ಗೃಹ ಸಚಿವರ ರಾಜೀನಾಮೆಗೆ ಆಗ್ರಹ

| Published : May 19 2024, 01:46 AM IST

ಸಾರಾಂಶ

ಕನ್ನಡಪ್ರಭ ವಾರ್ತೆ ಚಿಕ್ಕೋಡಿಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಾಗೂ ಅಂಜಲಿ ಯುವತಿಯರ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಚಿಕ್ಕೋಡಿಯ ಬಸವ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿಜದರು. ಜತೆಗೆ ಗೃಹ ಸಚಿವರ ರಾಜೀನಾಮೆ ನೀಡುವಂತೆ ಆಗ್ರಹಿಸಿದರು.

ಚಿಕ್ಕೋಡಿಯ ಬಿಜೆಪಿ ಕಚೇರಿಯಿಂದ ಮೆರವಣಿಗೆ ಹೊರಟ ಪ್ರತಿಭಟನಾಕಾರರು ಬಸವ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆ ಉದ್ದಕ್ಕೂ ಬಿಜೆಪಿ ಕಾರ್ಯಕರ್ತರು ರಾಜ್ಯಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ, ಉಪವಿಭಾಗಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಬಳಿಕ ಮಹಿಳಾ ಮೋರ್ಚಾ ಅಧ್ಯಕ್ಷ ಶಾಂಭವಿ ಅಶ್ವತಪೂರ ಮಾತನಾಡಿ, ರಾಜ್ಯದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲ. ಕಳೆದ 6 ತಿಂಗಳಿಂದ ರಾಜ್ಯದಲ್ಲಿ ಯುವತಿಯರ ಸರಣಿ ಹತ್ಯೆಗಳು ನಡೆಯುತ್ತಿವೆ. ವಂಟಮೂರಿ ಪ್ರಕರಣ, ನೇಹಾ ಕೊಲೆ ಹಾಗೂ ಇತ್ತೀಚಿಗೆ ಅಂಜಲಿ ಕೊಲೆಗಳು ರಾಜ್ಯವನ್ನು ಬೆಚ್ಚಿ ಬೀಳಿಸಿವೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟು ಹೋಗಿದೆ. ಗೃಹ ಸಚಿವ ಜಿ.ಪರಮೇಶ್ವರ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.

ಚಿಕ್ಕೋಡಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ ಅಪ್ಪಾಜಿಗೋಳ, ಬಸವಜ್ಯೋತಿ ಯೂಥ್‌ ಫೌಂಡೇಶನ್ ಅಧ್ಯಕ್ಷ ಬಸವಪ್ರಸಾದ ಜೊಲ್ಲೆ, ಅಪ್ಪಾಸಾಹೇಬ ಚೌಗಲಾ, ವಿಶ್ವನಾಥ ಕಮತೆ, ಶಿವಾನಂದ ನವಲಿಹಾಳೆ, ಸಂಜೀವ ಪಾಟೀಲ ಸೇರಿದಂತೆ ಇನ್ನಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.--------------