ಸಾರಾಂಶ
ಪೊಲೀಸ್ ಸಿಬ್ಬಂದಿಗಳೊಂದಿಗೆ ಗೃಹರಕ್ಷಕರು ಸಾರ್ವಜನಿಕರ ಆಸ್ತಿಪಾಸ್ತಿಗಳ ರಕ್ಷಣೆ ಸಂಚಾರ ನಿಯಂತ್ರಣ ಇನ್ನಿತರ ಸಂದರ್ಭದಲ್ಲಿ ಜನರಿಗೆ ಸೂಕ್ತ ರಕ್ಷಣೆ ಒದಗಿಸುತ್ತಿದ್ದಾರೆ ಎಂದು ಬಿ.ಪಿ. ದಿನೇಶ್ ಕುಮಾರ್ ಹೇಳಿದರು.
ಕನ್ನಡಪ್ರಭ ವಾರ್ತೆ ಕುಶಾಲನಗರ ಪೊಲೀಸ್ ಸಿಬ್ಬಂದಿಗಳೊಂದಿಗೆ ಗೃಹರಕ್ಷಕರು ಸಾರ್ವಜನಿಕರ ಆಸ್ತಿ, ಪಾಸ್ತಿಗಳ ರಕ್ಷಣೆ, ಸಂಚಾರ ನಿಯಂತ್ರಣ ಇನ್ನಿತರ ಸಂದರ್ಭದಲ್ಲಿ ಜನರಿಗೆ ಸೂಕ್ತ ರಕ್ಷಣೆ ಒದಗಿಸುತ್ತಿದ್ದಾರೆ ಎಂದು ಕೊಡಗು ಜಿಲ್ಲಾ ಹೆಚ್ಚುವರಿ ಪೋಲಿಸ್ ಅಧೀಕ್ಷಕ ಬಿ.ಪಿ.ದಿನೇಶ್ ಕುಮಾರ್ ಹೇಳಿದರು.ಕುಶಾಲನಗರ ಪಟ್ಟಣದಲ್ಲಿ ಪೊಲೀಸ್ ಠಾಣೆಯ ಬಳಿ ಕೊಡಗು ಜಿಲ್ಲೆ ಗೃಹರಕ್ಷಕ ದಳದ ಕುಶಾಲನಗರ ಘಟಕದ ನೂತನ ಕಚೇರಿಯನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.ಗೃಹರಕ್ಷಕ ದಳದ ಸಿಬ್ಬಂದಿ ಬಹಳ ಶಿಸ್ತು, ಸಂಯಮದಿಂದ ಕರ್ತವ್ಯ ನಿರ್ವಹಿಸುತ್ತಿರುವುದು ಸಂತೋಷದ ವಿಷಯ ಎಂದ ಅವರು ಬಹಳ ವರ್ಷಗಳಿಂದ ಗೃಹರಕ್ಷಕ ದಳದ ಸಿಬ್ಬಂದಿಗೆ ಕಚೇರಿ ಅವಶ್ಯಕತೆ ಇತ್ತು. ಇದೀಗ ಪೋಲಿಸ್ ಠಾಣೆಯ ಪಕ್ಕದಲ್ಲಿಯೇ ಇರುವ ಇಲಾಖೆಯ ಕಟ್ಟಡದಲ್ಲಿ ಕಚೇರಿಗೆ ಆರಂಭಿಸಲು ಅವಕಾಶ ಸಿಕ್ಕಿರುವುದು ತುಂಬ ಅನುಕೂಲವಾಗಿದೆ ಎಂದರು.
ಈ ಸಂದರ್ಭ ಸೋಮವಾರಪೇಟೆ ವಿಭಾಗದ ಪೋಲಿಸ್ ಉಪ ಅಧೀಕ್ಷಕ ಚಂದ್ರಶೇಖರ್, ಪೋಲಿಸ್ ವೃತ್ತ ನಿರೀಕ್ಷಕ ಬಿ.ಎಸ್.ದಿನೇಶ್ ಕುಮಾರ್, ಟೌನ್ ಪೊಲೀಸ್ ಠಾಣೆಯ ಉಪ ನಿರೀಕ್ಷಕ ಗಣೇಶ್, ಗ್ರಾಮಾಂತರ ಪೋಲಿಸ್ ಠಾಣೆ ಉಪ ನಿರೀಕ್ಷಕ ಎನ್.ರಾಮಚಂದ್ರ, ಗೃಹ ರಕ್ಷಕ ದಳದ ಡಿ.ಅಕ್ಷಯ್ ಕುಮಾರ್ ಹಾಗೂ ಪೊಲೀಸ್ ಸಿಬ್ಬಂದಿ ಮತ್ತು ಗೃಹರಕ್ಷಕ ದಳದ ಸಿಬ್ಬಂದಿ ಭಾಗವಹಿಸಿದ್ದರು.;Resize=(128,128))
;Resize=(128,128))
;Resize=(128,128))