ಮುದ್ದೇಬಿಹಾಳ: ಕೇಸಾಪೂರ ಸಿದ್ದಾರ್ಥ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿನಿ ತಾಲೂಕಿನ ಹುನಕುಂಟಿ ಗ್ರಾಮದ ಸಾನ್ವಿ.ಎ.ಜಗಂಡಭಾವಿ ಅವರು ಭರತನಾಟ್ಯ ಕ್ಷೇತ್ರದಲ್ಲಿ ತೋರಿದ ಪ್ರತಿಭೆ ಹಾಗೂ ಸಾಧನೆಗೆ ಪ್ರತಿಷ್ಠಿತ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಯಿತು
ಮುದ್ದೇಬಿಹಾಳ: ಕೇಸಾಪೂರ ಸಿದ್ದಾರ್ಥ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿನಿ ತಾಲೂಕಿನ ಹುನಕುಂಟಿ ಗ್ರಾಮದ ಸಾನ್ವಿ.ಎ.ಜಗಂಡಭಾವಿ ಅವರು ಭರತನಾಟ್ಯ ಕ್ಷೇತ್ರದಲ್ಲಿ ತೋರಿದ ಪ್ರತಿಭೆ ಹಾಗೂ ಸಾಧನೆಗೆ ಪ್ರತಿಷ್ಠಿತ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಯಿತು. ಏಷ್ಯಾ ಇಂಟರ್ನ್ಯಾಷನಲ್ ಕಲ್ಚರಲ್ ಅಕಾಡೆಮಿ (ಏಷ್ಯಾ ಇಂಟರ್ನ್ಯಾಷನಲ್ ಕಲ್ಚರ್ ರಿಸರ್ಚ್ ಯೂನಿವರ್ಸಿಟಿ)ಯಿಂದ ನೀಡಲಾಗುವ ಗೌರವ ಡಾಕ್ಟರೇಟ್ ಪದವಿಯನ್ನು ಬೆಂಗಳೂರು ಬಳಿಯ ಹೊಸೂರಿನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಗಣ್ಯರ ಸಮ್ಮುಖದಲ್ಲಿ ಸಾನ್ವಿ ಅವರಿಗೆ ಪ್ರದಾನ ಮಾಡಲಾಯಿತು. ಪ್ರಶಸ್ತಿಯೊಂದಿಗೆ ಪ್ರಮಾಣಪತ್ರ ಹಾಗೂ ಸ್ಮರಣಿಕೆ ನೀಡಲಾಗಿದೆ.ಭರತನಾಟ್ಯ ಕಲೆಯ ಮೂಲಕ ಸಾಂಸ್ಕೃತಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಸಾನ್ವಿ ಅವರ ಸಾಧನೆಯನ್ನು ಪರಿಗಣಿಸಿ ಈ ಗೌರವ ನೀಡಲಾಗಿದೆ. ಚಿಕ್ಕ ವಯಸ್ಸಿನಲ್ಲಿಯೇ ಕಲಾ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿ ಗೌರವ ಡಾಕ್ಟರೇಟ್ ಪಡೆದಿರುವುದು ಹುನಕುಂಟಿ ಗ್ರಾಮಕ್ಕೆ ಹಾಗೂ ಶಾಲೆಗೆ ಹೆಮ್ಮೆಯ ಸಂಗತಿಯಾಗಿದೆ.ಈ ಸಾಧನೆಗೆ ಸಿದ್ದಾರ್ಥ ಪಬ್ಲಿಕ್ ಸ್ಕೂಲ್ನ ಅಧ್ಯಕ್ಷೆ ಸರಸ್ವತಿ ಖಾನಾಪೂರ, ಪ್ರಾಚಾರ್ಯ ದಾಸಪ್ಪ.ಎಸ್, ಚಿಂಚೋಳಿ ತಾಲೂಕಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು, ತಾಲೂಕಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ. ಮುಂದಿನ ದಿನಗಳಲ್ಲಿಯೂ ಭರತನಾಟ್ಯ ಕ್ಷೇತ್ರದಲ್ಲಿ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಶುಭ ಹಾರೈಸಿದ್ದಾರೆ.-------