ದ.ಕ. ಜಿಲ್ಲಾದ್ಯಂತ ಮಳೆಯ ಯೆಲ್ಲೋ ಅಲರ್ಟ್ ಜಾರಿಯಲ್ಲಿದ್ದು, ಭಾರಿ ಮಳೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜು.23 ರಂದು ದ.ಕ.ಜಿಲ್ಲಾದ್ಯಂತ ಅಂಗನವಾಡಿಯಿಂದ ಪಿಯು ಕಾಲೇಜು ವರೆಗಿನ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ಜಿಲ್ಲಾಧಿಕಾರಿ ದರ್ಶನ್ ರಜೆ ಘೋಷಿಸಿದ್ದಾರೆ. ಆದೇಶ ಉಲ್ಲಂಘಿಸಿ ತರಗತಿ ನಡೆಸಿದರೆ ಕಾನೂನು ಕ್ರಮದ ಎಚ್ಚರಿಕೆ ನೀಡಲಾಗಿದೆ. ಜಿಲ್ಲೆಯಲ್ಲಿ ಬುಧವಾರ ದಿನವಿಡೀ ಧಾರಾಕಾರ ಮಳೆ ಸುರಿದಿದೆ.

ಮಂಗಳೂರು: ದ.ಕ. ಜಿಲ್ಲಾದ್ಯಂತ ಮಳೆಯ ಯೆಲ್ಲೋ ಅಲರ್ಟ್ ಜಾರಿಯಲ್ಲಿದ್ದು, ಭಾರಿ ಮಳೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜು.23 ರಂದು ದ.ಕ.ಜಿಲ್ಲಾದ್ಯಂತ ಅಂಗನವಾಡಿಯಿಂದ ಪಿಯು ಕಾಲೇಜು ವರೆಗಿನ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ಜಿಲ್ಲಾಧಿಕಾರಿ ದರ್ಶನ್ ರಜೆ ಘೋಷಿಸಿದ್ದಾರೆ. ಆದೇಶ ಉಲ್ಲಂಘಿಸಿ ತರಗತಿ ನಡೆಸಿದರೆ ಕಾನೂನು ಕ್ರಮದ ಎಚ್ಚರಿಕೆ ನೀಡಲಾಗಿದೆ. ಜಿಲ್ಲೆಯಲ್ಲಿ ಬುಧವಾರ ದಿನವಿಡೀ ಧಾರಾಕಾರ ಮಳೆ ಸುರಿದಿದೆ.

ಭಾರತೀಯ ಹವಾಮಾನ ಇಲಾಖೆ ಜು. 23 ರಂದು ಕರಾವಳಿ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್‌ ಘೋಷಿಸಿದೆ. ಸುಮಾರು 64.5 ಮಿಲಿ ಮೀಟರ್‌ನಿಂದ 115.4 ಮಿ.ಮೀ. ವರೆಗೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ.ದ.ಕ. ಜಿಲ್ಲೆಯಾದ್ಯಂತ ಬೆಳಗ್ಗಿನಿಂದಲೇ ಭಾರಿ ಮಳೆಯಾಗಿದೆ. ಮಂಗಳೂರು ಸೇರಿದಂತೆ ಗ್ರಾಮಾಂತರ ಪ್ರದೇಶಗಳಲ್ಲೂ ಬಿರುಸಿನ ಮಳೆ ಸುರಿದಿದೆ. ಮಂಗಳೂರಿನಲ್ಲಿ ತಗ್ಗು ಪ್ರದೇಶಗಳಲ್ಲಿ ಕೃತಕ ನೆರೆ ಆವರಿಸಿತ್ತು. ಬುಧವಾರ ಬೆಳಗ್ಗಿನ ವರೆಗೆ ದ.ಕ. ಜಿಲ್ಲೆಯಲ್ಲಿ ಒಟ್ಟು 28.9 ಮಿ.ಮೀ. ಮಳೆ ದಾಖಲಾಗಿದೆ.