂತರ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯಲಿದೆ. ಫೆ.16ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡಿಸಲಿದ್ದಾರೆ.ಫೆ.19ರಿಂದ ಬಜೆಟ್ ಮೇಲೆ ಚರ್ಚೆಗಳು ನಡೆಯಲಿವೆ. ಫೆ.23ಕ್ಕೆ ಅಧಿವೇಶನ ಅಂತ್ಯವಾಗಲಿದೆ ಎಂದು ಹೇಳಿದರು.