ನ್ಯೂಜಿಲ್ಯಾಂಡ್‌ನ ಆಕ್ಲೆಂಡ್‌ನಲ್ಲಿ ನಡೆಯಲಿರುವ ದ್ವಿಪಕ್ಷೀಯ ಹಾಕಿ ಸರಣಿಗೆ ಭಾರತೀಯ ಸಶಸ್ತ್ರ ಪಡೆಗಳ ಹಾಕಿ ತಂಡಕ್ಕೆ ಕೊಡಗಿನ ಹೆಮ್ಮೆಯ ಕ್ರೀಡಾಪಟು ಕುಂಡ್ಯೋಳಂಡ ಕಾರ್ಯಪ್ಪ ಅವರು ಆಯ್ಕೆಯಾಗಿದ್ದಾರೆ. ಈ ಪ್ರತಿಷ್ಠಿತ ಸಶಸ್ತ್ರ ಪಡೆಗಳ ತಂಡದಲ್ಲಿ ಸ್ಥಾನ ಪಡೆದ ಏಕೈಕ ಕೊಡಗಿನ ಆಟಗಾರ ಎಂಬ ಹೆಗ್ಗಳಿಕೆಗೆ ಇವರು ಪಾತ್ರರಾಗಿದ್ದಾರೆ.

ನಾಪೋಕ್ಲು: ನ್ಯೂಜಿಲ್ಯಾಂಡ್‌ನ ಆಕ್ಲೆಂಡ್‌ನಲ್ಲಿ ನಡೆಯಲಿರುವ ದ್ವಿಪಕ್ಷೀಯ ಹಾಕಿ ಸರಣಿಗೆ ಭಾರತೀಯ ಸಶಸ್ತ್ರ ಪಡೆಗಳ ಹಾಕಿ ತಂಡಕ್ಕೆ ಕೊಡಗಿನ ಹೆಮ್ಮೆಯ ಕ್ರೀಡಾಪಟು ಕುಂಡ್ಯೋಳಂಡ ಕಾರ್ಯಪ್ಪ ಅವರು ಆಯ್ಕೆಯಾಗಿದ್ದಾರೆ. ಈ ಪ್ರತಿಷ್ಠಿತ ಸಶಸ್ತ್ರ ಪಡೆಗಳ ತಂಡದಲ್ಲಿ ಸ್ಥಾನ ಪಡೆದ ಏಕೈಕ ಕೊಡಗಿನ ಆಟಗಾರ ಎಂಬ ಹೆಗ್ಗಳಿಕೆಗೆ ಇವರು ಪಾತ್ರರಾಗಿದ್ದಾರೆ.

ಪ್ರಸ್ತುತ ಭಾರತೀಯ ನೌಕಾಪಡೆಯಲ್ಲಿ ಚೀಫ್ ಪೆಟ್ಟಿ ಆಫೀಸರ್ ಆಗಿ ಸೇವೆ ಸಲ್ಲಿಸುತ್ತಿರುವ ಕಾರ್ಯಪ್ಪ ಅವರು, ಭಾರತೀಯ ನೌಕಾಪಡೆಯ ಹಾಕಿ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಮುಂಚೂಣಿಯ ಆಟಗಾರರಾಗಿರುವ ಇವರು ಡಿಫೆಂಡರ್ ಮತ್ತು ಮಿಡ್‌ಫೀಲ್ಡರ್ ವಿಭಾಗದಲ್ಲಿ ಅತ್ಯುತ್ತಮ ಕೌಶಲ್ಯ ಪ್ರದರ್ಶಿಸಿ ಗಮನ ಸೆಳೆದಿದ್ದಾರೆ. ಬೆಂಗಳೂರಿನ ಸೇಂಟ್ ಜೋಸೆಫ್ಸ್ ಕಾಲೇಜಿನಲ್ಲಿ ಬಿ.ಎ. ಪದವಿ ಪೂರೈಸಿರುವ ಇವರು, ಸ್ಥಳೀಯ ಹಾಗೂ ರಾಷ್ಟ್ರೀಯ ಮಟ್ಟದ ಹಲವು ಪ್ರಮುಖ ಪಂದ್ಯಾವಳಿಗಳಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಸಾಬೀತುಪಡಿಸಿದ್ದಾರೆ. ಪಂದ್ಯಾವಳಿಯಲ್ಲಿ ಪಾಲ್ಗೊಳ್ಳಲು ಕಾರ್ಯಪ್ಪ ಅವರು ನಯ 9ರಂದು ನ್ಯೂಜಿಲ್ಯಾಂಡ್‌ಗೆ ಪ್ರಯಾಣ ಬೆಳೆಸಿದ್ದಾರೆ.

ಸಾಧಕ ಕ್ರೀಡಾಪಟು ಕುಂಡ್ಯೋಳಂಡ ಕಾರ್ಯಪ್ಪ ಅವರು ಮಡಿಕೇರಿ ತಾಲೂಕಿನ ನಾಪೋಕ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಳಕೇರಿ ನಿವಾಸಿಯಾಗಿದ್ದು, ಕುಂಡ್ಯೋಳಂಡ ಕಾಶಿ ತಮ್ಮಯ್ಯ ಹಾಗೂ ಸರಸ್ವತಿ (ಸಾರು) ದಂಪತಿಯ ಪುತ್ರ.