ಸಾರಾಂಶ
ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ಡಿಸೆಂಬರ್ ೨೧ರ ಶನಿವಾರ ಶ್ರೀ ಹನುಮ ಜಯಂತ್ಯುತ್ಸವ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸುವ ಸಲುವಾಗಿ ನಗರವನ್ನು ತಳಿರು, ತೋರಣ ಹಾಗೂ ಕೇಸರಿ ಧ್ವಜಗಳಿಂದ ಸಿಂಗರಿಸಿ, ಪಟ್ಟಣವನ್ನು ವಿದ್ಯುತ್ ದೀಪಗಳಿಂದ ಸಿಂಗರಿಸಲಾಗಿದೆ. ಹೊಸ ಇತಿಹಾಸ ಸೃಷ್ಠಿಸುವ ಸಲುವಾಗಿ ಸಿದ್ಧತೆಗಳು ಭರದಿಂದ ನಡೆಯುತ್ತಿವೆ.
ಹೊಳೆನರಸೀಪುರ: ಪಟ್ಟಣದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ಡಿಸೆಂಬರ್ ೨೧ರ ಶನಿವಾರ ಶ್ರೀ ಹನುಮ ಜಯಂತ್ಯುತ್ಸವ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸುವ ಸಲುವಾಗಿ ನಗರವನ್ನು ತಳಿರು, ತೋರಣ ಹಾಗೂ ಕೇಸರಿ ಧ್ವಜಗಳಿಂದ ಸಿಂಗರಿಸಿ, ಪಟ್ಟಣವನ್ನು ವಿದ್ಯುತ್ ದೀಪಗಳಿಂದ ಸಿಂಗರಿಸಲಾಗಿದೆ. ಹೊಸ ಇತಿಹಾಸ ಸೃಷ್ಠಿಸುವ ಸಲುವಾಗಿ ಸಿದ್ಧತೆಗಳು ಭರದಿಂದ ನಡೆಯುತ್ತಿವೆ.
ಡಿಸೆಂಬರ್ ೨೧ರ ಶನಿವಾರ ಶ್ರೀ ಹನುಮ ಜಯಂತಿ ಆಚರಣಾ ಸೇವಾ ಸಮಿತಿವತಿಯಿಂದ ಶ್ರೀ ಹನುಮ ಜಯಂತ್ಯುತ್ಸವ ಕಾರ್ಯಕ್ರಮ ಅಂಗವಾಗಿ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದಲ್ಲಿ ಪೂಜಾ ಕೈಂಕರ್ಯವನ್ನು ನೆರವೇರಿಸಲಾಗುತ್ತದೆ. ನಂತರ ನಗರದ ಪ್ರಮುಖ ರಸ್ತೆಗಳಲ್ಲಿ ಶ್ರೀ ಸ್ವಾಮಿಯ ಉತ್ಸವವನ್ನು ವಾದ್ಯಘೋಷಗಳು ಹಾಗೂ ವಿವಿಧ ಕಲಾ ತಂಡಗಳ ಸಾಂಸ್ಕೃತಿಕ ಪ್ರದರ್ಶದೊಂದಿಗೆ ಅದ್ಧೂರಿಯಾಗಿ ನಡೆಸಲು ರೂಪರೇಖೆ ರೂಪಿಸಲಾಗಿದ್ದು, ಪ್ರೀತಿ, ವಿಶ್ವಾಸ, ನಂಬಿಕೆ ಹಾಗೂ ಬಾಂಧವ್ಯದ ಜೀವನಕ್ಕೆ ಧಕ್ಕೆಯಾಗದ ರೀತಿಯಲ್ಲಿ ಕಾರ್ಯಕ್ರಮಗಳು ನಡೆಯಲಿ ಎಂದು ನಾಗರಿಕರು ಶುಭಕೋರಿದ್ದಾರೆ.