ಫೆಬ್ರವರಿ 22ರಂದು ಸಹ್ಯಾದ್ರಿ ಕ್ಯಾಂಪಸ್‌ನಲ್ಲಿ ‘ಹೊಂಬೆಳಕು 2025’

| Published : Feb 13 2025, 12:50 AM IST

ಫೆಬ್ರವರಿ 22ರಂದು ಸಹ್ಯಾದ್ರಿ ಕ್ಯಾಂಪಸ್‌ನಲ್ಲಿ ‘ಹೊಂಬೆಳಕು 2025’
Share this Article
  • FB
  • TW
  • Linkdin
  • Email

ಸಾರಾಂಶ

ಗ್ರಾಮ ಸ್ವರಾಜ್ ಪತ್ರಿಷ್ಠಾನ ವತಿಯಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಸ್ಥಳೀಯಾಡಳಿತ ಸಂಸ್ಥೆಗಳ ಚುನಾಯಿತ ಜನಪ್ರತಿನಿಧಿಗಳು ಹಾಗು ಸಿಬ್ಬಂದಿಗಳ ಕ್ರೀಡೆ - ಸಾಂಸ್ಕೃತಿಕ ಉತ್ಸವ ‘ಹೊಂಬೆಳಕು - 2025’ 22 ರಂದು ಮಂಗಳೂರಿನ ಅಡ್ಯಾರ್ ಸಹ್ಯಾದ್ರಿ ಕ್ಯಾಂಪಸ್‌ನಲ್ಲಿ ನಡೆಯಲಿದೆ.

ಕನ್ನಡಪ್ರಭ ವಾರ್ತೆ ಉಡುಪಿ

ಈ ಬಗ್ಗೆ ಆಯೋಜನಾ ಸಮಿತಿಯ ಗೌರವಾಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಕ್ರೀಡಾಕೂಟ ಉದ್ಘಾಟಿಸಲಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ, ಸಂಸದ ಬಿ.ಸಿ ಚಂದ್ರಶೇಖರ್ ಕ್ರೀಡಾ ಜ್ಯೋತಿ ಸ್ವೀಕರಿಸಿ, ಪಥಸಂಚಲನಕ್ಕೆ ಚಾಲನೆ ನೀಡುವರು. ಕನ್ನಡ - ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ಎಸ್. ತಂಗಡಗಿ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸ್ಪೀಕರ್ ಯು.ಟಿ.ಖಾದರ್, ಸಚಿವ ದಿನೇಶ್ ಗುಂಡುರಾವ್, ದಕ - ಉಡುಪಿ ಜಿಲ್ಲೆಯ ಶಾಸಕರು, ಸಂಸದರು ಭಾಗವಹಿಸಲಿದ್ದಾರೆ ಎಂದರು.

ಅವಿಭಜಿತ ದ.ಕ. ಜಿಲ್ಲೆಗಳಲ್ಲಿ ಮಾತ್ರ ನಡೆಯುತ್ತಿರುವ ಈ ಕಾರ್ಯಕ್ರಮವನ್ನು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ನಡೆಸುವ ಆಶಯ ವ್ಯಕ್ತಪಡಿಸಿದ್ದು, ಅದಕ್ಕೆ ಮಂಗಳೂರಿನಲ್ಲಿ ನಡೆಯುವ ‘ಹೊಂಬೆಳಕು - 2025’ ಪೈಲೆಟ್ ಕಾರ್ಯಕಮವಾಗಿ ನಡೆಯುತ್ತಿದೆ ಎಂದರು.

ಈ ಸಂದರ್ಭದಲ್ಲಿ ‘ಹೊಂಬೆಳಕು - 2025’ ಸ್ಥಳೀಯಾಡಳಿತ ಸಂಭ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು.

ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಮುಖರಾದ ಪ್ರಸಾದ್‌ರಾಜ್ ಕಾಂಚನ್, ಅಶೋಕ್ ಕೊಡವೂರು, ರಾಜು ಪೂಜಾರಿ, ಸುಭಾಶ್ಚಂದ್ರ ಶೆಟ್ಟಿ, ರೋಶಿನಿ ವಲಿವೇರಾ ಮುಂತಾದವರಿದ್ದರು.