ಸರ್ಕಾರಿ ನೌಕರರಿಂದ ಪ್ರಾಮಾಣಿಕ ಸೇವೆ ಅಪೇಕ್ಷಣೀಯ: ಪರಮೇಶ್‌

| Published : Jun 07 2024, 12:31 AM IST

ಸಾರಾಂಶ

ಕೊಡ್ಲಿಪೇಟೆ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಡಿ ದರ್ಜೆ ನೌಕರರಾಗಿ 42 ವರ್ಷಗಳ ಕಾಲ ಡಿ ದರ್ಜೆ ನೌಕರರಾಗಿ ಸುದೀರ್ಘ ಕರ್ತವ್ಯ ನಿರ್ವಹಿಸಿ ವಯೋನಿವೃತ್ತಿ ಹೊಂದಿದ ಕೆ.ಆರ್.ಮಂಜೇಗೌಡ ಅವರಿಗೆ ಸಂಸ್ಥೆ ವತಿಯಿಂದ ಬೀಳ್ಕೊಡುಗೆ ಸಮಾರಂಭ ನಡೆಯಿತು.

ಕನ್ನಡಪ್ರಭ ವಾರ್ತೆ ಶನಿವಾರಸಂತೆ

ಸರ್ಕಾರಿ ನೌಕರರು ನಿಷ್ಠೆ, ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸುವುದರ ಮೂಲಕ ಸಮಾಜದಲ್ಲಿ ಗೌರವ ಸಂಪಾದನೆ ಮಾಡಬೇಕು ಎಂದು ಕೊಡ್ಲಿಪೇಟೆ ವಿದ್ಯಾಸಂಸ್ಥೆ ಕಾರ್ಯದರ್ಶಿ ಕೆ.ಎಸ್.ಪರಮೇಶ್ ಹೇಳಿದ್ದಾರೆ.

ಕೊಡ್ಲಿಪೇಟೆ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಡಿ ದರ್ಜೆ ನೌಕರರಾಗಿ 42 ವರ್ಷಗಳ ಕಾಲ ಡಿ ದರ್ಜೆ ನೌಕರರಾಗಿ ಸುದೀರ್ಘ ಕರ್ತವ್ಯ ನಿರ್ವಹಿಸಿ ವಯೋನಿವೃತ್ತಿ ಹೊಂದಿದ ಕೆ.ಆರ್.ಮಂಜೇಗೌಡ ಅವರಿಗೆ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದರು.

ಪ್ರತಿ ಸರ್ಕಾರಿ ನೌಕರರಿಗೆ ನಿವೃತ್ತಿ ಅನಿವಾರ್ಯ. ಯಾವುದೇ ಇಲಾಖೆಯಲ್ಲಿ ತಮ್ಮ ಕೆಲಸವನ್ನು ಯಶಸ್ವಿಯಾಗಬೇಕಾದರೆ ಮಾನವೀಯತೆ ಮತ್ತು ಸರಳತೆಯಿರಬೇಕು. ಮಂಜೇಗೌಡ ವೃತ್ತಿ ಮತ್ತು ಪ್ರವೃತ್ತಿಯಿಂದ ಉತ್ತಮ ಹೆಸರು ಗಳಿಸಿದ್ದಾರೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಉಪಾಧ್ಯಕ್ಷ ಶಂಭುಲಿಂಗಪ್ಪ ಮಾತನಾಡಿ, ಸರಳ ಸಜ್ಜನ ವ್ಯಕ್ತಿತ್ವ ಹೊಂದಿದ್ದ ಮಂಜೇಗೌಡ ಅವರು ಸಲ್ಲಿಸಿರುವ ಸೇವೆ ಅನನ್ಯ ಎಂದು ಬಣ್ಣಿಸಿದರು.

ಹಲಸಿನ ಮರ ಗೌರಮ್ಮ ಶಾಂತಮಲ್ಲಪ್ಪ ಪದವಿ ಕಾಲೇಜು ಪ್ರಾಂಶುಪಾಲ ಎಂ.ಆರ್. ನಿರಂಜನ್,

ಆಡಳಿತಾಧಿಕಾರಿ ಜಗದೀಶ್ ಬಾಬು, ಮುಖ್ಯ ಶಿಕ್ಷಕ ಅಬ್ದುಲ್ ರಬ್, ಸಂಸ್ಥೆಯ ಶಾಲಾ, ಕಾಲೇಜುಗಳ ಉಪನ್ಯಾಸಕರು, ಶಿಕ್ಷಕರು, ಸಿಬ್ಬಂದಿ, ಸಿಬ್ಬಂದಿಯೇತರರು ಹಾಗೂ ಮಂಜೇಗೌಡರ ಕುಟುಂಬ ವರ್ಗದವರು ಇದ್ದರು. ಸಂಸ್ಥೆ ವತಿಯಿಂದ ಮಂಜೇಗೌಡ ಅವರಿಗೆ ಶಾಲು ಹೊದಿಸಿ ನೆನಪಿನ ಕಾಣಿಕೆ ನೀಡಿ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಿದರು.