ಕುಶಾಲನಗರದಲ್ಲಿ ನಡೆಯುತ್ತಿರುವ ಮೈಸೂರು ವಿಭಾಗ ಮಟ್ಟದ 17ರ ವಯೋಮಾನದ ಬಾಲಕ ಬಾಲಕಿಯರ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿಯಲ್ಲಿ ಒಟ್ಟು 16 ತಂಡಗಳು ಗೆಲವಿಗಾಗಿ ಸೆಣಸಾಟ ನಡೆಸಿದವು.
ಕನ್ನಡಪ್ರಭ ವಾರ್ತೆ ಕುಶಾಲನಗರ
ಕುಶಾಲನಗರದಲ್ಲಿ ನಡೆಯುತ್ತಿರುವ ಮೈಸೂರು ವಿಭಾಗ ಮಟ್ಟದ 17ರ ವಯೋಮಾನದ ಬಾಲಕ ಬಾಲಕಿಯರ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿಯಲ್ಲಿ ಒಟ್ಟು 16 ತಂಡಗಳು ಗೆಲವಿಗಾಗಿ ಸೆಣಸಾಟ ನಡೆಸಿದವು.ಕೊಡಗು ಸೇರಿದಂತೆ ದಕ್ಷಿಣ ಕನ್ನಡ, ಮೈಸೂರು, ಹಾಸನ, ಚಾಮರಾಜನಗರ, ಉಡುಪಿ, ಮಂಡ್ಯ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಬಾಲಕ ಮತ್ತು ಬಾಲಕಿಯರ ತಂಡ ಕಬಡ್ಡಿ ಪಂದ್ಯಾಟದಲ್ಲಿ ಪಾಲ್ಗೊಂಡಿದ್ದು ಶುಕ್ರವಾರ ಸಂಜೆ ಮಳೆ ಕಾರಣ ಸ್ವಲ್ಪಕಾಲ ಆಟಕ್ಕೆ ಅಡ್ಡಿ ಉಂಟಾಯಿತು.
ಶನಿವಾರ ಬೆಳಗ್ಗಿನಿಂದ ಸಂಜೆ ತನಕ ನಡೆದ ಪಂದ್ಯಾವಳಿಯಲ್ಲಿ ಕೊಡಗು ಹಾಸನ ಬಾಲಕಿಯರ ತಂಡಗಳ ನಡುವೆ ನಡೆದ ಸೆಣಸಾಟದಲ್ಲಿ ಕೊಡಗು ಜಿಲ್ಲೆಯ ಕುಶಾಲನಗರ ತಂಡ ಫೈನಲ್ ತಲುಪಿದರೆ ಚಿಕ್ಕಮಗಳೂರು ಕೊಡಗು ಬಾಲಕರ ತಂಡದಲ್ಲಿ ಚಿಕ್ಕಮಗಳೂರು ಫೈನಲ್ ಹಂತಕ್ಕೆ ಕಾಲಿಟ್ಟಿದೆ.ಕೊಡಗು ಜಿಲ್ಲಾಡಳಿತ ಆಶ್ರಯದಲ್ಲಿ ಜ್ಞಾನಭಾರತಿ ಪ್ರೌಢಶಾಲೆ ಸಹಯೋಗದೊಂದಿಗೆ ನಡೆಯುತ್ತಿರುವ ಪಂದ್ಯಾವಳಿಗೆ ಕ್ಷೇತ್ರ ಶಾಸಕ ಡಾ ಮಂತರ್ ಗೌಡ ಅವರು ಚಾಲನೆ ನೀಡಿದ್ದು ಈ ಸಂದರ್ಭ ಕುಶಾಲನಗರ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಪ್ರಮೋದ್ ಮುತ್ತಪ್ಪ ಕುಶಾಲನಗರ ಮಾರುತಿ ವಿದ್ಯಾ ಸಂಸ್ಥೆಯ ಅಧ್ಯಕ್ಷರಾದ ಜಿ ಎಲ್ ನಾಗರಾಜು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಎಂ ಸಿ ಅರುಣ್ ಕುಮಾರ್, ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷರಾದ ಹೆಚ್ ಜಿ ಕುಮಾರ್, ಕರ್ನಾಟಕ ರಾಜ್ಯ ಸರ್ಕಾರಿ ಶಿಕ್ಷಕರ ಸಂಘದ ಖಜಾಂಚಿ ಡಾ ಸದಾಶಿವ ಎಸ್ ಪಲ್ಯದ್, ಬಿ ಟಿ ಪೂರ್ಣೇಶ್, ಕೆ ಆರ್ ರತ್ನಕುಮಾರ್ ಮಂಜುನಾಥ್ ಸುಜಾತ ಮತ್ತು ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಹೆಚ್ ಶ್ರೀನಿವಾಸ್, ಕ್ಷೇತ್ರ ಶಿಕ್ಷಣಾಧಿಕಾರಿ ಎಂ ಕೃಷ್ಣಪ್ಪ ದೈಹಿಕ ಶಿಕ್ಷಣ ಪರಿವೀಕ್ಷಕರಾದ ಕೆ ಎಂ ಬಾಲಚಂದ್ರ, ಉತ್ತಪ್ಪ ಮತ್ತು ಕುಶಾಲನಗರ ಜ್ಞಾನಭಾರತಿ ಪ್ರೌಢಶಾಲೆಯ ಪ್ರಮುಖರು ಪಾಲ್ಗೊಂಡಿದ್ದರು.