ಹೊದ್ದೂರು ಪಂಚಾಯಿತಿ: ವಿವಿಧ ಕಾಮಗಾರಿಗಳಿಗೆ ಭೂಮಿಪೂಜೆ

| Published : Feb 02 2025, 11:48 PM IST

ಸಾರಾಂಶ

ಹೊದ್ದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲೆಮಾಡು ಕಾಲೋನಿ, ಕಾನ್ಶಿರಾಮ್ ನಗರ ಕಾಲೋನಿಗೆ ಸಮಾಜ ಕಲ್ಯಾಣ ಇಲಾಖೆ ವಿಶೇಷ ಅನುದಾನದಲ್ಲಿ 2 ಕೋಟಿ ರು. ಕಾಮಗಾರಿ ಹಾಗೂ ಹೊದವಾಡ ಕೊಟ್ಟಮುಡಿ ಗ್ರಾಮಗಳಲ್ಲಿ 1.30 ಕೋಟಿ ರುಪಾಯಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಲಾಯಿತು.

ಕನ್ನಡಪ್ರಭ ವಾರ್ತೆ ನಾಪೋಕ್ಲುಸುಮಾರು 3.60 ಕೋಟಿ ರು.ಯ ವಿಶೇಷ ಅನುದಾನದಡಿ ಕಾಮಗಾರಿಗಳನ್ನು ನಡೆಸಲಾಗುತ್ತಿದ್ದು, ಉತ್ತಮ ಗುಣಮಟ್ಟದಲ್ಲಿ ಕಾಮಗಾರಿ ನಿರ್ವಹಿಸುವಂತೆ ಶಾಸಕ ಡಾ. ಮಂತರ್‌ ಗೌಡ ಎಂಜಿನಿಯರ್ ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಿದರು.

ಹೊದ್ದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲೆಮಾಡು ಕಾಲೋನಿ, ಕಾನ್ಶಿರಾಮ್ ನಗರ ಕಾಲೋನಿಗೆ ಸಮಾಜ ಕಲ್ಯಾಣ ಇಲಾಖೆ ವಿಶೇಷ ಅನುದಾನದಲ್ಲಿ 2 ಕೋಟಿ ರು. ಕಾಮಗಾರಿ ಹಾಗೂ ಹೊದವಾಡ ಕೊಟ್ಟಮುಡಿ ಗ್ರಾಮಗಳಲ್ಲಿ 1.30 ಕೋಟಿ ರುಪಾಯಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭಾನುವಾರ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.

ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ಹೊದ್ದೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಎಚ್.ಎ. ಹಂಸ ಅವರು ಶಾಸಕರನ್ನು ಅಭಿನಂದಿಸಿದರು.

ಹೊದ್ದೂರು ಗ್ರಾಮ ಪಂಚಾಯಿತಿ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಕೆ. ಮೊಣ್ಣಪ್ಪ, ನೀರು ಮತ್ತು ನೈರ್ಮಲ್ಯ ಸಮಿತಿಯ ಅಧ್ಯಕ್ಷ ಎಂ.ಬಿ . ಹಮೀದ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಕುಸುಮಾವತಿ, ಗ್ರಾಪಂ ಸದಸ್ಯರಾದ ಕಡ್ಲೆರ ಟೈನಿ, ಎಚ್‌.ಎಂ. ಸರಸು, ಕೆ.ಎಂ. ಮೈದು, ಚೌರಿರ ಅನಿತಾ, ಲಕ್ಷ್ಮೀ, ಪಿಡಿಒ ಅಬ್ದುಲ್ಲ, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ವಿ.ಜಿ. ಮೋಹನ್, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಮಂದ್ರಿರ ಮೋಹನ್ ದಾಸ್, ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗದ ಕೋಚನ ಹರಿಪ್ರಸಾದ್, ಕೊಟ್ಟಮುಡಿ ಅಬೂಬಕರ್ ಹಾಜಿ, ವಲಯ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ, ಕಾಂಗ್ರೆಸ್‌ ಮುಖಂಡರು ಮತ್ತಿತರರು ಇದ್ದರು.