ಸಾರಾಂಶ
ಹರಿಹರದಲ್ಲಿ ಕರುನಾಡ ಕದಂಬ ರಕ್ಷಣಾ ವೇದಿಕೆ ಮನವಿ- - - ಕನ್ನಡಪ್ರಭ ವಾರ್ತೆ ಹರಿಹರ ಕರುನಾಡ ಕದಂಬ ರಕ್ಷಣಾ ವೇದಿಕೆಯಿಂದ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ಮನವಿ ಸಲ್ಲಿಸಲಾಯಿತು.
ನಗರದ ನಗರಸಭಾ ಕಚೇರಿಯಲ್ಲಿ ಸೋಮವಾರ ದಾವಣಗೆರೆ ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಉಪ ಶಾಖೆ ಉದ್ಘಾಟನಾ ಸಮಾರಂಭಕ್ಕೆ ಸಂಸದರು ಆಗಮಿಸಿದ್ದರು. ಈ ಸಂದರ್ಭ ವೇದಿಕೆಯ ರಾಜ್ಯಾಧ್ಯಕ್ಷ ಹೆಚ್.ಸುಧಾಕರ್ ಸಂಸದರಿಗೆ ಮನವಿ ಸಲ್ಲಿಸಿದರು.ಹಲವು ವರ್ಷಗಳಿಂದ ನಗರದ ಬಡವರಿಗೆ ಆಶ್ರಯ ಮನೆಗಳನ್ನು ನೀಡಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತಂದು ಬಡವರಿಗೆ ಆಶ್ರಯ ಮನೆ ನಿರ್ಮಿಸಿ ಕೊಡಬೇಕು. ಹರಿಹರ ಪಟ್ಟಣದಲ್ಲಿ ಸ್ವಚ್ಛತೆಗೆ ಪೂರಕವಾಗಿ ನಗರಸಭೆಗೆ ನೂರು ಪೌರಕಾರ್ಮಿಕರನ್ನು ನೇಮಕಾತಿ ಮಾಡಬೇಕು. ಕನ್ನಡ ಭವನ ನಿರ್ಮಾಣ, ಐತಿಹಾಸಿಕ ಹರಿಹರೇಶ್ವರ ದೇವಸ್ಥಾನಕ್ಕೆ ವೀಕ್ಷಣೆಗೆ ಆಗವಿಸುವರಿಗೆ ಸ್ನಾನಗೃಹ ,ಶೌಚಾಲಯ ನಿರ್ಮಾಣ, ನಗರದಲ್ಲಿ ಜನದಟ್ಟಣೆಯಿಂದ ಅಪಘಾತ ಸಂಖ್ಯೆಗಳು ಹೆಚ್ಚಾಗಿವೆ ಇದರ ನಿಯಂತ್ರಣಕ್ಕೆ ಟ್ರಾಫಿಕ್ ಪೊಲೀಸ್ ಠಾಣೆ ಸ್ಥಾಪನೆ ಮಾಡಬೇಕೆಂದು ಕೋರಿದರು.
ಜಿಲ್ಲಾಧ್ಯಂತ ಆಂಗ್ಲ ನಾಮಪಲಕಗಳು ಹೆಚ್ಚಾಗಿದ್ದು, ಅವುಗಳನ್ನು ತೆರವು ಮಾಡಲು ಆಯಾ ತಾಲೂಕು ವ್ಯಾಪ್ತಿಯ ಅಧಿಕಾರಿಗಳಿಗೆ ಸೂಚನೆ ನೀಡಬೇಕು. ಪತ್ರಕರ್ತರಿಗೆ ಆಶ್ರಯ ಯೋಜನೆ ಅಡಿಯಲ್ಲಿ ಮನೆ ನೀಡಬೇಕೆಂದು ಸಹ ಮನವಿ ಮಾಡಿದರು.ವೇದಿಕೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
- - - -12ಎಚ್‍ಆರ್‍ಆರ್02:ಹರಿಹರದ ಕರುನಾಡ ಕದಂಬ ರಕ್ಷಣಾ ವೇದಿಕೆಯಿಂದ ವಿವಿಧ ಬೇಡಿಕೆ ಈಡೇರಿಸುವಂತೆ ಸಂಸದೆ ಡಾ.ಪ್ರಭಾ ಅವರಿಗೆ ಸೋಮವಾರ ಮನವಿ ಸಲ್ಲಿಸಲಾಯಿತು.