ದೇವರಾಜ ಅರಸು ಉತ್ತಮ ಆಡಳಿತಗಾರರು

| Published : Aug 21 2025, 01:00 AM IST

ಸಾರಾಂಶ

ಅರಸು ಅವರು ದೂರದೃಷ್ಠಿಯ ಆಡಳಿತ ಮತ್ತು ಸಮಾಜಿಕ ನ್ಯಾಯ ಬದ್ಧತೆಯಿಂದ ಜನಪ್ರಿಯರಾಗಿದ್ದರು

ಫೋಟೋ- 20ಎಂವೈಎಸ್1ಮೈಸೂರಿನ ಕಲಾಮಂದಿರದಲ್ಲಿ ಜಿಲ್ಲಾಡಳಿತವು ಬುಧವಾರ ಆಯೋಜಿಸಿದ್ದ ಡಿ. ದೇವರಾಜ ಅರಸು ಅವರ 110ನೇ ಜನ್ಮ ದಿನಾಚರಣೆಯನ್ನು ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ ಉದ್ಘಾಟಿಸಿದರು.20ಎಂವೈಎಸ್2ಮೈಸೂರಿನ ಕಲಾಮಂದಿರದಲ್ಲಿ ಜಿಲ್ಲಾಡಳಿತವು ಬುಧವಾರ ಆಯೋಜಿಸಿದ್ದ ಡಿ. ದೇವರಾಜ ಅರಸು ಅವರ 110ನೇ ಜನ್ಮ ದಿನಾಚರಣೆಯಲ್ಲಿ ಅವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ ಪುಷ್ಪಾರ್ಚನೆ ಮಾಡಿದರು.----ಕನ್ನಡಪ್ರಭ ವಾರ್ತೆ ಮೈಸೂರುಕರ್ನಾಟಕ ಕಂಡ ಒಬ್ಬ ಮಹಾನ್ ವ್ಯಕ್ತಿ ಹಾಗೂ ಉತ್ತಮ ಆಡಳಿತಗಾರ ಡಿ. ದೇವರಾಜ ಅರಸು ಅವರ ವ್ಯಕ್ತಿತ್ವ, ಕೊಡುಗೆ, ಕಾರ್ಯಕ್ರಮಗಳು ನಿತ್ಯ ಹಸಿರಾದಂತಹವು ಎಂದು ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಜಿಲ್ಲಾಧ್ಯಕ್ಷ ಹಾಗೂ ಡಿ. ದೇವರಾಜ ಅರಸು ಪ್ರತಿಮೆ ಪ್ರತಿಷ್ಠಾನ ಸಮಿತಿಯ ಗೌರವ ಅಧ್ಯಕ್ಷ ಎಂ. ಚಂದ್ರಶೇಖರ್ ತಿಳಿಸಿದರು.ನಗರದ ಕಲಾಮಂದಿರದಲ್ಲಿ ಜಿಲ್ಲಾಡಳಿತ, ಜಿಪಂ, ನಗರ ಪಾಲಿಕೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಂಯುಕ್ತವಾಗಿ ಬುಧವಾರ ಆಯೋಜಿಸಿದ್ದ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ 110ನೇ ಜನ್ಮ ದಿನಾಚರಣೆಯಲ್ಲಿ ಅವರು ಮಾತನಾಡಿದರು.ಅರಸು ಕರ್ನಾಟಕ ರಾಜಕೀಯ ಇತಿಹಾಸದಲ್ಲಿ ಒಂದು ಮೈಲಿಗಲ್ಲಾಗಿ ತಮ್ಮ ಅಧಿಕಾರವನ್ನು ಚಲಾಯಿಸಿದರು. ಎಲ್ಲರೂ ಸಹ ಸ್ಮರಿಸಬಹುದಾದ ಸ್ಮರಣೀಯವಾದ ಎಲ್ಲಾ ಕಾಲಕ್ಕೂ ಶಾಶ್ವತವಾಗಿ ನಿಲ್ಲಬಹುದಾದಂತಹ ಅಧಿಕಾರವನ್ನು ಕೊಟ್ಟಂತಹವರು. ಅರಸು ಮುಖ್ಯಮಂತ್ರಿಯಾಗಿದ್ದಾಗ ಜಾರಿ ಮಾಡಿದಂತಹ ಅನೇಕ ಯೋಜನೆಗಳು ಮತ್ತು ಕಾನೂನುಗಳು ಇಂದಿಗೂ ಪ್ರಸ್ತುತವಾಗಿದೆ ಎಂದರು.ಅರಸು ಅವರು ದೂರದೃಷ್ಠಿಯ ಆಡಳಿತ ಮತ್ತು ಸಮಾಜಿಕ ನ್ಯಾಯ ಬದ್ಧತೆಯಿಂದ ಜನಪ್ರಿಯರಾಗಿದ್ದರು. ಶೋಷಿತರ ಮತ್ತು ತುಳಿತಕ್ಕೆ ಒಳಗಾದ ಜನಾಂಗದ ಧ್ವನಿಯಾಗಿ, ಧ್ವನಿ ಇಲ್ಲದವರಿಗೆ ಧ್ವನಿಯಾಗಿ ನಿಂತಿದ್ದರು. ರಾಜ್ಯದ ಅಭಿವೃದ್ಧಿಗಾಗಿ ನೀಡಿರುವಂತಹ ಕೊಡುಗೆ ಅಪಾರವಾದದ್ದು ಎಂದು ಹೇಳಿದರು.ಈ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಜಿ .ಲಕ್ಷ್ಮೀಕಾಂತ ರೆಡ್ಡಿ ಉದ್ಘಾಟಿಸಿದರು. ಇದೇ ವೇಳೆ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.ಜಿಪಂ ಸಿಇಒ ಎಸ್. ಯುಕೇಶ್ ಕುಮಾರ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ರಾಘವೇಂದ್ರ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಶಿವಕುಮಾರ್, ನಗರ ಪಾಲಿಕೆಯ ಉಪ ಆಯುಕ್ತ ಸೋಮಶೇಖರ್ ಮೊದಲಾದವರು ಇದ್ದರು.----ಬಾಕ್ಸ್...ಜನಪ್ರತಿನಿಧಿಗಳು ಗೈರುಡಿ. ದೇವರಾಜ ಅರಸು ಅವರ ಜನ್ಮ ದಿನಾಚರಣೆಗೆ ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಶಾಸಕರು, ಸಂಸದರು, ಸಚಿವರು ಹಾಗೂ ನಿಗಮ ಮಂಡಳಿ ಅಧ್ಯಕ್ಷರುಗಳು ಗೈರಾಗಿದ್ದರು.ವಿಧಾನಸಭೆ ಕಲಾಪದಲ್ಲಿ ಸಚಿವರು, ಶಾಸಕರು ಪಾಲ್ಗೊಂಡಿದ್ದರಿಂದ ಕಾರ್ಯಕ್ರಮಕ್ಕೆ ಗೈರಾಗಿದ್ದರು. ಹೀಗಾಗಿ, ಜಿಲ್ಲಾಧಿಕಾರಿ ನೇತೃತ್ವದಲ್ಲಿ ಕಾರ್ಯಕ್ರಮ ಜರುಗಿತು.