ಪ್ರವಾಸಿಗರ ರಕ್ಷಣೆಗೆ ಸೂಕ್ತ ಮುನ್ನೆಚ್ಚರಿಕೆ ವಹಿಸಿ

| Published : Mar 14 2025, 12:32 AM IST

ಸಾರಾಂಶ

ಪ್ರವಾಸಿಗರು ಭೇಟಿ ನೀಡಿದ ಸಂದರ್ಭದಲ್ಲಿ ಅವರ ರಕ್ಷಣೆಯ ಕುರಿತು ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮ ಮತ್ತು ಪಾಲಿಸಬೇಕಾದ ನಿಯಮಗಳ ಬಗ್ಗೆ ತಿಳಿಸಿದರು

ಕನ್ನಡಪ್ರಭ ವಾರ್ತೆ ಮೈಸೂರುಸ್ಥಳೀಯ ಹಾಗೂ ವಿದೇಶಿ ಪ್ರವಾಸಿಗರು ಹೋಂ ಸ್ಟೇ, ರೆಸಾರ್ಟ್ ಹಾಗೂ ಲಾಡ್ಜ್‌ ಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರ ರಕ್ಷಣೆಗೆ ಸೂಕ್ತ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು ಎಂದು ಮೈಸೂರು ಎಸ್ಪಿ ಎನ್. ವಿಷ್ಣುವರ್ಧನ್ ಸೂಚಿಸಿದರು.ನಗರದ ಜಲಪುರಿಯಲ್ಲಿರುವ ತಮ್ಮ ಕಚೇರಿಯ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ವ್ಯಾಪ್ತಿಯ ಹೋಂ ಸ್ಟೇ, ರೆಸಾರ್ಟ್, ಲಾಡ್ಜ್‌ ಗಳ ಮಾಲೀಕರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರವಾಸಿಗರು ಭೇಟಿ ನೀಡಿದ ಸಂದರ್ಭದಲ್ಲಿ ಅವರ ರಕ್ಷಣೆಯ ಕುರಿತು ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮ ಮತ್ತು ಪಾಲಿಸಬೇಕಾದ ನಿಯಮಗಳ ಬಗ್ಗೆ ತಿಳಿಸಿದರು. ಹೆಚ್ಚುವರಿ ಎಸ್ಪಿಗಳಾದ ಸಿ. ಮಲ್ಲಿಕ್, ಎಲ್‌. ನಾಗೇಶ್‌, ಜಿಲ್ಲಾ ಪೊಲೀಸ್ ಅಧಿಕಾರಿಗಳು ಇದ್ದರು.