ಸಚಿವ ಎಚ್.ಕೆ. ಪಾಟೀಲ ಭೇಟಿಯಾಗಿ ಸಾಂತ್ವನ ಹೇಳಿದರು. ಸರ್ಕಾರ ನಿಮ್ಮೊಂದಿಗೆ ಇದೆ ಧೈರ್ಯವಾಗಿರಿ ಎಂದು ಅಭಯ ನೀಡಿದರು. ಅಲ್ಲದೇ, ಇದೊಂದು ನಾಗರಿಕ ಸಮಾಜ ತಲೆತಗ್ಗಿಸುವ ಘಟನೆ. ಇಂಥ ಘಟನೆ ನಡೆಯಬಾರದು ಎಂದರು.
ಹುಬ್ಬಳ್ಳಿ:
ಮರ್ಯಾದಾ ಹತ್ಯೆ ಪ್ರಕರಣದಲ್ಲಿ ಹಲ್ಲೆಗೊಳಗಾಗಿ ಗಾಯಗೊಂಡಿರುವ ಯುವಕನ ಕುಟುಂಬಸ್ಥರನ್ನು ಕಾನೂನು ಮತ್ತು ಸಂಸದೀಯ ಸಚಿವ ಎಚ್.ಕೆ. ಪಾಟೀಲ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.ಸಂಜೆ ಸಚಿವ ಎಚ್.ಕೆ. ಪಾಟೀಲ ಭೇಟಿಯಾಗಿ ಸಾಂತ್ವನ ಹೇಳಿದರು. ಸರ್ಕಾರ ನಿಮ್ಮೊಂದಿಗೆ ಇದೆ ಧೈರ್ಯವಾಗಿರಿ ಎಂದು ಅಭಯ ನೀಡಿದರು. ಅಲ್ಲದೇ, ಇದೊಂದು ನಾಗರಿಕ ಸಮಾಜ ತಲೆತಗ್ಗಿಸುವ ಘಟನೆ. ಇಂಥ ಘಟನೆ ನಡೆಯಬಾರದು ಎಂದರು.
ಸಂತ್ರಸ್ತರಿಗೆ ಸರ್ಕಾರ ಭದ್ರತೆ ನೀಡಲು ಬದ್ಧವಾಗಿದೆ. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತಿದೆ. ಘಟನೆ ನಡೆಯುತ್ತಿದ್ದಂತೆ ಜಿಲ್ಲಾಡಳಿತ ಉತ್ತಮವಾಗಿ ಸ್ಪಂದಿಸಿದೆ ಎಂದರು. ಇದೇ ವೇಳೆ ದಲಿತ ಸಂಘಟನೆಗಳ ಮುಖಂಡರು ಸಚಿವರಿಗೆ ಮನವಿ ಸಲ್ಲಿಸಿದರು. ಈ ವೇಳೆ ಮಾಜಿ ಸಚಿವ ಎ.ಎಂ. ಹಿಂಡಸಗೇರಿ, ಅನಿಲಕುಮಾರ ಪಾಟೀಲ ಸೇರಿದಂತೆ ಹಲವರಿದ್ದರು.ಘೋರಕೃತ್ಯ:
ಈ ನಡುವೆ ಇದಕ್ಕೂ ಮುನ್ನ ವಿಪ ಸಭಾಪತಿ ಬಸವರಾಜ ಹೊರಟ್ಟಿ ಭೇಟಿ ನೀಡಿ, ಇದೊಂದು ಘೋರಕೃತ್ಯ. ಇಂಥ ಘಟನೆಗಳಿಗೆ ಕ್ಷಮೆ ಸಲ್ಲದು. ನಾಗರಿಕ ಸಮಾಜವೇ ತಲೆತಗ್ಗಿಸುವಂಥ ಘಟನೆಯಾಗಿದೆ ಎಂದರು. ಸಂತ್ರಸ್ತರಿಗೆ ಸರ್ಕಾರ ಪರಿಹಾರ ನೀಡಬೇಕು. ಸೂಕ್ತ ಭದ್ರತೆ ನೀಡಬೇಕು. ಈ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.ರಕ್ತ ಹರಿಸುವುದು ಸಂಸ್ಕೃತಿಯಲ್ಲ:
ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ಅತ್ಯಂತ ಅಮಾನವೀಯ ಕೃತ್ಯ. ಪ್ರೀತಿ-ವಿಶ್ವಾಸದ ಹೆಸರಿನಲ್ಲಿ ರಕ್ತ ಹರಿಸುವುದು ಸಂಸ್ಕೃತಿಯಲ್ಲ. ಇಂಥ ಘಟನೆ ಮರುಕಳಿಸದಂತೆ ಸರ್ಕಾರ ವಿಶೇಷ ಆಸಕ್ತಿ ವಹಿಸಿ ಮರ್ಯಾದಾ ಹತ್ಯೆ ತಡೆಗೆ ಕಟ್ಟುನಿಟ್ಟಾದ ಹೊಸ ಕಾನೂನನ್ನು ಜಾರಿಗೊಳಿಸಬೇಕು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾದಾಗ ಮಾತ್ರ ಇಂಥ ಮನಸ್ಥಿತಿ ಇರುವವರಿಗೆ ಭಯ ಬರುತ್ತದೆ ಎಂದರು.ಗಾಯಗೊಂಡವರು ಆರ್ಥಿಕವಾಗಿ ಹಾಗೂ ಮಾನಸಿಕವಾಗಿ ಜರ್ಜರಿತರಾಗಿದ್ದಾರೆ. ಸರ್ಕಾರ ಅವರಿಗೆ ಗರಿಷ್ಠ ಪರಿಹಾರ ನೀಡುವುದರ ಜತೆಗೆ, ಅವರಿಗೆ ಸಂಪೂರ್ಣ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿದರು.