ಸೆಸ್ಕ್ ಅಭಿಯಂತರಗೆ ಸನ್ಮಾನ ಕಾರ್ಯಕ್ರಮ

| Published : Nov 16 2025, 03:00 AM IST

ಸಾರಾಂಶ

ಸೆಸ್ಕ್‌ ಇಲಾಖೆಯ ಕಾರ್ಯಪಾಲಕ ಅಭಿಯಂತರಾದ ಲೋಕೇಶ್‌ ಅವರನ್ನು ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್‌ ಶೆಟ್ಟಿ ಬಣದ ಪದಾಧಿಕಾರಿಗಳು ಮತ್ತು ನಿವಾಸಿಗಳು ಅಭಿನಂದಿಸಿ ಸನ್ಮಾನಿಸಿದರು.

ಕನ್ನಡಪ್ರಭವಾರ್ತೆ ಸೋಮವಾರಪೇಟೆ

ಸಮೀಪದ ಕಲ್ಕಂದೂರು ಗ್ರಾಮದ ಕಾಲನಿಯಲ್ಲಿ ಅಪಾಯ ಹಾಗು ಅವೈಜ್ಞಾನಿಕವಾಗಿ ಅಳವಡಿಸಿದ್ದ ವಿದ್ಯುತ್ ಮಾರ್ಗವನ್ನು ಮಾರ್ಪಡಿಸಿ, ನಿವಾಸಿಗಳ ಬೇಡಿಕೆಯನ್ನು ಈಡೇರಿಸಿದ ಸೆಸ್ಕ್ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರಾದ ಲೋಕೇಶ್ ಅವರನ್ನು ಕರ್ನಾಟಕ ರಕ್ಷಣಾ ವೇದಿಕೆ- ಪ್ರವೀಣ್ ಶೆಟ್ಟಿ ಬಣದ ಪದಾಧಿಕಾರಿಗಳು ಮತ್ತು ನಿವಾಸಿಗಳು ಮಂಗಳವಾರ ಅಭಿನಂದಿಸಿ ಸನ್ಮಾನಿಸಿದರು.ಈ ಹಿಂದೆ ಅವೈಜ್ಞಾನಿಕವಾಗಿ ಅಳವಡಿಸಲಾಗಿದ್ದ ವಿದ್ಯುತ್ ಕಂಬಗಳನ್ನು ಮಾರ್ಪಡಿಸುವಂತೆ ಹಲವಾರು ಬಾರಿ ಗ್ರಾಮ ಸಭೆಗಳಲ್ಲಿ ಒತ್ತಾಯಿಸಿದ್ದರೂ ಸೆಸ್ಕ್ ಕ್ರಮವಹಿಸಿರಲಿಲ್ಲ. ಕರವೇ ಪದಾಧಿಕಾರಿಗಳು ಇತ್ತೀಚೆಗೆ ಸೆಸ್ಕ್ ಅಧಿಕಾರಿಗೆ ಮನವಿ ಸಲ್ಲಿಸಿದ್ದರು. ತಕ್ಷಣವೇ ಸ್ಪಂದಿಸಿದ ಅಧಿಕಾರಿ ಕಾಲನಿಗೆ ತೆರಳಿ ನಿವಾಸಿಗಳ ಸಮಸ್ಯೆ ಆಲಿಸಿ, ಕೆಲಸ ಮಾಡಿಕೊಟ್ಟಿದ್ದಾರೆ ಎಂದು ಕರವೇ ಜಿಲ್ಲಾಧ್ಯಕ್ಷ ಕೆ.ಎನ್.ದೀಪಕ್ ಹೇಳಿದರು. ಗ್ರಾಮೀಣ ಪ್ರದೇಶದಲ್ಲಿನ ಜನವಸತಿ ಸೇರಿದಂತೆ ಇತರೆಡೆಗಳಲ್ಲಿನ ಅಪಾಯದ ಅಂಚಿನಲ್ಲಿರುವ ವಿದ್ಯುತ್ ಕಂಬಗಳು ವಿದ್ಯುತ್ ತಂತಿಗಳನ್ನು ಮಾರ್ಪಾಡಿಸಿ, ಜನ ಜಾನುವಾರುಗಳ ಪ್ರಾಣ ರಕ್ಷಣೆ ಮಾಡುವ ಜವಾಬ್ದಾರಿ ಇಲಾಖೆ ಮೇಲಿದೆ ಎಂದು ಹೇಳಿದರು. ಸಂಘಟನೆಯ ಜಿಲ್ಲಾ ಯುವ ಘಟಕದ ಅಧ್ಯಕ್ಷ ವಸಂತ್ ಆಚಾರ್ಯ, ಉಪಾಧ್ಯಕ್ಷ ಚಂದ್ರು, ನಗರ ಘಟಕದ ಅಧ್ಯಕ್ಷ ಮಂಜುನಾಥ್, ಕಾರ್ಯದರ್ಶಿ ರವೀಶ್ ಕಲ್ಕಂದೂರು, ಇಬ್ರಾಹಿಂ, ವೆಂಕಟೇಶ್, ಜಗ್ಗನ್ನಾಥ್, ನಿತಿನ್ ಮಿಟ್ಟೂ, ಸಚಿನ್, ಉದಯ, ಆನಂದ್, ನಾಗೇಂದ್ರ ಇದ್ದರು.