ಆದಿಜಾಂಬವ ನಿಗಮದ ನೂತನ ಅಧ್ಯಕ್ಷರಿ ಜಿ.ಎಸ್.ಮಂಜುನಾಥಗೆ ಸನ್ಮಾನ

| Published : Jun 29 2024, 12:41 AM IST

ಸಾರಾಂಶ

ಚಳ್ಳಕೆರೆ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಆದಿಜಾಂಬವ ಅಭಿವೃದ್ದಿ ನಿಗಮದ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಜಿ.ಎಸ್.ಮಂಜುನಾಥರವರನ್ನು ಅಭಿನಂದಿಸಿದರು.

ಕನ್ನಡಪ್ರಭ ವಾರ್ತೆ ಚಳ್ಳಕೆರೆ

ರಾಜ್ಯ ಆದಿಜಾಂಬವ ಜನಾಂಗದ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಜಿ.ಎಸ್.ಮಂಜುನಾಥ ನಿಗಮದ ಸರ್ವತೋಮುಖ ಅಭಿವೃದ್ಧಿಗೆ ಶಕ್ತಿಮೀರಿ ಶ್ರಮಿಸಲಿ ಎಂದು ಶುಭಹಾರೈಸುವುದಾಗಿ ಮಾಜಿ ಸಚಿವ ಎಚ್.ಆಂಜನೇಯ ತಿಳಿಸಿದರು.

ಕ್ಷೇತ್ರದ ಶಾಸಕ ಟಿ.ರಘುಮೂರ್ತಿ, ಹೊಸದುರ್ಗ ಶಾಸಕ ಬಿ.ಜಿ.ಗೋವಿಂದಪ್ಪ, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಹಾಗೂ ಸಮಾಜದ ಹಲವಾರು ಮುಖಂಡರೊಡನೆ ಬೆಂಗಳೂರಿನ ಆದಿಜಾಂಬವ ಅಭಿವೃದ್ಧಿ ಕಚೇರಿಯಲ್ಲಿ ನೂತನ ಅಧ್ಯಕ್ಷರಾಗಿ ಪದಗ್ರಹಣ ಮಾಡಿದ ಜಿ.ಎಸ್.ಮಂಜುನಾಥರವರನ್ನು ಅಭಿನಂದಿಸಿ ಮಾತನಾಡಿ, ಚಿತ್ರದುರ್ಗ ಜಿಲ್ಲೆಯಲ್ಲಿ ಆದಿಜಾಂಬವ ಸಮುದಾಯ ಹೆಚ್ಚಿದ್ದು ಜಿಲ್ಲೆ ಸೇರಿದಂತೆ ರಾಜ್ಯದ ಜನಾಂಗದ ಅಭಿವೃದ್ಧಿಗೆ ಒತ್ತು ನೀಡಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿ ಪಕ್ಷದ ಶಕ್ತಿ ಹೆಚ್ಚಿಸಬೇಕೆಂದರು. ಸಣ್ಣಕೈಗಾರಿಕೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ, ಶಾಸಕ ಟಿ.ರಘುಮೂರ್ತಿ, ಜಿ.ಎಸ್.ಮಂಜುನಾಥ ಪಕ್ಷದ ಹಲವಾರು ಜವಾಬ್ದಾರಿ ಹೊತ್ತು ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದಾರೆ. ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿರುವುದು ಹೆಮ್ಮೆಯ ವಿಷಯವಾಗಿದೆ. ಜನಾಂಗದ ಅಭಿವೃದ್ಧಿಗೆ ಕೈಗೊಳ್ಳುವ ಎಲ್ಲಾ ಕೆಲಸ ಕಾರ್ಯಗಳಿಗೆ ಸಹಕಾರ ನೀಡುವ ಭರವಸೆ ನೀಡಿದರು.

ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಶಾಸಕ ಬಿ.ಟಿ.ಗೋವಿಂದಪ್ಪ ಮಾತನಾಡಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ನಿಗಮದ ನೂತನ ಅಧ್ಯಕ್ಷ ಜಿ.ಎಸ್.ಮಂಜುನಾಥ, ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಪಕ್ಷ ನಾಡಿನ ದಲಿತ ಸಮುದಾಯದ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಆದರೆ, ಸಮುದಾಯದ ಕೆಲವರು ಮಾತ್ರ ಅಸಮಧಾನ ವ್ಯಕ್ತಪಡಿಸುತ್ತಾರೆ. ಕಾಂಗ್ರೆಸ್ ಪಕ್ಷವು ಡಾ.ಅಂಬೇಡ್ಕರ್, ಬಾಬು ಜಗಜೀವನ ರಾಮ್‌ ಮಾರ್ಗದರ್ಶನದಲ್ಲಿ ಮುನ್ನಡೆಯುತ್ತಿದೆ ಎಂದರು.

ಜಿಲ್ಲಾ ಕೆಪಿಸಿಸಿ ಅಧ್ಯಕ್ಷ ಎಂ.ಕೆ.ತಾಜ್‌ಪೀರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ವೀರಭದ್ರಪ್ಪ, ಜಿಲ್ಲಾ ಕೆಡಿಪಿ ನಾಮಿನಿರ್ದೇಶನ ಸದಸ್ಯ ಒ.ರಂಗಸ್ವಾಮಿ ಮುಂತಾದವರು ಇದ್ದರು.