ಸಾರಾಂಶ
ಕನ್ನಡಪ್ರಭ ವಾರ್ತೆ ಚಳ್ಳಕೆರೆ
ತಾಲೂಕಿನಾದ್ಯಂತ ಸಾವಿರಾರು ರೈತರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ತಾಲೂಕು ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ, ನೆಹರೂ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಸರ್ಕಾರಕ್ಕೆ ಒತ್ತಾಸಿದರು. ಅಂಬೇಡ್ಕರ್ ವೃತ್ತದಲ್ಲಿ ರಸ್ತೆ ತಡೆದು ಬೇಡಿಕೆಗಳ ಈಡೇರಿಸುವ ತನಕ ಪ್ರತಿಭಟನೆ ಮುಂದುವರೆಸುವ ಎಚ್ಚರಿಕೆ ನೀಡಿದರು.ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಉಪಾಧ್ಯಕ್ಷ ರೆಡ್ಡಿಹಳ್ಳಿ ವೀರಣ್ಣ ಅಖಂಡ ಕರ್ನಾಟಕ ರೈತ ಸಂಘ ಅಧ್ಯಕ್ಷ ಸಿ.ಚಿಕ್ಕಣ್ಣ, ರೈತ ಸಂಘದ ಜಿಲ್ಲಾ, ತಾಲ್ಲೂಕು ಪದಾಧಿಕಾರಿಗಳು, ಯುವ ಮತ್ತು ಮಹಿಳಾ ಘಟಕದ ಸಹಯೋಗದಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ತಾಲೂಕು ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸುವ ಸಂದರ್ಭದಲ್ಲಿ ಕ್ಷೇತ್ರದ ಶಾಸಕ, ಸಣ್ಣ ಕೈಗಾರಿಕೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಟಿ.ರಘುಮೂರ್ತಿ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾ ನಿರತ ರೈತ ಮುಖಂಡರು ಹಾಗೂ ರೈತರೊಂದಿಗೆ ಚರ್ಚೆ ನಡೆಸಿ ತಮ್ಮ ಭೇಡಿಕೆ ಈಡೇರಿಕೆ ಬಗ್ಗೆ ಸರ್ಕಾರದ ಗಮನಸೆಳೆಯುವ ಭರವಸೆ ನೀಡಿದರು.
ಚಳ್ಳಕೆರೆ ತಾಲೂಕನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸಬೇಕೆಂದು ತಾವು ಮಾಡಿದ ಮನವಿ ಬೆಳೆನಷ್ಟ, ಬೆಳೆ ಪರಿಹಾರ, ಮಧ್ಯಂತರ ಪರಿಹಾರ, ಖಾಸಗಿ ಬೆಳೆವಿಮೆ ಕಂಪನಿಗಳು ರೈತರಿಗೆ ಹಣಪಾವತಿ ಮಾಡದೇ ಇರುವ ಬಗ್ಗೆ ಈಗಾಗಲೇ ಸಂಬಂಧಪಟ್ಟ ಸಚಿವರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದೆ. ವಿಶೇಷವಾಗಿ ಚಳ್ಳಕೆರೆ ತಾಲೂಕಿನ ರೈತರು ತೀರ್ವ ಸಂಕಷ್ಟದಲ್ಲಿ ಸಿಲುಕಿದ್ದಾರೆ. ಈ ಬಾರಿ ರೈತರಿಗೆ ಎರಡು ಕಡೆ ನಷ್ಟ ಉಂಟಾಗಿದ್ದು ರೈತರು ತಮ್ಮ ಬದುಕನ್ನು ಸಾಗಿಸಲು ಕಷ್ಟಪಡುವಂತಾಗಿದೆ. ಒಂದು ಹಂತದಲ್ಲಿ ಮಳೆಬಾರದೆ ನಷ್ಟವಾದರೆ ಇನ್ನೊಂದು ಹಂತದಲ್ಲಿ ಬಿತ್ತನೆಯಾದ ಮೇಲೆ ಹೆಚ್ಚಾದ ಮಳೆ ರೈತರ ಬೆಳೆಯನ್ನು ಕೊಚ್ಚಿಕೊಂಡು ಹೋಗಿದ್ದು ರೈತರ ಸಂಕಷ್ಟಕ್ಕೆ ಕಾರಣವಾಗಿದೆ. ತಮ್ಮೆಲ್ಲರ ಪರವಾಗಿ ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಕೃಷಿ ಸಚಿವ ಚಲುವರಾಯಸ್ವಾಮಿ, ಕಂದಾಯ ಸಚಿವ ಕೃಷ್ಣಬೈರೇಗೌಡ ಇವರನ್ನು ಭೇಟಿ ಮಾಡಿ ಪರಿಹಾರ ನೀಡುವ ನಿಟ್ಟಿನಲ್ಲಿ ಕಾರ್ಯೋನ್ಮುಖನಾಗುವ ಭರವಸೆ ನೀಡಿದರು. ರೈತರು ತಾಳ್ಮೆಯಿಂದ ಕಾಯಬೇಕಿದೆ, ಸರ್ಕಾರ ಮೇಲೆ ಒತ್ತಡ ಹೇರಿ ನಿಮ್ಮ ಸಮಸ್ಯೆಗಳ ನಿವಾರಣೆಗೆ ಪ್ರಾಮಾಣಿಕ ಪ್ರಯತ್ನ ನಡೆಸುವ ಭರವಸೆ ನೀಡಿದರು.ಕರ್ನಾಟಕ ರೈತ ಸಂಘ ಉಪಾಧ್ಯಕ್ಷ ರೆಡ್ಡಿಹಳ್ಳಿ ವೀರಣ್ಣ, ಅಖಂಡ ಕರ್ನಾಟಕ ರೈತ ಸಂಘ ಅಧ್ಯಕ್ಷ ಚಿಕ್ಕಣ್ಣ, ಚನ್ನಕೇಶವ ಮೂರ್ತಿ, ಬುಡ್ನಹಟ್ಟಿ ತಿಪ್ಪೇಸ್ವಾಮಿ, ದೇವರಹಳ್ಳಿ ರಾಜಣ್ಣ, ಎಚ್.ಪ್ರಕಾಶ್, ಎಸ್.ಎಚ್.ಸೈಯದ್, ತಿಪ್ಪೇಸ್ವಾಮಿ, ಶಿವಲಿಂಗಪ್ಪ, ತಹಸೀಲ್ದಾರ್ ರೇಹಾನ್‌ಪಾಷ, ಕಂದಾಯಾಧಿಕಾರಿ ತಿಪ್ಪೇಸ್ವಾಮಿ, ಗ್ರಾಮಲೆಕ್ಕಿಗ ಪ್ರಕಾಶ್ ಮುಂತಾದವರು ಇದ್ದರು.
)
)
;Resize=(128,128))
;Resize=(128,128))
;Resize=(128,128))