ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ಜಿಲ್ಲಾಧ್ಯಕ್ಷರಿಗೆ ಸನ್ಮಾನ

| Published : Mar 21 2024, 01:07 AM IST

ಸಾರಾಂಶ

ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್ ಮಹೇಶ್, ಜಿಲ್ಲಾಧ್ಯಕ್ಷ ನಿರಂಜನ್ ಕುಮಾರ್ ಅವರನ್ನು ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾಧ್ಯಕ್ಷ ಜನದ್ವನಿ ಬಿ ವೆಂಕಟೇಶ್ ಸನ್ಮಾನಿಸಿದರು.

ಕನ್ನಡಪ್ರಭ ವಾರ್ತೆ ಹನೂರು

ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್ ಮಹೇಶ್, ಜಿಲ್ಲಾಧ್ಯಕ್ಷ ನಿರಂಜನ್ ಕುಮಾರ್ ಅವರನ್ನು ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾಧ್ಯಕ್ಷ ಜನದ್ವನಿ ಬಿ ವೆಂಕಟೇಶ್ ಸನ್ಮಾನಿಸಿದರು.ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ ಎನ್ ಮಹೇಶ್ ಹಾಗೂ ಚಾಮರಾಜನಗರ ಜಿಲ್ಲಾಧ್ಯಕ್ಷ ನಿರಂಜನ್ ಕುಮಾರ್ ಹನೂರು ಪಟ್ಟಣದ ಜನಧ್ವನಿ ಬಿ ವೆಂಕಟೇಶ್ ಕಚೇರಿಗೆ ಮೊದಲ ಬಾರಿಗೆ ಆಗಮಿಸಿದ ಹಿನ್ನೆಲೆ ಅವರನ್ನು ಬೃಹತ್ ಹೂವಿನ ಮಾಲೆ ಹಾಕುವ ಮೂಲಕ ಸ್ವಾಗತ ಕೋರಿದರು.ಒಬಿಸಿ ಜಿಲ್ಲಾಧ್ಯಕ್ಷ ಜನದ್ವನಿ ಬಿ ವೆಂಕಟೇಶ್ ಮಾತನಾಡಿ, ಪ್ರಧಾನಮಂತ್ರಿ ನರೇಂದ್ರ ಮೋದಿ ದೇಶದ ಎಲ್ಲಾ ವರ್ಗದವರಿಗೂ ಒಳ್ಳೆಯ ಯೋಜನೆಗಳನ್ನು ರೂಪಿಸಿ ಮನೆಮನೆಗೂ ತಲುಪಿಸಿದ್ದಾರೆ. ಕಳೆದ 10 ವರ್ಷದಲ್ಲಿ ಭ್ರಷ್ಟಾಚಾರ ರಹಿತ ಆಡಳಿತ ನಡೆಸುವ ಮೂಲಕ ವಿಶ್ವದಲ್ಲಿಯೇ ಜನಮನ್ನಣೆ ಗಳಿಸಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿಯೂ ಬಿಜೆಪಿ 400 ಸ್ಥಾನಗಳನ್ನು ಗೆಲ್ಲುವ ಮೂಲಕ ನರೇಂದ್ರ ಮೋದಿ 3ನೇ ಬಾರಿಗೆ ದೇಶದ ಪ್ರಧಾನಮಂತ್ರಿಗಳಾಗಿದ್ದಾರೆ ಎಂದರು.ಕಳೆದ ಬಾರಿ ರಾಜ್ಯದಲ್ಲಿ ಬಿಜೆಪಿ ಪಕ್ಷದ 25 ಅಭ್ಯರ್ಥಿಗಳು ಜಯಗಳಿಸುವ ಮೂಲಕ ನರೇಂದ್ರ ಮೋದಿ ಕೈ ಬಲಪಡಿಸಿದ್ದರು. ಈ ಬಾರಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಮೈತ್ರಿ ಮಾಡಿಕೊಂಡಿದ್ದು ರಾಜ್ಯದ 28 ಸ್ಥಾನಗಳಲ್ಲಿಯೂ ಭರ್ಜರಿ ಜಯಗಳಿಸುವ ಮೂಲಕ ಎಂದರು.ಚಾಮರಾಜನಗರ ಮೀಸಲು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಬಾಲರಾಜ್ ಶಾಸಕರಾಗಿ 5 ವರ್ಷಗಳ ಕಾಲ ಉತ್ತಮ ಸೇವೆ ಸಲ್ಲಿಸಿದ್ದಾರೆ. ಕಳೆದ ಬಾರಿಯೂ ಚಾಮರಾಜನಗರ ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಸಂಸದ ಬಿ ಶ್ರೀನಿವಾಸ್ ಪ್ರಸಾದ್‌ ಭರ್ಜರಿ ಜಯಗಳಿಸಿದ್ದರು. ಅದರಂತೆ ಈ ಬಾರಿಯೂ ಎಲ್ಲಾ ಪಕ್ಷದ ಹಿರಿಯ ನಾಯಕರ ಮಾರ್ಗದರ್ಶನದಲ್ಲಿ ಪಕ್ಷದ ಅಭ್ಯರ್ಥಿ ಬಾಲರಾಜು ಅವರನ್ನು ಜಯಶೀಲರನ್ನಾಗಿ ಮಾಡಲು ಹಗಲಿರುಳು ಶ್ರಮಿಸುವುದಾಗಿ ತಿಳಿಸಿದರು.ಈ ವೇಳೆ ಲೋಕಸಭಾ ಚುನಾವಣಾ ಪ್ರಭಾರಿ ಪ್ರಣೇಶ್, ಮಾಜಿ ಶಾಸಕ ಪ್ರೊ ಮಲ್ಲಿಕಾರ್ಜುನಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೊನ್ನೂರು ಮಹಾದೇವಸ್ವಾಮಿ, ಮೂಡ್ನಕೂಡು ಪ್ರಕಾಶ್, ಒಬಿಸಿ ಜಿಲ್ಲಾ ಉಪಾಧ್ಯಕ್ಷ ಮಾದೇಶಯ್ಯ, ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಚಿರಂಜೀವಿ, ಹನೂರು ಮಂಡಲ ಪ್ರಧಾನ ಕಾರ್ಯದರ್ಶಿ ಧನಗೆರೆ ಮಹೇಶ್, ತೆಳ್ಳನೂರು ವಿಜಯ್ ಮತ್ತಿತರರಿದ್ದರು.