ಕ್ರೀಡೆ ಮಾನಸಿಕ ಒತ್ತಡ ನಿವಾರಣೆಗೆ ಉತ್ತಮ: ಕೆ.ವಿ. ಪ್ರಭಾಕರ್

| Published : Jan 07 2024, 01:30 AM IST

ಸಾರಾಂಶ

ಮಂಗಳೂರಿನ ಅಡ್ಯಾರಿನಲ್ಲಿ ನಡೆಯುತ್ತಿರುವ ಪತ್ರಕರ್ತರ ರಾಜ್ಯಮಟ್ಟ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಕ್ರಿಕೆಟ್‌ ತಂಡಗಳಿಗೆ ಸನ್ಮಾನ ನಡೆಯಿತು.

ಕನ್ನಡಪ್ರಭ ವಾರ್ತೆ ಮಂಗಳೂರು

ಕ್ರೀಡೆ ಮಾನಸಿಕ ಒತ್ತಡ ನಿವಾರಣೆಗೆ ಉತ್ತಮ ಹವ್ಯಾಸ ಎಂದು ಮುಖ್ಯಮಂತ್ರಿಯ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಹೇಳಿದ್ದಾರೆ.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ,ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಅಡ್ಯಾರ್ ಸಹ್ಯಾದ್ರಿ ಕ್ರೀಡಾಂಗಣದಲ್ಲಿ ಕ್ಯಾ.ಪ್ರಾಂಜಲ್ ಗೌರವಾರ್ಥ ನಡೆಯುತ್ತಿರುವ ‘ಕೆಯುಡಬ್ಲ್ಯುಜೆ ಬ್ರ್ಯಾಂಡ್ ಮಂಗಳೂರು ರೋಹನ್ ಕಪ್ ಕ್ರಿಕೆಟ್’ ಪಂದ್ಯಾವಳಿಯ ಲೀಗ್ ಪಂದ್ಯದ ಸಂದರ್ಭದಲ್ಲಿ ಕ್ರಿಕೆಟ್ ತಂಡಗಳನ್ನು ಸನ್ಮಾನಿಸಿ ಅವರು ಮಾತಡಿದರು.

ಮುಂದಿನ ತಿಂಗಳು ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಕ್ರಿಕೇಟ್ ಪಂದ್ಯಾವಳಿಯನ್ನು ಹಮ್ಮಿಕೊಳ್ಳಲು ಎಲ್ಲ ರೀತಿಯ ಸಹಕಾರ ನೀಡುವುದಾಗಿ ಅವರು ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಗ್ರಾಮ ವಾಸ್ತವ್ಯದಂತಹ ಸಮಾಜಮುಖಿ ಚಟುವಟಿಕೆಗಳ ಮೂಲಕ ರಾಜ್ಯಕ್ಕೆ ಮಾದರಿಯಾಗಿದೆ ಎಂದು ಶ್ಲಾಘಿಸಿದರು.

ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ರಾಜ್ಯ ಸಮಿತಿಯ ಪದಾಧಿಕಾರಿಗಳಾದ ಟೆಲೆಕ್ಸ್ ರವಿ, ಉಮೇಶ್ ಮಾರ್ಪಳ್ಳಿ, ಇಬ್ರಾಹಿಂ ಅಡ್ಕಸ್ಥಳ, ಗಿರೀಶ್ ಕೋಟೆ, ವಾರ್ತಾಧಿಕಾರಿ ಖಾದರ್ ಶಾ, ಮಂಗಳೂರು ಪೊಲೀಸ್ ಆಯುಕ್ತಾಲಯದ ಎಸಿಪಿ ಮಹೇಶ್ ಕುಮಾರ್, ಅತಿಥಿಗಳಾದ ಗಿರೀಶ್ ಕೋಟೆ, ಮಹಾರಾಷ್ಟ್ರ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರೋನ್ಸ್ ಬಂಟ್ವಾಳ್, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಉಪಾಧ್ಯಕ್ಷ ಭಾಸ್ಕರ್ ರೈ ಕಟ್ಟ, ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್, ಪದಾಧಿಕಾರಿಗಳಾದ ವಿಜಯ ಕೋಟ್ಯಾನ್, ರಾಜೇಶ್ ದಡ್ಡಂಗಡಿ, ಸಂಘಟಕರಾದ ವಿಲ್ಫ್ರೆಡ್ ಡಿಸೋಜ, ಆರಿಫ್ ಕೆ, ರಾಜೇಶ್ ಪೂಜಾರಿ, ಸಂದೀಪ್ ವಾಗ್ಲೆ ಮೊದಲಾದವರು ಇದ್ದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಕೆ.ವಿ. ಪ್ರಭಾಕರ್ ಅವರನ್ನು ಪಂದ್ಯಾವಳಿಯ ಸಂಘಟಕರ ಪರವಾಗಿ ಗೌರವಿಸಿದರು.