ಹೊನ್ನಾಳಿ, ಕೂಡಲಸಂಗಮ ಶ್ರೀಗಳ ಆಶೀರ್ವಾದ ಪಡೆದ ವಿನಯಕುಮಾರ್

| Published : Apr 16 2024, 01:09 AM IST

ಹೊನ್ನಾಳಿ, ಕೂಡಲಸಂಗಮ ಶ್ರೀಗಳ ಆಶೀರ್ವಾದ ಪಡೆದ ವಿನಯಕುಮಾರ್
Share this Article
  • FB
  • TW
  • Linkdin
  • Email

ಸಾರಾಂಶ

ದಾವಣಗೆರೆ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜಿ.ಬಿ. ವಿನಯಕುಮಾರ್ ಹೊನ್ನಾಳಿ ಹಿರೇಕಲ್ಮಠದಲ್ಲಿ ಡಾ.ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಮಹಾಸ್ವಾಮೀಜಿ ಹಾಗೂ ಕೂಡಲಸಂಗಮ ಪಂಚಮಸಾಲಿ ಸಮಾಜದ ಜಗದ್ಗುರು ಶ್ರೀ ಜಯಮೃತ್ಯುಂಜಯ ಮಹಾಸ್ವಾಮೀಜಿ ಅವರನ್ನು ಭೇಟಿಯಾಗಿ, ಆಶೀರ್ವಾದ ಪಡೆದರು.

ಕನ್ನಡಪ್ರಭ ವಾರ್ತೆ, ದಾವಣಗೆರೆ

ದಾವಣಗೆರೆ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜಿ.ಬಿ. ವಿನಯಕುಮಾರ್ ಹೊನ್ನಾಳಿ ಹಿರೇಕಲ್ಮಠದಲ್ಲಿ ಡಾ.ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಮಹಾಸ್ವಾಮೀಜಿ ಹಾಗೂ ಕೂಡಲಸಂಗಮ ಪಂಚಮಸಾಲಿ ಸಮಾಜದ ಜಗದ್ಗುರು ಶ್ರೀ ಜಯಮೃತ್ಯುಂಜಯ ಮಹಾಸ್ವಾಮೀಜಿ ಅವರನ್ನು ಭೇಟಿಯಾಗಿ, ಆಶೀರ್ವಾದ ಪಡೆದರು.

ಜಯಮೃತ್ಯುಂಜಯ ಶ್ರೀ ಮಾತನಾಡಿ, ಐಎಎಸ್, ಐಪಿಎಸ್‌ನಂಥ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುವ ನಿಮ್ಮ ಸಂಸ್ಥೆ ಬಗ್ಗೆ ಕೇಳಿದ್ದೇನೆ. ನೀವು ಇಲ್ಲಿಗೆ ಬಂದಿದ್ದೀರಾ. ಆಶೀರ್ವಾದ ಯಾವಾಗಲೂ ಇರುತ್ತದೆ. ನಿಮಗೆ ಒಳಿತಾಗಲಿ ಎಂದು ಹಾರೈಸಿದರು.

ಜಿ.ಬಿ. ವಿನಯಕುಮಾರ್ ಮಾತನಾಡಿ, ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಈಗಾಗಲೇ ನಾಮಪತ್ರ ಸಲ್ಲಿಕೆ ಮಾಡಿದ್ದೇನೆ. ಕಾಂಗ್ರೆಸ್ ಟಿಕೆಟ್ ಸಿಗುವ ವಿಶ್ವಾಸ ಇತ್ತು. ಆದರೆ, ಕೊನೆ ಗಳಿಗೆಯಲ್ಲಿ ಕೈ ತಪ್ಪಿತು. ಹಾಗಾಗಿ, ಪಕ್ಷೇತರನಾಗಿ ಸ್ಪರ್ಧೆ ಮಾಡಿದ್ದು, ಎಲ್ಲರೂ ಪ್ರೀತಿ- ವಿಶ್ವಾಸ ತೋರುತ್ತಿದ್ದಾರೆ ಎಂದು ಹೇಳಿದರು.

ಜಿಲ್ಲೆಯ ಬಹುತೇಕ ಹಳ್ಳಿಗಳಲ್ಲಿ ಪಾದಯಾತ್ರೆ ನಡೆಸಿದ್ದೇನೆ. ಜನರ ಅಭಿಪ್ರಾಯ ಸಂಗ್ರಹಿಸಿದ್ದೇನೆ. ಜನಾಭಿಪ್ರಾಯಕ್ಕೆ ಮಣಿದು ಚುನಾವಣೆಗೆ ಸ್ಪರ್ಧೆ ಮಾಡಿದ್ದೇನೆ. ಜನರು ತೋರಿರುವ ಪ್ರೀತಿ, ವಿಶ್ವಾಸ ಹಾಗೂ ತುಂಬಿರುವ ಆತ್ಮಸ್ಥೈರ್ಯದಿಂದ ಚುನಾವಣೆಗೆ ಸ್ಪರ್ಧಿಸಿದ್ದು, ನಿಮ್ಮ ಆಶೀರ್ವಾದ ಬೇಕು ಎಂದು ಕೋರಿದರು.

- - - -15ಕೆಡಿವಿಜಿ01, 02, 03:

ಹೊನ್ನಾಳಿಯಲ್ಲಿ ಪಕ್ಷೇತರ ಅಭ್ಯರ್ಥಿ ಜಿ.ಬಿ.ವಿನಯಕುಮಾರ್ ಉಭಯ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.