ಕನ್ನಡಪ್ರಭ ವಾರ್ತೆ ಬೆಳಗಾವಿನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರತಿಷ್ಠಿತ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿ ಸಮಾರಂಭದಲ್ಲಿ ಬೆಳಗಾವಿ ಸುಪುತ್ರರೊಬ್ಬರು ಪಾಲ್ಗೊಳ್ಳುವ ಮೂಲಕ ಜಿಲ್ಲೆಯ ಕೀರ್ತಿ ಹೆಚ್ಚಿಸಿದ್ದಾರೆ. ಪ್ಯಾರಾಲಿಂಪಿಕ್ ಕಮಿಟಿ ಆಫ್ ಇಂಡಿಯಾದ ಪ್ರಧಾನ ಕಾರ್ಯದರ್ಶಿ ಜಯವಂತ್ ಹಮ್ಮಣ್ಣವರ್ ಅವರು ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಳಗಾವಿ

ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರತಿಷ್ಠಿತ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿ ಸಮಾರಂಭದಲ್ಲಿ ಬೆಳಗಾವಿ ಸುಪುತ್ರರೊಬ್ಬರು ಪಾಲ್ಗೊಳ್ಳುವ ಮೂಲಕ ಜಿಲ್ಲೆಯ ಕೀರ್ತಿ ಹೆಚ್ಚಿಸಿದ್ದಾರೆ. ಪ್ಯಾರಾಲಿಂಪಿಕ್ ಕಮಿಟಿ ಆಫ್ ಇಂಡಿಯಾದ ಪ್ರಧಾನ ಕಾರ್ಯದರ್ಶಿ ಜಯವಂತ್ ಹಮ್ಮಣ್ಣವರ್ ಅವರು ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿದ್ದಾರೆ.

ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಉಪಸ್ಥಿತಿಯಲ್ಲಿ ನಡೆದ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿ ಸಮಾರಂಭದಲ್ಲಿ, ಬೆಳಗಾವಿಯ ಬಸವನ ಕುಡಚಿ ಮೂಲದವರಾದ ಪ್ಯಾರಾಲಿಂಪಿಕ್ ಕಮಿಟಿ ಆಫ್ ಇಂಡಿಯಾ ಪ್ರಧಾನ ಕಾರ್ಯದರ್ಶಿ ಜಯವಂತ್ ಗುಂಡು ಹಮ್ಮಣ್ಣವರ್ ಗೌರವಾನ್ವಿತ ಅತಿಥಿಯಾಗಿ ಪಾಲ್ಗೊಂಡು ಬೆಳಗಾವಿಯ ಹಿರಿಮೆ ಹೆಚ್ಚಿಸಿದ್ದಾರೆ.

ಈ ವೇಳೆ ಪಿಸಿಐ ಅಧ್ಯಕ್ಷ ದೇವೇಂದ್ರ ಝಝರಿಯಾ ಮತ್ತು ಜಯವಂತ್ ಹಮ್ಮಣ್ಣವರ್ ಅವರು, ಕ್ರೀಡಾ ಸಾಧಕರನ್ನು ಅಭಿನಂದಿಸಿದರು.

ಸಮಾರಂಭದಲ್ಲಿ ಪ್ಯಾರಾ ಕ್ರೀಡಾಪಟುಗಳಾದ ರುದ್ರಾಂಶ್ ಖಂಡೇಲ್ವಾಲ್ ಮತ್ತು ಏಕ್ತಾ ಭಯಾನ್ ಅವರಿಗೆ ಅರ್ಜುನ ಪ್ರಶಸ್ತಿ ಹಾಗೂ ಸ್ಕಲ್ಜಾಂಗ್ ರಿಗ್ಜಿನ್ ಅವರಿಗೆ ''ತೆನ್ಸಿಂಗ್ ನಾರ್ಗೆ ರಾಷ್ಟ್ರೀಯ ಸಾಹಸ ಪ್ರಶಸ್ತಿ'' ನೀಡಿ ಗೌರವಿಸಲಾಯಿತು. ದೇಶದ ಅತ್ಯುನ್ನತ ಕ್ರೀಡಾ ವೇದಿಕೆಯಲ್ಲಿ ಬೆಳಗಾವಿಯ ಮಣ್ಣಿನ ಮಗ ಮಹತ್ವದ ಜವಾಬ್ದಾರಿ ನಿರ್ವಹಿಸಿರುವುದಕ್ಕೆ ಜಿಲ್ಲೆಯ ಕ್ರೀಡಾ ಸಂಘಟನೆಗಳು ಹಾಗೂ ನಾಗರಿಕರಿಂದ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ.