ಸಾರಾಂಶ
ಲೋಕಸಭಾ ಚುನಾವಣೆ ಸಮೀಪಿಸುತ್ತಿರುವಂತೆಯೇ ಗೃಹ ಸಚಿವ ಡಾ. ಜಿ ಪರಮೇಶ್ವರ್ ತುಮಕೂರು ಜಿಲ್ಲೆಯ ಪ್ರಭಾವಿ ಒಕ್ಕಲಿಗ ಸಮುದಾಯದ ಸ್ವಾಮೀಜಿಗಳನ್ನು ಭೇಟಿ ಮಾಡಿದ್ದಾರೆ
ಕೊರಟಗೆರೆ: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವಂತೆಯೇ ಗೃಹ ಸಚಿವ ಡಾ. ಜಿ ಪರಮೇಶ್ವರ್ ತುಮಕೂರು ಜಿಲ್ಲೆಯ ಪ್ರಭಾವಿ ಒಕ್ಕಲಿಗ ಸಮುದಾಯದ ಸ್ವಾಮೀಜಿಗಳನ್ನು ಭೇಟಿ ಮಾಡಿ ಲೋಕಸಭಾ ಚುನಾವಣೆಯ ಬಗ್ಗೆ ಚರ್ಚಿಸಿ ಕಾಂಗ್ರೆಸ್ ಅಭ್ಯರ್ಥಿಯ ಪರ ಮತಯಾಚನೆ ಮಾಡಿದ್ದಲ್ಲದೆ ಕೊರಟಗೆರೆ ತಾಲೂಕಿನ ಕೋಳಾಲ ಹೋಬಳಿಯ ಪ್ರಭಾವಿ ಲಿಂಗಾಯತ ಸಮುದಾಯದ ಮುಖಂಡರುಗಳನ್ನು ಭೇಟಿ ಮಾಡಿ ಮತಯಾಚನೆ ಮಾಡುವ ಮೂಲಕ ಲಿಂಗಾಯಿತ ಮಾತುಗಳು ಚದುರದಂತೆ ಮತ ಬೇಟೆಗಿಳಿದ್ದಾರೆ. ಕೊರಟಗೆರೆ ತಾಲೂಕಿನ ಸುಪ್ರಸಿದ್ಧ ಎಲೆರಾಂಪುರದ ಕುಂಚಿಟಿಗ ಮಹಾಸಂಸ್ಥಾನ ಮಠದ ಶ್ರೀ ಹನುಮಂತನಾಥ ಸ್ವಾಮೀಜಿ ಭೇಟಿ ಮಾಡಿ, ಆಶೀರ್ವಾದ ಪಡೆದುಮುದ್ದಹನುಮೇಗೌಡ ಪರ ಮತಯಾಚನೆ ಮಾಡಿದರು. ನಂತರ ಎಲೆ ರಾಂಪುರದ ಲಿಂಗಾಯಿತ ಮುಖಂಡರಾದ ಚಂದ್ರಶೇಖರ್, ನಟರಾಜಪ್ಪ, ಚಂದ್ರಣ್ಣ, ಇರಕಸಂದ್ರ ಕಾಲೋನಿಯ ರಾಜಣ್ಣ. ಆರ್.ಆರ್.ಆರ್ ರಾಜಣ್ಣ ಸೇರಿದಂತೆ ಇತರರನ್ನು ಭೇಟಿ ಮಾಡಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅಶ್ವಥ್ ನಾರಾಯಣ್, ಅರಕೆರೆ ಶಂಕರ್, ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಮಹಾಲಿಂಗಯ್ಯ, ಮಾಜಿ ತಾಲೂಕು ಪಂಚಾಯತಿ ಸದಸ್ಯ ಬೋರಣ್ಣ, ಹಾಲಿ ಗ್ರಾ.ಪಂ ಅಧ್ಯಕ್ಷ ಚಂದ್ರಶೇಖರ್ ,ಮಾಜಿ ಅಧ್ಯಕ್ಷ ರಂಗಯ್ಯ, ಸದಸ್ಯರಾದ ಪವನ್ ಕುಮಾರ್, ಮುಖಂಡ ಮಧು ಸೇರಿದಂತೆ ಹಲವು ಮುಖಂಡರು ಇದ್ದರು.