ಸಾರಾಂಶ
ಕನ್ನಡಪ್ರಭ ವಾರ್ತೆ, ಶೃಂಗೇರಿ
ಕ್ಷೇತ್ರದ ಮತದಾರರು ನಿರೀಕ್ಷೆಗೂ ಮೀರಿ ಅತ್ಯಧಿಕ ಮತಗಳಿಂದ ನನ್ನನ್ನು ಗೆಲ್ಲಿಸಿದ್ದಾರೆ. ಜನರ ಸಮಸ್ಯೆ, ಆಶೋತ್ತರಗಳಿಗೆ ಸ್ಪಂದಿಸಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದು ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.ಪಟ್ಟಣದ ಶ್ರೀ ಚಪ್ಪರದಾಂಜನೇಯ ಸ್ವಾಮಿ ದೇವಸ್ಥಾನದ ಸಭಾಂಗಣದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದರು. ಕ್ಷೇತ್ರದಲ್ಲಿ ಸಾಕಷ್ಟು ಸಮಸ್ಯೆಗಳಿದ್ದು ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್‌ವಸತಿ ಸಮಸ್ಯೆ, ಕೆರೆಕಟ್ಟೆ ರಾಷ್ಟ್ರೀಯ ಹೆದ್ದಾರಿ ಅಭಿವೃದ್ದಿ, ಗ್ರಾಮೀಣ ಪ್ರದೇಶಗಳಲ್ಲಿ ಮೊಬೈಲ್ ಟವರ್ ಸಮಸ್ಯೆ ಈ ಎಲ್ಲಾ ಸಮಸ್ಯೆಗಳ ಬಗ್ಗೆ ಗಂಭೀರವಾಗಿ ಚಿಂತಿಸಿ ಪರಿಹಾರಕ್ಕೆ ಪ್ರಯತ್ನ ಮಾಡುತ್ತೇನೆ ಎಂದರು.
ಮಾಜಿ ಸಚಿವ ಸಿ.ಟಿ.ರವಿ ಮಾತನಾಡಿ ರಾಜ್ಯದಲ್ಲಿ ಆಡಳಿತ ನಡೆಸುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ. ಬಿಟ್ಟಿ ಭಾಗ್ಯ ಗಳಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ. ರಾಜ್ಯವನ್ನು ಲೂಟಿ ಹೊಡೆಯುತ್ತಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಜನರು ಕಾಂಗ್ರೇಸ್‌ಗೆ ತಕ್ಕ ಪಾಠ ಕಲಿಸಿದ್ದಾರೆ. ಕೇಂದ್ರದಲ್ಲಿ ಮೋದಿ ನೇತೃತ್ವದ ಸರ್ಕಾರ 3ನೇ ಬಾರಿಗೆ ಮತ್ತೆ ಅಧಿಕಾರಕ್ಕೆ ಬಂದಿದ್ದು, ಜನರು ಇಟ್ಟ ನಿರೀಕ್ಷೆಯಾಗಿದೆ ಎಂದರು.ವಿಪ ಸದಸ್ಯ ದನಂಜಯ ಸರ್ಜಿ ಮಾತನಾಡಿ ದೇಶ ಮೊದಲು, ಆಮೇಲೆ ವ್ಯಕ್ತಿ. ಪ್ರತಿಯೊಬ್ಬರೂ ದೇಶಕ್ಕಾಗಿ ದುಡಿಯಬೇಕು. ದೇಶದಲ್ಲಿ ಉತ್ತಮ ಸರ್ಕಾರ, ಆಡಳಿತವಿದೆ. ರಾಜ್ಯದಲ್ಲಿಯೂ ಮುಂದಿನ ದಿನಗಳಲ್ಲಿ ಬದಲಾಗಬೇಕಿದೆ ಎಂದರು. ಈ ಸಂದರ್ಭದಲ್ಲಿ ಸ್ಥಳೀಯ ಬಿಜೆಪಿ ಮುಖಂಡರು ಇದ್ದರು.
21 ಶ್ರೀ ಚಿತ್ರ 2-ಶೃಂಗೇರಿ ಪಟ್ಟಣದ ಚಪ್ಪರದಾಂಜನೇಯ ಸ್ವಾಮಿ ದೇವಾಲಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಸಂಸದ ಕೋಟಾ ಶ್ರೀನಿವಾಸ ಪೂಜಾರಿಯನ್ನು ಅಭಿನಂದಿಸಲಾಯಿತು. ಸಿ.ಟಿ.ರವಿ,ದನಂಜಯ ಸರ್ಜಿ ಮತ್ತಿತರರು ಇದ್ದರು.