ಸಾರಾಂಶ
ಜಿಲ್ಲಾ ಗೃಹ ರಕ್ಷಕದಳದ ಜಿಲ್ಲಾಮಟ್ಟದ ಕ್ರೀಡಾಕೂಟ ಸಮಾರೋಪ ಸಮಾರಂಭವು ಗುರುವಾರ ನಗರದ ಜಿಲ್ಲಾ ಗೃಹರಕ್ಷಕ ದಳ ಕಚೇರಿ ಆವರಣದಲ್ಲಿ ನಡೆಯಿತು.
ಕನ್ನಡಪ್ರಭ ವಾರ್ತೆ ಉಡುಪಿ
ಜಿಲ್ಲಾ ಗೃಹ ರಕ್ಷಕದಳದ ಜಿಲ್ಲಾಮಟ್ಟದ ಕ್ರೀಡಾಕೂಟ ಸಮಾರೋಪ ಸಮಾರಂಭವು ಗುರುವಾರ ನಗರದ ಜಿಲ್ಲಾ ಗೃಹರಕ್ಷಕ ದಳ ಕಚೇರಿ ಆವರಣದಲ್ಲಿ ನಡೆಯಿತು.ಮುಖ್ಯ ಅತಿಥಿಯಾಗಿದ್ದ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ ಮಾತನಾಡಿ, ತುರ್ತು ಸಂದರ್ಭದಲ್ಲಿ ಪೊಲೀಸ್ ಇಲಾಖೆಯೊಂದಿಗೆ ಗೃಹರಕ್ಷಕದಳವು ಕಾರ್ಯನಿರ್ವಹಿಕೊಂಡು ಬಂದಿದ್ದು, ಪೊಲೀಸ್ ಸಿಬ್ಬಂದಿ ನೇಮಕಾತಿ ಸಂದರ್ಭ ಗೃಹರಕ್ಷಕರಿಗೆ ಪ್ರಥಮ ಪ್ರಾಶಸ್ತ್ಯ ನೀಡಬೇಕು ಎಂದು ಅಭಿಪ್ರಾಯಪಟ್ಟರು.
ಉದ್ಯಮಿ ಧೀರಜ್ ಹೆಜಮಾಡಿ, ಜಿಲ್ಲಾ ಕಚೇರಿ ಅಧೀಕ್ಷಕ ರತ್ನಾಕರ ವೇದಿಕೆಯಲ್ಲಿದ್ದರು. ಗೃಹರಕ್ಷಕ ದಳದ ಜಿಲ್ಲಾ ಸೆಕೆಂಡ್ ಇನ್ ಕಮಾಂಡೆಂಟ್ ಕೆ.ಸಿ.ರಾಜೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ಸೌಮ್ಯಾ ಬಹುಮಾನಿತರ ಪಟ್ಟಿ ವಾಚಿಸಿದರು. ಬೈಂದೂರು ಘಟಕದ ಪ್ಲಟೂನ್ ಕಮಾಂಡರ್ ರಾಘವೇಂದ್ರ ಎನ್.ಸ್ವಾಗತಿಸಿದರು. ಬ್ರಹ್ಮಾವರ ಘಟಕದ ಪ್ಲಟೂನ್ ಕಮಾಂಡರ್ ಸ್ಟೀವನ್ ಪ್ರಕಾಶ್ ನಿರೂಪಿಸಿದರು. ಉಡುಪಿ ಘಟಕದ ಸೆಕ್ಷನ್ ಲೀಡರ್ ದಿನೇಶ್ ವಂದಿಸಿದರು.