ನೆಲಮಂಗಲ ತಾಲೂಕಿನ ಮೈಲನಹಳ್ಳಿ ಗ್ರಾಮದವರಾದ ಮಲ್ಲಿಕಾರ್ಜುನಯ್ಯ ಅವರ ಶೈಕ್ಷಣಿಕ ಹಾಗೂ ಸಾಮಾಜಿಕ ಸೇವೆಯನ್ನು ಪರಿಗಣಿಸಿದ ಯೂನಿವರ್ಸ್ ಕಲ್ಟರ್ ಆ್ಯಂಡ್ ಎಜುಕೇಷನ್ ಪ್ರೊಟೆಕ್ಷನ್ ಕಮಿಷನ್ ಇಂಡಿಯಾ ಸಂಸ್ಥೆಯು ಅಕ್ಟೋಬರ್ 12ರಂದು ಬೆಂಗಳೂರಿನ ಜೆ.ಎಸ್.ಎಸ್. ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗೌರವ ಡಾಕ್ಟರೇಟ್ ನೀಡಿ ಸನ್ಮಾನಿಸಿದೆ.
ದಾಬಸ್ಪೇಟೆ: ಶೈಕ್ಷಣಿಕ ಕ್ಷೇತ್ರ ಸೇರಿ ಕಲೆ, ಸಾಹಿತ್ಯ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಕಳೆದ 38ವರ್ಷಗಳಿಂದ ಸಲ್ಲಿಸುತ್ತಿರುವ ನಿರಂತರ ಸೇವೆಯನ್ನು ಗುರುತಿಸಿ ಮಾಚೋನಾಯಕನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕ ಮಲ್ಲಿಕಾರ್ಜುನಯ್ಯ ಎಂ.ಆರ್. ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗಿದೆ.
ನೆಲಮಂಗಲ ತಾಲೂಕಿನ ಮೈಲನಹಳ್ಳಿ ಗ್ರಾಮದವರಾದ ಮಲ್ಲಿಕಾರ್ಜುನಯ್ಯ ಅವರ ಶೈಕ್ಷಣಿಕ ಹಾಗೂ ಸಾಮಾಜಿಕ ಸೇವೆಯನ್ನು ಪರಿಗಣಿಸಿದ ಯೂನಿವರ್ಸ್ ಕಲ್ಟರ್ ಆ್ಯಂಡ್ ಎಜುಕೇಷನ್ ಪ್ರೊಟೆಕ್ಷನ್ ಕಮಿಷನ್ ಇಂಡಿಯಾ ಸಂಸ್ಥೆಯು ಅಕ್ಟೋಬರ್ 12ರಂದು ಬೆಂಗಳೂರಿನ ಜೆ.ಎಸ್.ಎಸ್. ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗೌರವ ಡಾಕ್ಟರೇಟ್ ನೀಡಿ ಸನ್ಮಾನಿಸಿದೆ.ಸುಮಾರು ನಾಲ್ಕು ದಶಕಗಳ ಸುದೀರ್ಘ ಸೇವಾವಧಿಯಲ್ಲಿ ಶಿಕ್ಷಣದ ಜೊತೆಗೆ ಕಲೆ, ಸಾಹಿತ್ಯ ಹಾಗೂ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಅವರು, ತಮ್ಮ ವೃತ್ತಿಪರ ಸೇವೆಯ ಮೂಲಕ ಗುರುತಿಸಿಕೊಂಡಿದ್ದಾರೆ. ಗೌರವ ಡಾಕ್ಟರೇಟ್ ಲಭಿಸಿರುವ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ನೂರಾರು ಶಿಕ್ಷಕರು ಹಾಗೂ ವಿದ್ಯಾರ್ಥಿ ಮಿತ್ರರು ಮಲ್ಲಿಕಾರ್ಜುನಯ್ಯ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.