ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮನೆಯಂಗಳದಲ್ಲಿ ಮನದುಂಬಿ ಕಾರ್ಯಕ್ರಮದಡಿ ಹಿರಿಯ ಪತ್ರಕರ್ತ, ಸಂಘದ ಮಾಜಿ ಅಧ್ಯಕ್ಷ ಚಿ.ನಾ.ಸೋಮೇಶ್ ಅವರನ್ನು ಸನ್ಮಾನಿಸಲಾಯಿತು.
ಕನ್ನಡಪ್ರಭ ವಾರ್ತೆ ಮಡಿಕೇರಿ
ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮನೆಯಂಗಳದಲ್ಲಿ ಮನದುಂಬಿ ಕಾರ್ಯಕ್ರಮದಡಿ ಹಿರಿಯ ಪತ್ರಕರ್ತ, ಸಂಘದ ಮಾಜಿ ಅಧ್ಯಕ್ಷ ಚಿ.ನಾ.ಸೋಮೇಶ್ ಅವರನ್ನು ಸನ್ಮಾನಿಸಲಾಯಿತು.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಬಾಚರಣಿಯಂಡ ಅನು ಕಾರ್ಯಪ್ಪ ನೇತೃತ್ವದಲ್ಲಿ ಸೋಮವಾರಪೇಟೆ ತಾಲೂಕಿನ ಜಂಬೂರು ಗ್ರಾಮದಲ್ಲಿರುವ ಸೋಮೇಶ್ ಅವರ ನಿವಾಸದಲ್ಲಿ ಸನ್ಮಾನಿಸಲಾಯಿತು.
ಸಂಘದ ಅಧ್ಯಕ್ಷ ಬಾಚರಣಿಯಂಡ ಅನು ಕಾರ್ಯಪ್ಪ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕಿ ಸವಿತಾ ರೈ ಮಾತನಾಡಿ, ಪ್ರೆಸ್ ಕ್ಲಬ್ ಅಧ್ಯಕ್ಷ ಬೊಳ್ಳಜಿರ ಅಯ್ಯಪ್ಪ ಮಾತನಾಡಿದರು.ಸಂಘದ ಉಪಾಧ್ಯಕ್ಷ ನವೀನ್ ಸುವರ್ಣ, ಸೋಮವಾರಪೇಟೆ ತಾಲೂಕು ಸಂಘದ ಅಧ್ಯಕ್ಷ ವಿಶ್ವಕುಮಾರ್, ನಿರ್ದೇಶಕರಾದ ಶಿವಕುಮಾರ್, ಸದಸ್ಯರಾದ ಮಂಜು ಸುವರ್ಣ, ಕೆ.ಎಂ.ವಿನೋದ್, ಸುರ್ಜಿತ್ ಉಪಸ್ಥಿತರಿದ್ದರು.