ಹೊನ್ನಾಳಮ್ಮ ದೇವಾಲಯದ ಲೋಕಾರ್ಪಣೆ

| Published : Feb 09 2025, 01:18 AM IST

ಸಾರಾಂಶ

ದೇವಾಲಯಗಳು ನಮ್ಮ ಸಂಸ್ಕೃತಿ ಪರಂಪರೆ ಮತ್ತು ಇತಿಹಾಸದ ಮೇಲೆ ಬೆಳಕು ಚೆಲ್ಲುವ ಜೀವಂತ ಸ್ಮಾರಕಗಳಾಗಿವೆ ಎಂದು ಮಾಜಿ ಸಚಿವ ಹಾಗೂ ಶಾಸಕ ಎ ಮಂಜು ತಿಳಿಸಿದರು. ರಾಮನಾಥಪುರ ಹತ್ತಿರವಿರುವ ಬೇಲಿ ಕರ್ಪೂರವಳ್ಳಿ ಗ್ರಾಮದಲ್ಲಿ ಶ್ರೀ ಹೊನ್ನಾಳಮ್ಮ ಹಾಗೂ ಚಿಕ್ಕಮ್ಮ ದೇವರ ನೂತನ ದೇವಸ್ಥಾನದ ಉದ್ಘಾಟನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಇಂದಿನ ಒತ್ತಡದ ಬದುಕಿನಲ್ಲಿ ದೇವರು ಮತ್ತು ಧರ್ಮದ ಹಾದಿಯಲ್ಲಿ ಸಾಗಿದರೆ ಮಾತ್ರ ನಾವು ಹಿಡಿದ ಕೆಲಸಗಳು ಕೈಗೂಡುವುದಲ್ಲದೆ ಮನಸ್ಸಿಗೆ ಶಾಂತಿ ಮತ್ತು ನೆಮ್ಮದಿ ಸಹ ದೊರೆಯುತ್ತದೆ ಎಂದರು.

ಕನ್ನಡಪ್ರಭ ವಾರ್ತೆ ರಾಮನಾಥಪುರ

ದೇವಾಲಯಗಳು ನಮ್ಮ ಸಂಸ್ಕೃತಿ ಪರಂಪರೆ ಮತ್ತು ಇತಿಹಾಸದ ಮೇಲೆ ಬೆಳಕು ಚೆಲ್ಲುವ ಜೀವಂತ ಸ್ಮಾರಕಗಳಾಗಿವೆ ಎಂದು ಮಾಜಿ ಸಚಿವ ಹಾಗೂ ಶಾಸಕ ಎ ಮಂಜು ತಿಳಿಸಿದರು.

ರಾಮನಾಥಪುರ ಹತ್ತಿರವಿರುವ ಬೇಲಿ ಕರ್ಪೂರವಳ್ಳಿ ಗ್ರಾಮದಲ್ಲಿ ಶ್ರೀ ಹೊನ್ನಾಳಮ್ಮ ಹಾಗೂ ಚಿಕ್ಕಮ್ಮ ದೇವರ ನೂತನ ದೇವಸ್ಥಾನದ ಉದ್ಘಾಟನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಇಂದಿನ ಒತ್ತಡದ ಬದುಕಿನಲ್ಲಿ ದೇವರು ಮತ್ತು ಧರ್ಮದ ಹಾದಿಯಲ್ಲಿ ಸಾಗಿದರೆ ಮಾತ್ರ ನಾವು ಹಿಡಿದ ಕೆಲಸಗಳು ಕೈಗೂಡುವುದಲ್ಲದೆ ಮನಸ್ಸಿಗೆ ಶಾಂತಿ ಮತ್ತು ನೆಮ್ಮದಿ ಸಹ ದೊರೆಯುತ್ತದೆ ಎಂದರು.

ಈ ಧಾರ್ಮಿಕ ಸಭೆಯಲ್ಲಿ ಅರಕಲಗೂಡು ಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ, ತೇಜೂರು ಮಠದ ಕಲ್ಯಾಣ ಸ್ವಾಮೀಜಿ, ಮಾಯಿಗೌಡನಹಳ್ಳಿ ಮಠದ ಶ್ರೀ ಸೋಮಶೇಖರ ಸ್ವಾಮೀಜಿ, ಕೆಸವತ್ತೂರು ಮಠದ ಬಸವರಾಜೇಂದ್ರ ಸ್ವಾಮೀಜಿ, ಶಿರದನಹಳ್ಳಿ ಮಠದ ಶ್ರೀ ಸದಾಶಿವ ಸ್ವಾಮಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಂತಾದವರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.