ವಿವಿಧ ಕಾಮಗಾರಿಗಳಿಗೆ ಶಾಸಕರಿಂದ ಗುದ್ದಲಿ ಪೂಜೆ

| Published : Mar 15 2024, 01:20 AM IST

ಸಾರಾಂಶ

ನಗರದ ಭುವನೇಶ್ವರಿ ವೃತ್ತದ ಬಳಿ ಇರುವ ಶಿಕ್ಷಕರ ಭವನದ (ಗುರು ಭವನದ) ಒಳ ಸಭಾಂಗಣ ನಿರ್ಮಾಣಕ್ಕೆ ಶಾಸಕರ ಪ್ರದೇಶ ಅಭಿವೃದ್ಧಿ ಯೋಜನೆಯಡಿಯಲ್ಲಿ ೫ ಲಕ್ಷ ರು. ವೆಚ್ಚದ ಕಾಮಗಾರಿಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಗುದ್ದಲಿಪೂಜೆ ನೆರವೇರಿಸಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ನಗರದ ಭುವನೇಶ್ವರಿ ವೃತ್ತದ ಬಳಿ ಇರುವ ಶಿಕ್ಷಕರ ಭವನದ (ಗುರು ಭವನದ) ಒಳ ಸಭಾಂಗಣ ನಿರ್ಮಾಣಕ್ಕೆ ಶಾಸಕರ ಪ್ರದೇಶ ಅಭಿವೃದ್ಧಿ ಯೋಜನೆಯಡಿಯಲ್ಲಿ ೫ ಲಕ್ಷ ರು. ವೆಚ್ಚದ ಕಾಮಗಾರಿಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಗುದ್ದಲಿಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಶಿಕ್ಷಕರ ಭವನಕ್ಕೆ ಒಳ ಸಭಾಂಗಣ ಇಲ್ಲದೆ ಸಭೆಗಳನ್ನು ನಡೆಸಲು ಸಾಕಷ್ಟು ಸಮಸ್ಯೆಯುಂಟಾಗುತ್ತಿತ್ತು. ಶಿಕ್ಷಕರೆಲ್ಲರೂ ಕೂಡಾ ಮನವಿ ಮಾಡಿಕೊಂಡಿದ್ದ ಹಿನ್ನೆಲೆಯಲ್ಲಿ ಈ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ನಗರಸಭಾ ಸದಸ್ಯೆ ಕಲಾವತಿ, ಬಿಇಓ ಸೋಮಣ್ಣೇಗೌಡ, ಜಿಲ್ಲಾ ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಮಾದಪ್ಪ, ಗೌರವಾಧ್ಯಕ್ಷ ಎಂ.ಡಿ.ಮಹದೇವಸ್ವಾಮಿ, ತಾಲೂಕು ಶಿಕ್ಷಕರ ಸಂಘದ ಅಧ್ಯಕ್ಷ ರಾಮಸ್ವಾಮಿ, ಜಿಲ್ಲಾ ಕಾರ್ಯದರ್ಶಿ ಮಹದೇವಸ್ವಾಮಿ, ಜಿಲ್ಲಾ ಸಹಕಾರ್ಯದರ್ಶಿ ವಾಸು, ಖಜಾಂಚಿ ಕೃಷ್ಣಮೂರ್ತಿ, ಸಂಘಟನಾ ಕಾರ್ಯದರ್ಶಿ ಮಲ್ಲಿಕಾರ್ಜುನಾ, ನಿರ್ಮಿತಿ ಕೇಂದ್ರ ಭೀಮಸಾಗರ್ ಸೇರಿದಂತೆ ಮತ್ತಿತರರಿದ್ದರು. ರಂಗಮಂದಿರ ನಿರ್ಮಾಣ ಕಾಮಗಾರಿಗೆ ಚಾಲನೆ: ಚಾಮರಾಜನಗರ ತಾಲೂಕಿನ ಸಿದ್ದಯ್ಯನಪುರ ಗ್ರಾಮದಲ್ಲಿ ೮ ಲಕ್ಷ ರೂ. ವೆಚ್ಚದಲ್ಲಿ ರಂಗಮಂದಿರ ನಿರ್ಮಾಣ ಕಾಮಗಾರಿಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಗುದ್ದಲಿಪೂಜೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಅವರು, ಸಿದ್ದಯ್ಯನಪುರ ಗ್ರಾಮದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳು ಆಗಿವೆ. ರಸ್ತೆ, ಕುಡಿಯುವ ನೀರು, ಚರಂಡಿ, ಸಮುದಾಯ ಭವನ, ಬೀದಿ ದೀಪ, ಸೇತುವೆ ನಿರ್ಮಾಣ, ರೈತರಿಗೆ ಗಂಗಾ ಕಲ್ಯಾಣ, ಆಶ್ರಯ ಮನೆಗಳು ಹೀಗೆ ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ನನ್ನ ಅವಧಿಯಲ್ಲಿ ಅಭಿವೃದ್ಧಿಪಡಿಸಲಾಗಿದೆ ಎಂದರು.ಮುಂದಿನ ದಿನಗಳಲ್ಲೂ ಕೂಡಾ ಎಲ್ಲೆಲ್ಲಿ ರಸ್ತೆಗಳು, ಕುಡಿಯುವ ನೀರಿನ ಸಮಸ್ಯೆಗಳಿವೆಯೂ ಅಲ್ಲೆಲ್ಲಾ ಭೇಟಿ ನೀಡಿ, ಸಮಸ್ಯೆ ಬಗೆಹರಿಸಲಾಗುವುದು ಎಂದು ಭರವಸೆ ನೀಡಿದರು. ಈವೇಳೆ ಗ್ರಾಪಂ ಉಪಾಧ್ಯಕ್ಷ ಬಸವಣ್ಣ, ಸದಸ್ಯರಾದ ಸೋಮಣ್ಣ, ಶೈಲಜಾ ಗೋವಿಂದರಾಜು, ಮಂಜು, ಮಹದೇವಮ್ಮ, ರೇಖಾ, ಯಜಮಾನರಾದ ಮೂರ್ತಿ, ಪಾಪಣ್ಣ, ಬಸವಯ್ಯ, ಮುಖಂಡರಾದ ಹನುಮಂತು, ಶಿವಬಸವಣ್ಣ, ರಮೇಶ್, ನಂಜುಂಡಸ್ವಾಮಿ, ನೀರು ಬಳಕೆದಾರರ ಸಂಘದ ಅಧ್ಯಕ್ಷ ಗೋವಿಂದರಾಜು, ನಿರ್ಮಿತಿ ಕೇಂದ್ರದ ಇಂಜಿನಿಯರ್ ಭೀಮ್ ಸಾಗರ್ ಮತ್ತಿತರರಿದ್ದರು.